ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್  ಮುಂಬೈ ಇಂಡಿಯನ್ಸ್ ಅಲ್ಪಮೊತ್ತಕ್ಕೆ ಕುಸಿಯುವುದನ್ನು ತಡೆದಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ಸ್ಫೋಟಕ ಬ್ಯಾಟಿಂಗ್ ಕಾಣದ ಅಭಿಮಾನಿಗಳು ನಿರಾಶರಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಬ್ಯಾಟಿಂಗ್ ಹೈಲೈಟ್ಸ್ ಇಲ್ಲಿದೆ.

ಮುಂಬೈ(ಏ.23): ಪಂಜಾಬ್ ಕಿಂಗ್ಸ್ ಲೆಕ್ಕಾಚಾರ ಚೆನ್ನಾಗಿ ವರ್ಕೌಟ್ ಆಗಿದೆ. ಮುಂಬೈ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿ ಅಬ್ಬರಕ್ಕೆ ಬ್ರೇಕ್ ಹಾಕಲು ಕೆಎಲ್ ರಾಹುಲ್ ಸೈನ್ಯ ಯಶಸ್ವಿಯಾಗಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಹೋರಾಟದಿಂದ ಮುಂಬೈ 6 ವಿಕೆಟ್ ಕಳೆದುಕೊಂಡು 131 ರನ್ ಸಿಡಿಸಿದೆ.

Add Asianetnews Kannada as a Preferred SourcegooglePreferred

ಆರಂಭದಲ್ಲೇ ಕ್ವಿಂಟನ್ ಡಿಕಾಕ್ ಹಾಗೂ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ನಾಯಕ ರೋಹಿತ್ ಶರ್ಮಾಹಾಗೂ ಸೂರ್ಯಕುುಮಾರ್ ಯಾದವ್ ಜೊತೆಯಾಟದಿಂದ ಮುಂಬೈ ಚೇತರಿಸಿಕೊಂಡಿತು. ಸೂರ್ಯಕುಮಾರ್ 33 ರನ್ ಸಿಡಿಸಿ ಔಟಾದರು.

ಹಾಫ್ ಸೆಂಚುರಿ ಸಿಡಿಸಿದ ರೋಹಿತ್ ಶರ್ಮಾ ರನ್ ವೇಗ ಹೆಚ್ಚಿಸೋ ಪ್ರಯತ್ನ ಮಾಡಿದರು. ಆದರೆ ರೋಹಿತ್ 63 ರನ್ ಸಿಡಿಸಿ ಔಟಾದರು. ಹಾರ್ದಿಕ್ ಕೇವಲ 1 ರನ್ ಸಿಡಿಸಿ ಔಟಾದರು. ಕೀರನ್ ಪೊಲಾರ್ಡ್ ಅಜೇಯ 16 ರನ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 6 ವಿಕೆಟ್ ನಷ್ಟಕ್ಕೆ 131 ರನ್ ಸಿಡಿಸಿತು.