14ನೇ ಆವೃತ್ತಿ ಐಪಿಎಲ್ ಟೂರ್ನಿಯ 17ನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ.
ಚೆನ್ನೈ(ಏ.23): ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲುವು ಅಗತ್ಯವಾಗಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮುರುಗನ್ ಅಶ್ವಿನ್ ಬದಲು ರವಿ ಬಿಶ್ನೋಯ್ ತಂಡ ಸೇರಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಮುಂಬೈ ಇಂಡಿಯನ್ಸ್ ಆಡಿದ 4 ಪಂದ್ಯದಲ್ಲಿ 2ರಲ್ಲಿ ಗೆಲುವು 2ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಪಂಜಾಬ್ ಕಿಂಗ್ಸ್ ಆಡಿದ 4 ಪಂದ್ಯದಲ್ಲಿ ಕೇವಲ 1 ಗೆಲುವು ಕಂಡಿದೆ ಈ ಮೂಲಕ ಅಂಕಪಟ್ಟಿಲ್ಲಿ 7ನೇ ಸ್ಥಾನದಲ್ಲಿದೆ.
Scroll to load tweet…
