ಮುಂಬೈ(ಏ.12): 14ನೇ ಆವೃತ್ತಿ ಐಪಿಎಲ್ ಟೂರ್ನಿಯ ಮೊದಲ ಶತಕ ದಾಖಲಾಗಿದೆ.  ಭಾರತೀಯನಿಂದಲೇ ಶತಕ ದಾಖಲಾಗಿರೋದು ಮತ್ತೊಂದು ವಿಶೇಷ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಬೃಹತ್ ಮೊತ್ತ ಚೇಸ್ ಮಾಡುಲ ಕಣಕ್ಕಿಳಿದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸಾಮ್ಸನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 

ಕೇವಲ 53 ಎಸೆತದಲ್ಲಿ ಸಂಜು ಸ್ಯಾಮ್ಸನ್ ಸೆಂಚುರಿ ದಾಖಲಿಸಿದ್ದಾರೆ. ಈ ಮೂಲಕ ರಾಜಸ್ಥಾನ ರಾಯಲ್ಸ್ ತಂಡದ ನಾಯಕನಾಗಿ ಪದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಸ್ಯಾಮ್ಸನ್ ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ನಾಯಕನಾಗಿ ಡೆಬ್ಯೂ ಮಾಡಿದ ಪಂದ್ಯದಲ್ಲಿ ಶತಕ ಸಿಡಿಸಿದ ಐಪಿಎಲ್ ಮೊದಲ ನಾಯಕ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಸಿಡಿಸಿದ 3ನೇ ಶತಕ ಇದಾಗಿದೆ. 2017ರಲ್ಲಿ ಮೊದಲ ಶತಕ ಸಿಡಿಸಿದರೆ, 2019ರಲ್ಲಿ 2 ಹಾಗೂ ಇದೀಗ 3ನೇ ಶತಕ ದಾಖಲಿಸಿದ್ದಾರೆ.