ಮುಂಬೈ(ಏ.19):  ಗೆಲುವಿನ ವಿಶ್ವಾಸದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ರೋಚಕ ಹೋರಾಟಕ್ಕೆ ರೆಡಿಯಾಗಿದೆ. ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಅಲ್ಪ ಮೊತ್ತಕ್ಕೆ ಚೆನ್ನೈ ಕಟ್ಟಿ ಹಾಕಿ ಸುಲಭ ಗೆಲುವಿನ ಲೆಕ್ಕಾಚಾರದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಆಡಿದ 2 ಪಂದ್ಯದಲ್ಲಿ ಒಂದೊಂದು ಗೆಲುವು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಚೆನ್ನೈ ಮುಗ್ಗರಿಸಿದರೆ, ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಕಂಡಿತ್ತು. ಇತ್ತ ರಾಜಸ್ಥಾನ ರಾಯಲ್ಸ್ ಪಂಜಾಬ್ ವಿರುದ್ಧ ಮುಗ್ಗರಿಸಿದ್ದರೆ, ಡೆಲ್ಲಿ ವಿರುದ್ಧ ಗೆಲುವು ಕಂಡಿದೆ.