ರಾಜಸ್ಥಾನ ರಾಯಲ್ಸ್ ಸಂಘಟಿತ ದಾಳಿಗೆ ಕೋಲ್ಕತಾ ನೈಟ್ ರೈಡರ್ಸ್ ಅಬ್ಬರಿಸಲು ವಿಫಲವಾಗಿದೆ. ಪರಿಣಾಮ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸುಲಭ ಗುರಿ ನೀಡಿದೆ.

ಮುಂಬೈ(ಏ.24): ಕೆಕೆಆರ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕೋ ರಾಜಸ್ಥಾನ ರಾಯಲ್ಸ್ ತಂಡದ ಲೆಕ್ಕಾಚಾರ ವರ್ಕೌಟ್ ಆಗಿದೆ. 18ನೇ ಲೀಗ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ 9 ವಿಕೆಟ್ ನಷ್ಟಕ್ಕೆ 133 ರನ್ ಸಿಡಿಸಿದೆ. ಈ ಮೂಲಕ ರಾಜಸ್ಥಾನ ತಂಡಕ್ಕೆ ಸುಲಭ ಗುರಿ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರಂಭಿಕರಾದ ನಿತೀಶ್ ರಾಣಾ ಹಾಗೂ ಶುಭ್‌ಮನ್ ಗಿಲ್ ಹೋರಾಟ ಹೆಚ್ಚು ಹೊತ್ತು ಇರಲಿಲ್ಲ. ಗಿಲ್ 11 ರನ್ ಸಿಡಿಸಿದರೆ, ರಾಣಾ 22 ರನ್ ಸಿಡಿಸಿದರು. ಕುಸಿದ ಕೆಕೆಆರ್ ತಂಡಕ್ಕೆ ರಾಹುಲ್ ತ್ರಿಪಾಠಿ ಆಸರೆಯಾದರು. ತ್ರಿಪಾಠಿ 36 ರನ್ ಸಿಡಿಸಿ ನಿರ್ಗಮಿಸಿದರು.

ಸುನಿಲ್ ನರೈನ್ ಹಾಗೂ ನಾಯಕ ಇಯಾನ್ ಮಾರ್ಗನ್ ಅಬ್ಬರಿಸಲಿಲ್ಲ. ಆದರೆ ದಿನೇಶ್ ಕಾರ್ತಿಕ್ ಹಾಗೂ ಆ್ಯಂಡ್ರೆ ರಸೆಲ್ ಹೋರಾಟ ಕೆಕೆಆರ್ ತಂಡವನ್ನು ಕಾಪಾಡಿತು. ರಸೆಲ್ ಕೇವಲ 9 ರನ್ ಸಿಡಿಸಿ ಔಟಾದರು. ಇತ್ತ ಕಾರ್ತಿಕ್ 25 ರನ್ ಕಾಣಿಕೆ ನೀಡಿದರು. ಪ್ಯಾಟ್ ಕಮಿನ್ಸ್ ಕೂಡ ನೆರವಾಗಲಿಲ್ಲ. ಅಂತಿಮವಾಗಿ ಕೆಕೆಆರ್ 9 ವಿಕೆಟ್ ನಷ್ಟಕ್ಕೆ 133 ರನ್ ಸಿಡಿಸಿತು.