ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವಿನ ಪಂದ್ಯದ ಸಂಭಾವ್ಯ ಆಟಗಾರರ ವಿವರ ಇಲ್ಲಿದೆ ನೋಡಿ.

ಮುಂಬೈ(ಏ.22): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 16ನೇ ಪಂದ್ಯದಲ್ಲಿಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳು ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್‌ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯವನ್ನು ವಹಿಸಿದೆ.

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ 23 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಆರ್‌ಸಿಬಿ ಹಾಗೂ ರಾಯಲ್ಸ್ ತಂಡಗಳು ತಲಾ 10 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿವೆ. ಇನ್ನು 3 ಪಂದ್ಯಗಳು ಫಲಿತಾಂಶವಿಲ್ಲದೇ ರದ್ದಾಗಿವೆ.

IPL 2021: ಸತತ 4ನೇ ಜಯದ ಮೇಲೆ ಕಣ್ಣಿಟ್ಟ ಆರ್‌ಸಿಬಿ

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆಡಿದ 3 ಪಂದ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿ, ಸತತ 4ನೇ ಗೆಲುವಿನ ಮೇಲೆ ವಿರಾಟ್‌ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ಒಂದು ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್‌ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯೆತೆಯಿದೆ.

ರಾಯಲ್ಸ್‌ ವಿರುದ್ದದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ

1. ವಿರಾಟ್ ಕೊಹ್ಲಿ(ನಾಯಕ)
2. ದೇವದತ್ ಪಡಿಕ್ಕಲ್‌
3. ಫಿನ್‌ ಅಲೆನ್‌
4. ಗ್ಲೆನ್‌ ಮ್ಯಾಕ್ಸ್‌ವೆಲ್‌
5. ಎಬಿ ಡಿವಿಲಿಯರ್ಸ್‌
6. ವಾಷಿಂಗ್ಟನ್ ಸುಂದರ್
7. ಶಹಬಾಜ್‌ ಅಹಮದ್‌
8. ಕೈಲ್ ಜೇಮಿಸನ್‌
9. ಹರ್ಷಲ್‌ ಪಟೇಲ್‌
10. ಮೊಹಮ್ಮದ್ ಸಿರಾಜ್
11. ಯುಜುವೇಂದ್ರ ಚಹಲ್‌

ಆರ್‌ಸಿಬಿ ವಿರುದ್ದದ ಪಂದ್ಯಕ್ಕೆ ರಾಜಸ್ಥಾನ ರಾಯಲ್ಸ್‌ ಸಂಭಾವ್ಯ ತಂಡ ಹೀಗಿದೆ ನೋಡಿ

1. ಜೋಸ್ ಬಟ್ಲರ್
2. ಮನನ್ ವೋಹ್ರಾ
3. ಸಂಜು ಸ್ಯಾಮ್ಸನ್‌(ನಾಯಕ)
4. ಶಿವಂ ದುಬೆ
5. ಡೇವಿಡ್ ಮಿಲ್ಲರ್
6. ರಿಯಾನ್ ಪರಾಗ್‌
7. ರಾಹುಲ್ ತೆವಾಟಿಯಾ
8. ಕ್ರಿಸ್ ಮೋರಿಸ್
9. ಜಯದೇವ್ ಉನಾದ್ಕತ್
10. ಚೇತನ್ ಸಕಾರಿಯಾ
11. ಮುಷ್ತಾಫಿಜುರ್ ರೆಹಮಾನ್

ಸ್ಥಳ: ಮುಂಬೈ
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್