ಚೆನ್ನೈ(ಏ.18): ಸೂಪರ್‌ ಸಂಡೆಯ ಮೊದಲ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್‌ ತಂಡಗಳಿಂದು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಕೊನೆಯ ಪಂದ್ಯವನ್ನಾಡಲು ಸಜ್ಜಾಗಿದ್ದು, ಗೆಲುವಿನ ನಾಗಾಲೋಟ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. ಆರ್‌ಸಿಬಿ ಕೇವಲ ಮೂವರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದ್ದು, ಡೇನಿಯಲ್ ಕ್ರಿಶ್ಚಿಯನ್‌ ಬದಲಿಗೆ ರಜತ್ ಪಾಟೀದಾರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಒಂದು ಕಡೆ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮೊದಲೆರಡು ಪಂದ್ಯಗಳನ್ನು ಗೆದ್ದು, ಟೂರ್ನಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಲು ಎದುರು ನೋಡುತ್ತಿದೆ. ಮತ್ತೊಂದೆಡೆ ಸನ್‌ರೈಸರ್ಸ್‌ ವಿರುದ್ದ 10 ರನ್‌ ಅಂತರದಲ್ಲಿ ಗೆದ್ದು, ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ 10 ರನ್‌ಗಳ ಅಂತರದ ಸೋಲು ಕಂಡಿರುವ ಕೆಕೆಆರ್ ಇದೀಗ ಮತ್ತೆ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ.

ತಂಡಗಳು ಹೀಗಿವೆ

ರಾಯಲ್ ಚಾಲೆಂಜರ್ಸ್‌ ಬೆಂಗಳೂರು:

ಕೋಲ್ಕತ ನೈಟ್‌ ರೈಡರ್ಸ್‌