Asianet Suvarna News Asianet Suvarna News

IPL 2021 ಉದ್ಘಾಟನಾ ಪಂದ್ಯ : ಮುಂಬೈ ವಿರುದ್ಧ ಟಾಸ್ ಗೆದ್ದ RCB!

14ನೇ ಆವೃತ್ತಿ ಐಪಿಎಲ್ ಟೂರ್ನಿಗೆ ಚಾಲನೆ ಸಿಕ್ಕಿದೆ. ಉದ್ಘಾಟನಾ ಪಂದ್ಯದಲ್ಲಿ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹೋರಾಟಕ್ಕೆ ಸಜ್ಜಾಗಿದೆ. ಈ ಬಾರಿ ಐಪಿಎಲ್ ಟೂರ್ನಿಯ ಮೊದಲ ಟಾಸ್ ಗೆದ್ದ ಹೆಗ್ಗಳಿಗೆ ಆರ್‌ಸಿಬಿ ಪಾತ್ರವಾಗಿದೆ. ಟಾಸ್ ಗೆದ್ದ ಆರ್‌ಸಿಬಿ ಆಯ್ಕೆ ಮಾಡಿದ್ದೇನು? ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ.

IPL 2021 RCB  won the toss and have opted to field against mumbai Indians in chennai ckm
Author
Bengaluru, First Published Apr 9, 2021, 7:02 PM IST

ಚೆನ್ನೈ(ಏ.09): ಕೊರೋನಾ ಆತಂಕ, ನಿರ್ಬಂಧಗಳ ನಡುವೆ 14ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಂಡಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್  ಗೆದ್ದಿರುವ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

8 ವರ್ಷಗಳ ಬಳಿಕ ಗ್ಲೆನ್ ಮ್ಯಾಕ್ಸ್‌ವೆಲ್, ಕೈಲ್ ಜ್ಯಾಮಿಸನ್ ಹಾಗೂ ಡೇನಿಯಲ್ ಕ್ರಿಸ್ಟಿಯನ್ ಆರ್‌ಸಿಬಿ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ . RCB ತಂಡದ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ

ವಿರಾಟ್ ಕೊಹ್ಲಿ(ನಾಯಕ), ರಜತ್ ಪಾಟೇದಾರ್, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇನಿಯಲ್ ಕ್ರಿಶ್ಚಿಯನ್, ವಾಶಿಂಗ್ಟನ್ ಸುಂದರ್, ಕೈಲ್ ಜ್ಯಾಮಿಸ್ಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಶಹಬ್ಬಾಜ್ ಅಹಮ್ಮದ್, ಯಜುವೇಂದ್ರ ಚಹಾಲ್ 

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11:
ರೋಹಿತ್ ಶರ್ಮಾ(ನಾಯಕ), ಕ್ರಿಸ್ ಲಿನ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ರಾಹುಲ್ ಚಹಾರ್, ಮಾಕ್ರೋ ಜಾನ್ಸೆನ್, ಟ್ರೆಂಬ್ ಬೋಲ್ಟ್, ಜಸ್ಪ್ರೀತ್ ಬುಮ್ರಾ
 

ಐಪಿಎಲ್‌ 2021: ಉದ್ಘಾಟನಾ ಪಂದ್ಯಕ್ಕೂ ಮುನ್ನ ಮುಂಬೈಗೆ ವಾರ್ನ್‌ ಮಾಡಿದ ಎಬಿಡಿ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಸೇರಿದಂತೆ ಕೆಲ ಮಹತ್ವದ ಕ್ರಿಕೆಟಿಗರನ್ನು ಖರೀದಿಸಿದೆ. ಈ ಮೂಲಕ ಬಲಿಷ್ಠ ತಂಡ ಕಟ್ಟಿದೆ. ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ವಿರಾಟ್ ಕೊಹ್ಲಿ ಸೈನ್ಯ ಶುಭಾರಂಭದ ವಿಶ್ವಾಸದಲ್ಲಿದೆ. ಇತ್ತ ಮುಂಬೈ ಇಂಡಿಯನ್ಸ್ ಕೂಡ ಅತ್ಯಂತ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. 

Follow Us:
Download App:
  • android
  • ios