ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮುಂಬೈ(ಏ.22): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 16ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

Scroll to load tweet…

ಇಲ್ಲಿನ ವಾಂಖೇಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ರನ್‌ ಮಳೆ ಹರಿಯುವ ನಿರೀಕ್ಷೆಯಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರಜತ್ ಪಾಟೀದಾರ್ ಬದಲಿಗೆ ಕೇನ್‌ ರಿಚರ್ಡ್‌ಸನ್‌ ತಂಡ ಕೂಡಿಕೊಂಡಿದ್ದಾರೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಕೂಡಾ ಒಂದು ಬದಲಾವಣೆ ಮಾಡಲಾಗಿದ್ದು ಜಯದೇವ್ ಉನಾದ್ಕತ್ ಬದಲಿಗೆ ಶ್ರೇಯಸ್ ಗೋಪಾಲ್ ತಂಡ ಕೂಡಿಕೊಂಡಿದ್ದಾರೆ.

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ಮತ್ತೊಂದು ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಲೆಕ್ಕಾಚಾರದಲ್ಲಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್‌ ಆಡಿದ 3 ಪಂದ್ಯಗಳ ಪೈಕಿ ಒಂದು ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದು, ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.

ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು:

ರಾಜಸ್ಥಾನ ರಾಯಲ್ಸ್: