* ಶಾರ್ಜಾ ಮೈದಾನದಲ್ಲಿಂದು ಆರ್‌ಸಿಬಿ ತಂಡಕ್ಕೆ ಪಂಜಾಬ್ ಕಿಂಗ್ಸ್ ಸವಾಲು* ಪಂಜಾಬ್ ತಂಡಕ್ಕಿದು ಮಾಡು ಇಲ್ಲವೇ ಮಡಿ ಪಂದ್ಯ* ಆರ್‌ಸಿಬಿ ಗೆದ್ದರೇ ಬಹುತೇಕ ಪ್ಲೇ ಆಫ್‌ಗೆ ಲಗ್ಗೆ
ಶಾರ್ಜಾ(ಅ.03): ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಹಾಗೂ ಪಂಜಾಬ್ ಕಿಂಗ್ಸ್ ನಡುವಿನ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 48ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ
ಈ ಹೈವೋಲ್ಟೇಜ್ ಪಂದ್ಯಕ್ಕೆ ಶಾರ್ಜಾ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.
ಇನ್ನು ಕೆ.ಎಲ್. ರಾಹುಲ್ (KL Rahul) ನೇತೃತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದು, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್ ಮತ್ತು ಎಲ್ಲೀಸ್‌ಗೆ ವಿಶ್ರಾಂತಿ ನೀಡಲಾಗಿದ್ದು, ಸರ್ಫರಾಜ್, ಹಪ್ರೀತ್ ಬ್ರಾರ್ ಹಾಗೂ ಮೊಯಿಸ್ ಹೆನ್ರಿಕೇಸ್ ತಂಡ ಕೂಡಿಕೊಂಡಿದ್ದಾರೆ
IPL 2021 ಕ್ರಿಸ್ ಗೇಲ್‌ರನ್ನು ಪಂಜಾಬ್ ಕಿಂಗ್ಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ: ಪೀಟರ್‌ಸನ್
ಈ ಹಿಂದಿನ ಕಳೆದ ಮೂರು ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್ ರಾಹುಲ್ ಒಮ್ಮೆಯೂ ಆರ್‌ಸಿಬಿ ಎದುರು ವಿಕೆಟ್ ಒಪ್ಪಿಸಿಲ್ಲ. ಆರ್‌ಸಿಬಿ ಎದುರು ಕಳೆದ 3 ಪಂದ್ಯಗಳಲ್ಲಿ ಕೆ.ಎಲ್ ರಾಹುಲ್ 284 ರನ್ ಚಚ್ಚಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಹುಲ್ ಆರ್‌ಸಿಬಿ ತಂಡವನ್ನು ಮತ್ತೊಮ್ಮೆ ಕಾಡುವ ಸಾಧ್ಯತೆಯಿದೆ. ಇನ್ನು ಯುಎಇ ಚರಣದಲ್ಲಿ ಸದ್ಯ ಉಭಯ ತಂಡಗಳ ಸ್ಪಿನ್ ಅಸ್ತ್ರಗಳಾದ ಯುಜುವೇಂದ್ರ ಚಹಲ್ ಹಾಗೂ ರವಿ ಬಿಷ್ಣೋಯಿ ತಲಾ 7 ವಿಕೆಟ್ ಕಬಳಿಸಿದ್ದು, ಶಾರ್ಜಾ ಮೈದಾನದಲ್ಲಿ ಯಾರು ಮಿಂಚುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ
ಪ್ಲೇ ಆಫ್ ಪ್ರವೇಶಿಸುವ ದೃಷ್ಠಿಯಿಂದ ಎರಡು ತಂಡಗಳಿಗೂ ಇಂದಿನ ಪಂದ್ಯ ಸಾಕಷ್ಟು ಮಹತ್ವದ್ದು ಎನಿಸಿದೆ. ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 11 ಪಂದ್ಯಗಳನ್ನಾಡಿ 7 ಗೆಲುವು ಹಾಗೂ 4 ಸೋಲುಗಳೊಂದಿಗೆ 14 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯ ಜಯಿಸಿದರೆ ಬಹುತೇಕ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಂತೆ ಆಗಲಿದೆ. ಇನ್ನು ಪಂಜಾಬ್ ಪಾಲಿಗಿಂದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ರಾಹುಲ್ ಪಡೆ 12 ಪಂದ್ಯಗಳನ್ನಾಡಿ 5 ಗೆಲುವು ಹಾಗೂ 7 ಸೋಲುಗಳೊಂದಿಗೆ 10 ಅಂಕಗಳ ಸಹಿತ 5ನೇ ಸ್ಥಾನದಲ್ಲಿದ್ದು, ಇಂದು ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ, ಒಂದು ವೇಳೆ ಸೋತರೇ ಅಧಿಕೃತವಾಗಿ ಪ್ಲೇ ಆಫ್ ರೇಸ್‌ನಿಂದ ಹೊರಬೀಳಲಿದೆ.
ತಂಡಗಳು ಹೀಗಿವೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಪಂಜಾಬ್ ಕಿಂಗ್ಸ್:
