ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್ ಬೌಲಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಮೆ.02): ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್‌ ಬೌಲಿಂಗ್ ಆಯ್ದುಕೊಂಡಿದೆ.

ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಸನ್‌ರೈಸರ್ಸ್ ಹೈದರಾಬಾದ್‌ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದೆ. ಮೊಹಮ್ಮದ್ ನಬೀ, ಭುವನೇಶ್ವರ್ ಕುಮಾರ್ ಹಾಗೂ ಅಬ್ದುಲ್ ಸಮದ್ ತಂಡ ಕೂಡಿಕೊಂಡಿದ್ದಾರೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದ್ದು, ಕಾರ್ತಿಕ್ ತ್ಯಾಗಿ ಹಾಗೂ ಅನುಜ್ ರಾವತ್ ತಂಡ ಕೂಡಿಕೊಂಡಿದ್ದಾರೆ.

ಐಪಿಎಲ್ 2021: ರಾಜಸ್ಥಾನ ರಾಯಲ್ಸ್‌ಗಿಂದು ಸನ್‌ರೈಸರ್ಸ್‌ ಸವಾಲು

Scroll to load tweet…

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 6 ಪಂದ್ಯಗಳನ್ನಾಡಿ ಕೇವಲ 1 ಗೆಲುವು ಹಾಗೂ 5 ಸೋಲುಗಳೊಂದಿಗೆ ಕೇವಲ 2 ಅಂಕಸಹಿತ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ 6 ಪಂದ್ಯಗಳಲ್ಲಿ 2 ಗೆಲುವು ಹಾಗೂ 4 ಸೋಲುಗಳೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ತಂಡಗಳು ಹೀಗಿವೆ:

ರಾಜಸ್ಥಾನ ರಾಯಲ್ಸ್

Scroll to load tweet…

ಸನ್‌ರೈಸರ್ಸ್ ಹೈದರಾಬಾದ್

Scroll to load tweet…