ಚೆನ್ನೈ(ಏ.14): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆರನೇ ಪಂದ್ಯದಲ್ಲಿಂದು ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್‌ ಮೊದಲು ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ

ಈ ಹೈವೋಲ್ಟೇಜ್‌ ಪಂದ್ಯಕ್ಕೆ ಇಲ್ಲಿನ ಎಂ. ಎ. ಚಿದಂಬರಂ ಸ್ಟೇಡಿಯಂ ಆತಿಥ್ಯವನ್ನು ವಹಿಸಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ನಿರೀಕ್ಷೆಯಂತೆಯೇ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರಜತ್ ಪಾಟಿದಾರ್ ಬದಲಿಗೆ ದೇವದತ್ ಪಡಿಕ್ಕಲ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಸನ್‌ರೈಸರ್ಸ್‌ ಪರ ಎರಡು ಬದಲಾವಣೆ ಮಾಡಲಾಗಿದ್ದು, ಜೇಸನ್‌ ಹೋಲ್ಡರ್ ಹಾಗೂ ಶಾಬಾಜ್ ನದೀಮ್‌ ತಂಡ ಕೂಡಿಕೊಂಡಿದ್ದಾರೆ.

ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ಮಣಿಸಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿಕೊಂಡು ಹೋಗಲು ತುದಿಗಾಲಿನಲ್ಲಿ ನಿಂತಿದೆ. ಮತ್ತೊಂದೆಡೆ ಡೇವಿಡ್‌ ವಾರ್ನರ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ ನೈಟ್‌ ರೈಡರ್ಸ್‌ ಎದುರು ಮುಗ್ಗರಿಸಿದ್ದು, ಆರ್‌ಸಿಬಿ ವಿರುದ್ದ ಗೆದ್ದು, ಜಯದ ಹಳಿಗೆ ಮರಳಲು ಎದುರು ನೋಡುತ್ತಿದೆ.

ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್‌ ಬೆಂಗಳೂರು:

ಸನ್‌ರೈಸರ್ಸ್‌ ಹೈದರಾಬಾದ್‌: