ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 29ನೇ ಲೀಗ್ ಪಂದ್ಯ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಈ ಪಂದ್ಯದಲ್ಲಿ ಟಾಸ್ ಗದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಅಹಮ್ಮದಾಬಾದ್(ಮೇ.02): ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸುತ್ತಿದ್ದಾರೆ. ರಾಹುಲ್ ಅಲಭ್ಯತೆಯಲ್ಲಿ ಕಣಕ್ಕಿಳಿದಿರುವ ಪಂಜಾಬ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿದೆ.

ಪಂಜಾಬ್ ತಂಡದಲ್ಲಿ ನಿಕೋಲಸ್ ಪೂರನ್ ಬದಲು ಡೇವಿಡ್ ಮಲನ್ ತಂಡ ಸೇರಿಕೊಂಡಿದ್ದಾರೆ. ಇತ್ತ ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Scroll to load tweet…

ಡೆಲ್ಲಿ ಕ್ಯಾಪಿಟಲ್ಸ್ 7 ಪಂದ್ಯದಲ್ಲಿ 5 ಗೆಲುವು ದಾಖಲಿಸೋ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಪಂಜಾಬ್ ಕಿಂಗ್ಸ್ 3 ಗೆಲುವು ನಾಲ್ಕು ಸೋಲಿನೊಂದಿಗೆ 5ನೇ ಸ್ಥಾನದಲ್ಲಿದೆ.