14ನೇ ಆವೃತ್ತಿ ಐಪಿಎಲ್ ಟೂರ್ನಿಯಲ 26ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿದೆ.

ಅಹಮ್ಮದಾಬಾದ್(ಏ.30): ಐಪಿಎಲ್ 2021ರ ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಪಂಜಾಬ್ ವಿರುದ್ಧದ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

RCB ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಾಶಿಂಗ್ಟನ್ ಸುಂದರ್ ಬದಲು ಶಹಬ್ಬಾಜ್ ಅಹಮ್ಮದ್ ತಂಡ ಸೇರಿಕೊಂಡಿದ್ದಾರೆ.

Scroll to load tweet…

Scroll to load tweet…

ಅಂಕಪಟ್ಟಿಯಲ್ಲಿ ಆರ್‌ಸಿಬಿ 3ನೇ ಸ್ಥಾನದಲ್ಲಿದ್ದರೆ, ಪಂಜಾಬ್ 6ನೇ ಸ್ಥಾನದಲ್ಲಿದೆ. ಆರ್‌ಸಿಬಿ ಆಡಿದ 6 ಪಂದ್ಯದಲ್ಲಿ 5 ಗೆಲುವು ದಾಖಲಿಸಿದೆ. ಇನ್ನು ಪಂಜಾಬ್ 6ರಲ್ಲಿ 2 ಪಂದ್ಯ ಗೆದ್ದಿಕೊಂಡಿದೆ.