Asianet Suvarna News Asianet Suvarna News

IPL 2021: ಆರ್‌ಸಿಬಿ ಕಪ್ ಗೆಲ್ಲುವ ಕಾಲ ಕೊನೆಗೂ ಸನ್ನಿಹಿತವಾಗಿವಾಗಿದೆ ಎಂದ ಕ್ಲೂಸ್ನರ್

* ಪ್ಲೇ ಆಫ್ ಪ್ರವೇಶಿಸಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು

* ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿದೆ ಆರ್‌ಸಿಬಿ ತಂಡ

* ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಲ್ಯಾನ್ಸ್ ಕ್ಲೂಸ್ನರ್

IPL 2021 Virat Kohli Led RCB might finally be able to win the IPL trophy this year Says Lance Klusener kvn
Author
Dubai - United Arab Emirates, First Published Oct 9, 2021, 5:31 PM IST

ದುಬೈ(ಅ.09): 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ (IPL 2021) ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals), ಚೆನ್ನೈ ಸೂಪರ್‌ ಕಿಂಗ್ಸ್, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ (Kolkata Knight Riders) ತಂಡಗಳು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿವೆ. ಈ ನಾಲ್ಕು ತಂಡಗಳ ಪೈಕಿ ಕೆಕೆಆರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡಗಳು ಈಗಾಗಲೇ ಚಾಂಪಿಯನ್‌ ಪಟ್ಟ ಅಲಂಕರಿಸಿವೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿವೆ. 

ಕಳೆದ ವರ್ಷ ಅಂದರೆ 2020ರ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್‌ ಅಯ್ಯರ್ ನೇತೃತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್‌ ಪ್ರವೇಶಿಸಿತ್ತಾದರೂ, ಮುಂಬೈ ಇಂಡಿಯನ್ಸ್ (Mumbai Indians) ವಿರುದ್ದ ಮುಗ್ಗರಿಸುವ ಮೂಲಕ ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇನ್ನು ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಕೂಡಾ ಪ್ಲೇ ಆಫ್‌ ಪ್ರವೇಶಿಸಿತ್ತಾದರೂ, ಎಲಿಮಿನೇಟರ್ ಪಂದ್ಯದಲ್ಲೇ ಮುಗ್ಗರಿಸಿ ನಿರಾಸೆ ಅನುಭವಿಸಿತ್ತು. ಆದರೆ ಈ ಬಾರಿ ಸಾಕಷ್ಟು ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ಲೀಗ್‌ ಹಂತದಲ್ಲಿ ಇನ್ನೂ 2 ಪಂದ್ಯಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರುವ ಮೂಲಕ ಪ್ಲೇ ಆಫ್‌ ಸ್ಥಾನವನ್ನು ಖಚಿತಪಡಿಸಿಕೊಂಡಿತ್ತು. ಇದೀಗ ಕಪ್‌ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಆರ್‌ಸಿಬಿ ಹೊರಹೊಮ್ಮಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಐಪಿಎಲ್‌ನಲ್ಲಿ ಇದುವರೆಗೂ ಮೂರು ಬಾರಿ ಫೈನಲ್‌ ಪ್ರವೇಶಿಸಿದೆಯಾದರೂ ಕಪ್‌ ಗೆಲ್ಲಲು ಯಶಸ್ವಿಯಾಗಿಲ್ಲ. ಈ ಸಲ ಕಪ್ ನಮ್ದೇ ಎಂದು ಕನಸು ಕಾಣುತ್ತಿರುವ ಅಭಿಮಾನಿಗಳ ಆಸೆ ಪೂರೈಸಲು ವಿರಾಟ್ ಕೊಹ್ಲಿ (Virat Kohli) ಪಡೆ ಸಜ್ಜಾಗಿ ನಿಂತಿದೆ.

IPL 2021: ನಿನಗಿದು ಬೇಕಿತ್ತಾ ಮಗನೇ..? ಆವೇಶ್ ಖಾನ್ ಫುಲ್ ಟ್ರೋಲ್‌..!

ಇದೀಗ ದಕ್ಷಿಣ ಆಫ್ರಿಕಾ ತಂಡದ ಮಾಜಿ ಕ್ರಿಕೆಟಿಗ ಹಾಗೂ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಹೆಡ್ ಕೋಚ್‌ ಲ್ಯಾನ್ಸ್‌ ಕ್ಲೂಸ್ನರ್‌ (Lance Klusener) ಈ ಬಾರಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಆರ್‌ಸಿಬಿ ಈ ಬಾರಿ ಮೊದಲ ಐಪಿಎಲ್‌ ಗೆಲ್ಲಬಹುದು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಆರ್‌ಸಿಬಿ ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿಯುವುದನ್ನು ನೋಡಲು ಬಯಸುತ್ತೇನೆ. ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್‌ (Ab De Villiers) ಅವರನ್ನೊಳಗೊಂಡ ತಂಡ ಇದುವರೆಗೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲವೆಂದರೆ ನಿಜಕ್ಕೂ ನನಗೆ ಅಚ್ಚರಿಯಾಗುತ್ತಿದೆ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕಪ್ ಎತ್ತಿಹಿಡಿಯಲಿದೆ ಎಂದು ನನಗೆ ಅನಿಸುತ್ತಿದೆ ಎಂದು ಕ್ಲೂಸ್ನರ್ ಹೇಳಿದ್ದಾರೆ.

IPL 2021 Virat Kohli Led RCB might finally be able to win the IPL trophy this year Says Lance Klusener kvn

IPL 2021 ಸನ್‌ರೈಸರ್ಸ್‌ ಹೈದರಾಬಾದ್‌ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಡೇವಿಡ್ ವಾರ್ನರ್..!

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 14 ಪಂದ್ಯಗಳನ್ನಾಡಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳ ಸಹಿತ ಮೂರನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಇದೀಗ ಅಕ್ಟೋಬರ್ 11ರಂದು ನಡೆಯಲಿರುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಕೋಲ್ಕತ ನೈಟ್‌ ರೈಡರ್ಸ್ ತಂಡವನ್ನು ಎದುರಿಸಲಿದೆ.

Follow Us:
Download App:
  • android
  • ios