ಫೀಲ್ಡಿಂಗ್ ಆಯ್ಕೆ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಚೆನ್ನೈ ವಿರುದ್ಧದ ಗೆಲುವಿಗೆ ಹೊಂಚು ಹಾಕಿದ ಹೈದರಾಬಾದ್ ಹೊಸ ಅಧ್ಯಾಯ ಬರೆಯಲು ಧೋನಿ ಟೀಮ್ ರೆಡಿ

ಪುಣೆ(ಮೇ.01): ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂ.ಎಸ್.ಧೋನಿ ನಾಯಕನಾಗಿ ಮರಳಿದ್ದಾರೆ. 8 ಪಂದ್ಯಗಳ ಬಳಿಕ ಧೋನಿ ನಾಯಕತ್ವದಲ್ಲಿ ಸಿಎಸ್‌ಕೆ ಅಖಾಡಕ್ಕೆ ಇಳಿದಿದೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದುಕೊಂಡಿದೆ. ಎಸ್ಆರ್‌ಹೆಚ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಗೆಲುವು ಮರೀಚಿಕೆಯಾಗುತ್ತಿದೆ. 8 ಪಂದ್ಯಗಳಲ್ಲಿ ಕೇವಲ 2 ಗೆಲುವು ಸಾಧಿಸಿದೆ. ಈ ಬಾರಿ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಮುನ್ನಡೆದ ಚೆನ್ನೈ ತಂಡಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿತ್ತು. ಹೀಗಾಗಿ ಜಡ್ಡು, ಮತ್ತೆ ಧೋನಿಗೆ ನಾಯಕತ್ವ ಹಸ್ತಾಂತರಿಸಿದ್ದಾರೆ. ಈ ಆವೃತ್ತಿಯಲ್ಲಿ ಧೋನಿ ನಾಯಕತ್ವ ವಹಿಸಿಕೊಂಡ ಮೊದಲ ಪಂದ್ಯ ಇದಾಗಿದೆ.

ಚೆನ್ನೈ ತಂಡವನ್ನು ಮತ್ತೆ ಗೆಲುವಿನ ಹಳಿಗೆ ತರಲು ಧೋನಿ ಬಿಟ್ಟರೆ ಇನ್ಯಾರಿಗೂ ಸಾಧ್ಯವಿಲ್ಲ. ಈ ರೀತಿಯ ಹಲವು ಸಂದರ್ಭಗಳನ್ನು ಧೋನಿ ಯಶಸ್ವಿಯಾಗಿ ಎದುರಿಸಿದ್ದಾರೆ. ಇತಿಹಾಸ ರಚಿಸಿದ್ದಾರೆ. ಹೀಗಾಗಿ ಈ ಆವೃತ್ತಿಯಲ್ಲಿನ ಆರಂಭಿಕ 8 ಪಂದ್ಯಗಳ ಲೆಕ್ಕ ಒಂದಾದರೆ, ಇಂದಿನಿಂದ ಹೊಸ ಲೆಕ್ಕ.

ಸನ್‌ರೈಸರ್ಸ್ ಹೈದರಾಬಾದ್ ಆರಂಭದಲ್ಲಿ ಸತತ 3 ಪಂದ್ಯ ಸೋತು ಕಂಗಲಾಗಿತ್ತು. ಆದರೆ ಬಳಿಕ ಸತತ ಗೆಲುವಿನ ಮೂಲಕ ಉತ್ತಮ ಸ್ಥಿತಿಯಲ್ಲಿದೆ. ಅಂಕಪಟ್ಟಿಯಲ್ಲಿ ಹೈದರಾಬಾದ್ 4ನೇ ಸ್ಥಾನದಲ್ಲಿದ್ದರೆ, ಚೆನ್ನೈ 9ನೇ ಸ್ಥಾನದಲ್ಲಿದೆ. ಧೋನಿ ನಾಯಕತ್ವದಲ್ಲಿ ಇದೀಗ ಚೆನ್ನೈ ಹೊಸ ಅಧ್ಯಾಯ ಆರಂಭಿಸುವ ವಿಶ್ವಾಸದಲ್ಲಿದೆ.

ಅಂಕಪಟ್ಟಿ:
ಐಪಿಎಲ್ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಮೊದಲ ಸ್ಥಾನ ಅಲಂಕರಿಸಿದೆ. ಗುಜರಾತ್ 9 ಪಂದ್ಯಗಳಲ್ಲಿ 8 ಗೆಲುವು ಕಂಡಿದೆ. ಇನ್ನು ರಾಜಸ್ಥಾನ ರಾಯಲ್ಸ್ 9 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿರುವ ಲಖನೌ ಸೂಪರ್‌ಜೈಂಟ್ಸ್ 9 ಪಂದ್ಯಗಳಲ್ಲಿ 6 ಗೆಲುವು ಕಂಡಿದೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ 8 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿ 4ನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಪಂದ್ಯಗಳನ್ನಾಡಿದ್ದು 5 ಗೆಲುವು 5 ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ 8ರಲ್ಲಿ 4 ಗೆಲುವು ದಾಖಲಿಸಿ 6ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 7ನೇ ಸ್ಥಾನದಲ್ಲಿದೆ. ಪಂಜಾಬ್ 9 ಪಂದ್ಯಗಳಲ್ಲಿ 4 ಗೆಲುವು ಕಂಡಿದೆ. ಕೋಲ್ಕತಾ ನೈಟ್ ರೈಡರ್ಸ್ 9 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿ 8ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ 9ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 9 ಪಂದ್ಯಗಳಲ್ಲಿ 1 ಗೆಲುವು ಸಾಧಿಸಿ ಕೊನೆಯ ಸ್ಥಾನದಲ್ಲಿದೆ.