* ರಾಜಸ್ಥಾನ ರಾಯಲ್ಸ್‌ಗೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸವಾಲು* ಪ್ಲೇ ಆಫ್‌ ಮೊದಲ ಕ್ವಾಲಿಫೈಯರ್ ಪ್ರವೇಶಿಸುವ ದೃಷ್ಟಿಯಿಂದ ರಾಜಸ್ಥಾನಕ್ಕೆ ಮಹತ್ವದ ಪಂದ್ಯ* ಗೆಲುವಿನೊಂದಿಗೆ ಅಭಿಯಾನ ಮುಗಿಸುವ ನಿರೀಕ್ಷೆಯಲ್ಲಿ ಧೋನಿ ಪಡೆ

ಮುಂಬೈ(ಮೇ.20): 15ನೇ ಆವೃತ್ತಿ ಐಪಿಎಲ್‌ನಲ್ಲಿ ಪ್ಲೇ-ಆಫ್‌ (IPL 2022 Playoffs) ಸ್ಥಾನ ಅಧಿಕೃತಗೊಳಿಸುವುದರ ಜೊತೆಗೆ ಅಂಕಪಟ್ಟಿಯಲ್ಲಿ ಅಗ್ರ 2ರಲ್ಲಿ ಸ್ಥಾನ ಗಿಟ್ಟಿಸಲು ರಾಜಸ್ಥಾನ ರಾಯಲ್ಸ್‌ (Rajasthan Royals) ಎದುರು ನೋಡುತ್ತಿದ್ದು, ಶುಕ್ರವಾರ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ ಸೆಣಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಬ್ರೆಬೋರ್ನ್‌ ಮೈದಾನ ಆತಿಥ್ಯವನ್ನು ವಹಿಸಿದೆ. ಚೆನ್ನೈ ಎದುರು ಭಾರೀ ಅಂತರದ ಗೆಲುವು ರಾಜಸ್ಥಾನ ರಾಯಲ್ಸ್ ತಂಡವನ್ನು ಮೊದಲ ಕ್ವಾಲಿಫೈಯರ್‌ಗೆ ಅರ್ಹತೆಗಿಟ್ಟಿಸುವಂತೆ ಮಾಡುವ ಸಾಧ್ಯತೆಯಿದೆ.

ಸಂಜು ಸ್ಯಾಮ್ಸನ್‌ (Sanju Samson) ನಾಯಕತ್ವದ ರಾಜಸ್ಥಾನ ರಾಯಲ್ಸ್‌ ಈ ಬಾರಿ ಆಡಿದ 13 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದ್ದು, 16 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಪ್ಲೇ-ಆಫ್‌ ಸ್ಥಾನ ಬಹುತೇಕ ಖಚಿತಪಡಿಸಿಕೊಂಡಿರುವ ತಂಡ ಈ ಪಂದ್ಯದಲ್ಲೂ ಗೆದ್ದರೆ ಅಧಿಕೃತ ಪ್ರವೇಶ ಪಡೆಯಲಿದೆ. ಜೊತೆಗೆ ಲಖನೌ ಸೂಪರ್‌ ಜೈಂಟ್ಸ್‌(18 ಅಂಕ) ತಂಡವನ್ನು ಹಿಂದಿಕ್ಕಿ ಕ್ವಾಲಿಫೈರ್‌ 1ರಲ್ಲಿ ಆಡುವ ಅವಕಾಶ ಸಿಗಲಿದೆ. ಸೋತರೂ ನೆಟ್‌ ರನ್‌ರೇಟ್‌ ಆಧಾರದಲ್ಲಿ ತಂಡ ಪ್ಲೇ-ಆಫ್‌ ಪ್ರವೇಶಿಸಬಹುದು.

ಮತ್ತೊಂದೆಡೆ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು, 13 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆದ್ದಿದೆ. ಗೆಲುವಿನೊಂದಿಗೆ ಅಭಿಯಾನ ಕೊನೆಗೊಳಿಸುವುದರ ಜೊತೆಗೆ ಕೊನೆ ಸ್ಥಾನಕ್ಕೆ ಕುಸಿಯುವ ಭೀತಿಯಿಂದ ಪಾರಾಗಲು ಕಾತರಿಸ್ತುತಿದೆ. ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಬ್ಯಾಟಿಂಗ್ ಒಮ್ಮೆ ಯಶಸ್ವಿಯಾದರೆ, ಬೌಲರ್‌ಗಳು ಕೈಕೊಟ್ಟಿದ್ದಾರೆ. ಇನ್ನು ಕೆಲ ಪಂದ್ಯಗಳಲ್ಲಿ ಬೌಲರ್‌ಗಳು ಶಿಸ್ತುಬದ್ದ ದಾಳಿ ನಡೆಸಿದರೆ, ಬ್ಯಾಟರ್‌ಗಳು ಬೇಜವಾಬ್ದಾರಿಯಾಗಿ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದಾರೆ. ಹೀಗಾಗಿ ಧೋನಿ ಪಡೆ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದೆ. 

Virat Kohli ಐಪಿಎಲ್ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ನೆಟ್ಟ ಕಿಂಗ್ ಕೊಹ್ಲಿ..!

ರಾಜಸ್ಥಾನ ರಾಯಲ್ಸ್ ತಂಡವು ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ ಅವರಂತಹ ಟಿ20 ತಜ್ಞ ಬ್ಯಾಟರ್‌ಗಳನ್ನು ಹೊಂದಿದೆ. ಬೌಲಿಂಗ್‌ನಲ್ಲಿ ಯುಜುವೇಂದ್ರ ಚಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ ಹಾಗೂ ರವಿಚಂದ್ರನ್ ಅಶ್ವಿನ್ ಕಮಾಲ್ ಮಾಡುತ್ತಿರುವುದು ತಂಡದ ಅತ್ಮವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡದ ಎದುರು ಗೆಲುವು ಸಾಧಿಸಬೇಕಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸಂಘಟಿತ ಪ್ರದರ್ಶನ ತೋರಬೇಕಿದೆ.

ಸಂಭಾವ್ಯ ತಂಡಗಳು ಹೀಗಿವೆ ನೋಡಿ

ಚೆನ್ನೈ ಸೂಪರ್ ಕಿಂಗ್ಸ್‌: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್‌ವೇ, ರಾಬಿನ್ ಉತ್ತಪ್ಪ, ಮೋಯಿನ್ ಅಲಿ, ಶಿವಂ ದುಬೆ, ಅಂಬಟಿ ರಾಯುಡು, ಎಂ ಎಸ್ ಧೋನಿ(ನಾಯಕ& ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಪ್ರಶಾಂತ್ ಸೋಲಂಕಿ, ಮತೀಶಾ ಪತಿರಣ, ಮುಕೇಶ್ ಚೌಧರಿ.

ರಾಜಸ್ಥಾನ ರಾಯಲ್ಸ್‌: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ& ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರೊನ್ ಹೆಟ್ಮೇಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜುವೇಂದ್ರ ಚಹಲ್, ಒಬೆಡ್ ಮೆಕಾಯ್.

ಸ್ಥಳ: ಬ್ರೆಬೋರ್ನ್‌ ಕ್ರೀಡಾಂಗಣ,ಮುಂಬೈ 
ಪಂದ್ಯ: ಸಂಜೆ 7.30ಕ್ಕೆ 
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌