ಐಪಿಎಲ್ 2022 ಟೂರ್ನಿಯ 11ನೇ ಲೀಗ್ ಪಂದ್ಯ ಮುಂಬೈನ ಬ್ರೇಬೋರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ
ಮುಂಬೈ(ಏ.03): ಐಪಿಎಲ್ 2022 ಟೂರ್ನಿಯ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಚೆನ್ನೈ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ತುಷಾರ್ ಬದಲು ಕ್ರಿಸ್ ಜೋರ್ಡನ್ ತಂಡ ಸೇರಿಕೊಂಡಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ತಂಡದಲ್ಲಿ ಹರಿಪ್ರೀತ್ ಬ್ರಾರ್ ಬದಲು ವೈಭವ್ ಅರೋರ ಹಾಗೂ ರಾಜ್ ಬಾವ ಬದಲು ಜಿತೇಶ್ ಶರ್ಮಾ ಸ್ಥಾನ ಪಡೆದಿದ್ದಾರೆ.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಮಯಾಂಕ್ ಅಗರ್ವಾಲ್(ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸ, ಲಿಯಾಮ್ ಲಿವಿಂಗ್‌ಸ್ಟೋನ್, ಶಾರುಖ್ ಖಾನ್, ಜಿತೇಶ್ ಶರ್ಮಾ, ಒಡೆನ್ ಸ್ಮಿತ್, ಅರ್ಶದೀಪ್ ಸಿಂಗ್, ಕಾಗಿಸೋ ರಬಡಾ, ರಾಹುಲ್ ಚಹಾರ್, ವೈಭವ್ ಆರೋರ,
IPL 2022 - KKR ತಂಡದ ಆಟಗಾರರ ಹಾಟ್ ಪತ್ನಿಯರು ಹಾಗೂ ಗರ್ಲ್‌ಫ್ರೆಂಡ್ಸ್!
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ಪಪ್ಪ, ಮೊಯಿನ್ ಆಲಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ(ನಾಯಕ), ಎಂಎಸ್ ಧೋನಿ, ಶಿವಂ ದುಬೆ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡನ್, ಡ್ವೇನ್ ಪ್ರಿಟೋರಿಯಸ್, ಮುಕೇಶ್ ಚೌಧರಿ
ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಎರಡೂ ಪಂದ್ಯಗಳನ್ನು ಸೋತಿದೆ. ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಸೋಲು ಕಂಡಿತ್ತು. ಇನ್ನು ಲಖನೌ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಸಿಎಸ್‌ಕೆ ಮುಗ್ಗರಿಸಿತ್ತು. ಆಡಿದ ಎರಡೂ ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
IPL 2022 - ಬಾಲಿವುಡ್ ಬೆಡಗಿಯರ ಜೊತೆ ಕ್ರಿಕೆಟಿಗರ ಲವ್ ಆಫೇರ್ಸ್!
ಪಂಜಾಬ್ ಕಿಂಗ್ಸ್ ಐಪಿಎಲ್ 2022 ಟೂರ್ನಿಯಲ್ಲಿ ಭರ್ಜರಿ ಗೆಲುವಿನೊಂದಿಗೆ ಶುಭಾರಂಭ ಮಾಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ 5 ವಿಕೆಟ್ ಗೆಲುವು ಕಂಡಿತ್ತು. ಆದರೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಗ್ಗರಿಸಿ ನಿರಾಸೆ ಅನುಭವಿಸಿತ್ತು. ಹೀಗಾಗಿ ಆಡಿದ 2 ರಲ್ಲಿ ಒಂದು ಪಂದ್ಯ ಗೆದ್ದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಅಂಕಪಟ್ಟಿ:
ಆರಂಭಿಕ 10 ಲೀಗ್ ಪಂದ್ಯಗಳ ಬಳಿಕ ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಆಡಿದ 2 ಪಂದ್ಯಗಳಲ್ಲಿ ಅದ್ಭುತ ಗೆಲುವು ದಾಖಲಿಸಿದ ರಾಜಸ್ಥಾನ ರಾಯಲ್ಸ್ 4 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಇನ್ನು 3 ಪಂದ್ಯದಲ್ಲಿ 2 ಗೆಲುವು ಸಾಧಿಸಿರುವ ಕೋಲ್ಕತಾ ನೈಟ್ ರೈಡರ್ಸ್ 2ನೇ ಸ್ಥಾನ ಅಲಂಕರಿಸಿದೆ. ಇನ್ನು ಎರಡೂ ಪಂದ್ಯಗಳನ್ನು ಗೆದ್ದಿರುವ ಗುಜರಾತ್ ಟೈಟಾನ್ಸ್ 3ನೇ ಸ್ಥಾನದಲ್ಲಿದೆ. 4ನೇ ಸ್ಥಾನವನ್ನು ಡೆಲ್ಲಿ ಕ್ಯಾಪಿಟಲ್ಸ್ ಅಲಂಕರಿಸಿದೆ. ಡೆಲ್ಲಿ 2 ರಲ್ಲಿ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಲಖನೌ ಸೂಪರ್ ಜೈಂಟ್ಸ್ 2 ರಲ್ಲಿ ಒಂದು ಪಂದ್ಯ ಗೆದ್ದು 5ನೇ ಸ್ಥಾನದಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 2ರಲ್ಲಿ 1 ಗೆಲುವು ದಾಖಲಿಸಿ 6ನೇ ಸ್ಥಾನ ಅಲಂಕರಿಸಿದೆ. ಪಂಜಾಬ್ ಹಾಗೂ ಚೆನ್ನೈ 7 ಮತ್ತು 8ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 9 ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೊನೆಯ ಹಾಗೂ 10 ನೇ ಸ್ಥಾನದಲ್ಲಿದೆ.
