* ಮುಂಬೈನ ವಾಂಖೇಡೆ ಮೈದಾನದಲ್ಲಿ ಚೆನ್ನೈ ಗುಜರಾತ್ ಮುಖಾಮುಖಿ* ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ* ಚನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ನಾಲ್ಕು ಬದಲಾವಣೆ

ಮುಂಬೈ(ಮೇ.15): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ (Chennai Super Kings) ಹಾಗೂ ಗುಜರಾತ್ ಟೈಟಾನ್ಸ್‌ (Gujarat Titans) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯವನ್ನು ವಹಿಸಿದೆ. ಒಂದು ಕಡೆ ಚೆನ್ನೈ ಸೂಪರ್‌ ಕಿಂಗ್ಸ್ ತಂಡವು ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದ್ದು, ಪ್ರತಿಷ್ಠೆಯ ಕದನಕ್ಕೆ ಸಜ್ಜಾಗಿದೆ. ಇನ್ನೊಂದಡೆ ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಗುಜರಾತ್ ಟೈಟಾನ್ಸ್‌ ತಂಡವು ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದೆ.

ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಈ ಪಂದ್ಯಕ್ಕೆ ಸಾಕಷ್ಟು ಪ್ರಯೋಗ ನಡೆಸಲು ಮುಂದಾಗಿದ್ದು, ಪ್ರಮುಖ 4 ಬದಲಾವಣೆಗಳನ್ನು ಮಾಡಿದೆ. ಚೆನ್ನೈ ತಂಡದಲ್ಲಿ ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಡ್ವೇನ್ ಬ್ರಾವೋ ಹಾಗೂ ಮಹೀಶ್ ತೀಕ್ಷಣ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಎನ್ ಜಗದೀಶನ್, ಪ್ರಶಾಂತ್ ಸೋಲಂಕಿ ಹಾಗೂ ಮಿಚೆಲ್ ಸ್ಯಾಂಟ್ನರ್ ಹಾಗೂ ಮತೀಶ್ ಪತಿರಣಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಚೆನ್ನೈ ತಂಡದಲ್ಲಿ ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಡ್ವೇನ್ ಬ್ರಾವೋ ಹಾಗೂ ಮಹೀಶ್ ತೀಕ್ಷಣ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಎನ್ ಜಗದೀಶನ್, ಪ್ರಶಾಂತ್ ಸೋಲಂಕಿ ಹಾಗೂ ಮಿಚೆಲ್ ಸ್ಯಾಂಟ್ನರ್ ಹಾಗೂ ಮತೀಶ್ ಪತಿರಣಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಲ್ಪಿಸಲಾಗಿದೆ.

CSK vs GT: ಟೈಟಾನ್ಸ್‌ಗೆ ಅಗ್ರಸ್ಥಾನ ಉಳಿಸಿಕೊಳ್ಳುವ ಹುಮ್ಮಸ್ಸು..!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಯುವ ಲೆಗ್‌ ಸ್ಪಿನ್ನರ್ ಪ್ರಶಾಂತ್ ಸೋಲಂಕಿ ಹಾಗೂ ಶ್ರೀಲಕಾದ ಅಂಡರ್ 19 ವೇಗಿ ಮಥೀಶ್ ಪತಿರಣ ಇಂದು ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಅಂಬಟಿ ರಾಯುಡು, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ ಅವರಂತಹ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Scroll to load tweet…

ತಂಡಗಳು ಹೀಗಿವೆ ನೋಡಿ

ಚೆನ್ನೈ ಸೂಪರ್ ಕಿಂಗ್ಸ್‌: ಋತುರಾಜ್‌ ಗಾಯಕ್ವಾಡ್‌, ಡೆವೊನ್ ಕಾನ್‌ವೇ, ಎನ್ ಜಗದೀಶನ್, ಮೋಯಿನ್ ಅಲಿ, ಶಿವಂ ದುಬೆ, ಎಂ ಎಸ್ ಧೋನಿ, ಪ್ರಶಾಂತ್ ಸೋಲಂಕಿ, ಸಿಮರ್‌ಜೀತ್ ಸಿಂಗ್, ಮುಕೇಶ್ ಚೌಧರಿ, ಮಿಚೆಲ್ ಸ್ಯಾಂಟ್ನರ್, ಮತೀಶ್ ಪತಿರಣ.

ಗುಜರಾತ್ ಟೈಟಾನ್ಸ್: ವೃದ್ದಿಮಾನ್ ಸಾಹ, ಶುಭ್‌ಮನ್‌ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಅಲ್ಜೆರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ. 

ಸ್ಥಳ: ಮುಂಬೈ, ವಾಂಖೇಡೆ ಕ್ರೀಡಾಂಗಣ
ಪಂದ್ಯ: ಮಧ್ಯಾಹ್ನ 3.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌