Asianet Suvarna News Asianet Suvarna News

DC vs KKR: ಡೆಲ್ಲಿ ಕ್ಯಾಪಿಟಲ್ಸ್ ಎದುರು ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

* ಮುಂಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್‌, ಕೋಲ್ಕತಾ ನೈಟ್ ರೈಡರ್ಸ್‌ ಮುಖಾಮುಖಿ

* ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಕೋಲ್ಕತಾ ನೈಟ್ ರೈಡರ್ಸ್‌

* ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

IPL 2022 DC vs KKR Kolkata Knight Riders won the toss and bowl first against Delhi Capitals kvn
Author
Bengaluru, First Published Apr 10, 2022, 3:04 PM IST

ಮುಂಬೈ(ಏ.10): 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 19ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals vs Kolkata Knight Riders) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (KKR Captain Shreyas Iyer) ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ (KKR won the toss opt to bowl). ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಬ್ರೆಬೋರ್ನ್‌ ಮೈದಾನ ಆತಿಥ್ಯವನ್ನು ವಹಿಸಿದೆ..

ಟೀಂ ಇಂಡಿಯಾದ ಭವಿಷ್ಯದ ನಾಯಕರು ಎಂದು ಬಿಂಬಿಸಲ್ಪಟ್ಟಿರುವ ರಿಷಭ್ ಪಂತ್ (Rishab Pant) ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ತಂಡಗಳ ನಡುವಿನ ಕಾದಾಟವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಏನ್ರಿಚ್ ನೋಕಿಯಾ ಬದಲಿಗೆ ಖಲೀಲ್ ಅಹಮ್ಮದ್ (Khaleel Ahmed) ತಂಡ ಕೂಡಿಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಪೋಟಕ ಬ್ಯಾಟರ್‌ಗಳಿರುವುದರಿಂದ ಸೂಪರ್‌ ಸಂಡೆಯ ಮೊದಲ ಪಂದ್ಯದಲ್ಲಿಯೇ ರನ್‌ ಹೊಳೆ ಹರಿಯುವ ಸಾಧ್ಯತೆಯಿದೆ. ಡೇವಿಡ್‌ ವಾರ್ನರ್‌ (David Warner) ಹಾಗೂ ಪೃಥ್ವಿ ಶಾ (Prithvi Shaw) ಉತ್ತಮ ಆರಂಭ ಒದಗಿಸಿಕೊಟ್ಟರೆ, ಡೆಲ್ಲಿ ದೊಡ್ಡ ಮೊತ್ತ ಕಲೆಹಾಕಬಹುದಾಗಿದೆ

ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಆಡಿದ 4 ಪಂದ್ಯಗಳ ಪೈಕಿ ಮೂರು ಗೆಲುವು ಹಾಗೂ ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ಪಂದ್ಯಗಳನ್ನಾಡಿ ಒಂದು ಗೆಲುವು ಹಾಗೂ ಎರಡು ಸೋಲುಗಳೊಂದಿಗೆ ಕೇವಲ 2 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 7ನೇ ಸ್ಥಾನ ಪಡೆದಿದೆ.

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್‌ ಒಟ್ಟು 28 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಕೋಲ್ಕತಾ ನೈಟ್ ರೈಡರ್ಸ್‌ ತಂಡವು ಕೊಂಚ ಮೇಲುಗೈ ಸಾಧಿಸಿದೆ. ಉಭಯ ತಂಡಗಳ 28 ಮುಖಾಮುಖಿಯ ಪೈಕಿ ಕೋಲ್ಕತಾ ನೈಟ್‌ ರೈಡರ್ಸ್ ತಂಡವು 16 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಆದರೆ 2018ರಿಂದೀಚೆಗೆ ಉಭಯ ತಂಡಗಳು ಜಿದ್ದಾಜಿದ್ದಿನ ಪ್ರದರ್ಶನ ತೋರಿವೆ. 2018ರಿಂದೀಚೆಗೆ ಉಭಯ ತಂಡಗಳು ಒಟ್ಟು 9 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ 9 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಕೋಲ್ಕತಾ ನೈಟ್ ರೈಡರ್ಸ್ ತಂಡವು 4 ಬಾರಿ ಗೆದ್ದು ಬೀಗಿದೆ.

ಇದನ್ನೂ ಓದಿ: IPL 2022: ವಿರಾಟ್ ಕೊಹ್ಲಿ ಸಲೆಬ್ರೇಶನ್ ಕಾಪಿ ಮಾಡಿದ ಡೆಲ್ಲಿ ಬಾಯ್..!​

ತಂಡಗಳು ಹೀಗಿವೆ ನೋಡಿ

ಡೆಲ್ಲಿ ಕ್ಯಾಪಿಟಲ್ಸ್‌: ಪೃಥ್ವಿ ಶಾ, ಡೇವಿಡ್ ವಾರ್ನರ್‌, ಸರ್ಫರಾಜ್ ಖಾನ್‌, ರಿಷಭ್ ಪಂತ್‌(ನಾಯಕ), ಲಲಿತ್ ಯಾದವ್‌, ರೋಮನ್ ಪೋವೆಲ್‌, ಶಾರ್ದೂಲ್ ಠಾಕೂರ್‌, ಅಕ್ಷರ್ ಪಟೇಲ್‌, ಕುಲ್ದೀಪ್ ಯಾದವ್‌, ಖಲೀಲ್ ಅಹಮ್ಮದ್, ಮುಸ್ತಾಫಿಜುರ್‌ ರೆಹಮಾನ್.

ಇದನ್ನೂ ಓದಿ: IPL 2022 ಲಖನೌ ಮಣಿಸಿ ಜಯದ ಹಳಿಗೆ ಮರುಳಲು ರಾಜಸ್ಥಾನ ರಾಯಲ್ಸ್ ರೆಡಿ..!

ಕೋಲ್ಕತಾ ನೈಟ್ ರೈಡರ್ಸ್‌: ವೆಂಕಟೇಶ ಅಯ್ಯರ್‌, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್‌(ನಾಯಕ), ನಿತೀಶ್ ರಾಣಾ‌, ಸ್ಯಾಮ್ ಬಿಲ್ಲಿಂಗ್ಸ್‌, ಆಂಡ್ರೆ ರಸೆಲ್‌, ಸುನಿಲ್ ನರೈನ್‌, ಪ್ಯಾಟ್ ಕಮಿನ್ಸ್‌, ಉಮೇಶ್ ಯಾದವ್‌, ರಸಿಖ್ ಸಲಾಂ‌, ವರುಣ್ ಚಕ್ರವರ್ತಿ

ಸ್ಥಳ: ಮುಂಬೈ, ಬ್ರೆಬೋರ್ನ್‌ ಕ್ರೀಡಾಂಗಣ
ಪಂದ್ಯ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌
 

Latest Videos
Follow Us:
Download App:
  • android
  • ios