ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಐಪಿಎಲ್ ಟೂರ್ನಿಯ 27ನೇ ಲೀಗ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯ

ನವದೆಹಲಿ(ಏ.16): ಐಪಿಎಲ್ 2022 ಟೂರ್ನಿಯ 27ನೇ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮಿಚೆಲ್ ಮಾರ್ಶ್ ತಂಡ ಸೇರಿಕೊಂಡಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಲ ಹೆಚ್ಚಾಗಿದೆ. ವೇಗಿ ಹರ್ಷಲ್ ಪಟೇಲ್ ತಂಡಕ್ಕೆ ವಾಪಾಸ್ಸಾಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11
ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಶ್, ರಿಷಬ್ ಪಂತ್(ನಾಯಕ), ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹಮ್ಮದ್

ಖದರ್ ಕಳೆದುಕೊಂಡ IPL, 14 ವರ್ಷದ ಐಪಿಎಲ್​​​ ಯಶಸ್ವಿ ಓಟಕ್ಕೆ ಬಿತ್ತಾ ಬ್ರೇಕ್​​..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ನಾಯಕ), ಅನೂಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹಮ್ಮದ್, ದಿನೇಶ್ ಕಾರ್ತಿಕ್, ಸೂಯಷ್ ಪ್ರಭುದೇಸಾಯಿ, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹೇಜಲ್‌ವುಡ್, ಮೊಹಮ್ಮದ್ ಸಿರಾಜ್

ಈ ಬಾರಿಯ ಆವೃತ್ತಿಯಲ್ಲಿ ಚೇಸಿಂಗ್ ತಂಡಗಳೇ ಹೆಚ್ಚು ಗೆಲುವು ದಾಖಲಿಸುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲೂ ಸೆಕೆಂಡ್ ಬ್ಯಾಟಿಂಗ್ ತಂಡ ಹೆಚ್ಚಿನ ಯಶಸ್ಸು ಸಾಧಿಸಿದೆ. ಈ ಆವೃತ್ತಿಯಲ್ಲಿನ 5 ಪಂದ್ಯಗಳ ಪೈಕಿ ನಾಲ್ಕು ಪಂದ್ಯಗಳು ಚೇಸಿಂಗ್ ತಂಡವೇ ಗೆದ್ದುಕೊಂಡಿದೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿದೆ. ಇನ್ನು 8ನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ 4 ಪಂದ್ಯದಲ್ಲಿ 2 ಗೆಲುವು ಹಾಗೂ 2 ಸೋಲು ಕಂಡಿದೆ. ಈ ಮೂಲಕ 4 ಅಂಕ ಸಂಪಾದಿಸಿದೆ.

ಟೀಂ ಇಂಡಿಯಾ ಕ್ಯಾಪ್ಟನ್ಸಿ ರೇಸ್‌ನಲ್ಲಿ ಮತ್ತೋರ್ವ ಕ್ರಿಕೆಟರ್, ತ್ರಿಮೂರ್ತಿಗಳಿಗೆ ಟಕ್ಕರ್ ಕೊಡ್ತಾರಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಹರ್ಷಲ್ ಪಟೇಲ್ ಅಲಭ್ಯತೆಯಲ್ಲಿ ಆಡಿತ್ತು. ಹೀಗಾಗಿ ಡೆತ್ ಓವರ್ ಸಮಸ್ಯೆ ಎದುರಿಸಿದ ಆರ್‌ಸಿಬಿ, ಚೆನ್ನೈ ವಿರುದ್ದ ಮುಗ್ಗರಿಸಿತ್ತು. ಹೀಗಾಗಿ ಮತ್ತೆ ತಂಡವನ್ನು ಗೆಲುವಿನ ಟ್ರ್ಯಾಕ್‌ಗೆ ತರಬೇಕಾದ ಜವಾಬ್ದಾರಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಮೇಲಿದೆ.

ಐಪಿಎಲ್ ಅಂಕಪಟ್ಟಿ 2022
ಐಪಿಎಲ್ 2022 ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಮೊದಲ ಸ್ಥಾನದಲ್ಲಿದೆ. ಇದುವರೆಗೆ 5 ಪಂದ್ಯಗಳನ್ನಾಡಿರುವ ಗುಜರಾತ್ ಟೈಟಾನ್ಸ್ 4ರಲ್ಲಿ ಗೆಲುವು ಕಂಡಿದೆ. ಇನ್ನು ರಾಜಸ್ಥಾನ ರಾಯಲ್ಸ್ 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿ ಎರಡನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 5 ಪಂದ್ಯದಲ್ಲಿ 3 ಗೆಲುವು ದಾಖಲಿಸಿ ಮೂರನೇ ಸ್ಥಾನ ಅಲಂಕರಿಸಿದೆ. ಕೋಲ್ಕತಾ ನೈಟ್ ರೈಡರ್ಸ್ 6 ಪಂದ್ಯಗಳನ್ನಾಡಿದ್ದು 3 ಪಂದ್ಯದಲ್ಲಿ ಗೆಲುವು ಕಂಡಿದೆ. ಇದರೊಂದಿಗೆ 6 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಲಖನೌ ಸೂಪರ್ ಜೈಂಟ್ಸ್ 5 ಪಂದ್ಯಗಳ ಪೈಕಿ 3 ಪಂದ್ಯಗಳನ್ನು ಗೆದ್ದುಕೊಂಡು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು 6ನೇ ಸ್ಥಾನದಲ್ಲಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ 5 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿ 7ನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ 8ನೇ ಸ್ಥಾನದಲ್ಲಿದೆ. 5 ಪಂದ್ಯಗಳ ಪೈಕಿ ಕೇವಲ 1 ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ 9ನೇ ಸ್ಥಾನದಲ್ಲಿದೆ. ಇನ್ನು 5 ಪಂದ್ಯಗಳನ್ನಾಡಿ ಇದುವರೆಗೂ ಒಂದೇ ಒಂದು ಗೆಲವು ದಾಖಲಿಸಿದ ಮುಂಬೈ ಇಂಡಿಯನ್ಸ್ 10ನೇ ಹಾಗೂ ಕೊನೆಯ ಸ್ಥಾನದಲ್ಲಿದೆ.