Asianet Suvarna News Asianet Suvarna News

IPL 2022: ಕೆಕೆಆರ್ ತಂಡದ ಬೌಲಿಂಗ್ ಕೋಚ್ ಆಗಿ ಭರತ್ ಅರುಣ್ ನೇಮಕ..!

* ಕೆಕೆಆರ್ ತಂಡದ ಬೌಲಿಂಗ್‌ ಕೋಚ್‌ ಆಗಿ ಭರತ್ ಅರುಣ್ ನೇಮಕ

* ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿರುವ ಭರತ್

* ಎರಡು ಬಾರಿ ಐಪಿಎಲ್‌ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಕೆಕೆಆರ್

IPL 2022 Kolkata Knight Riders rope in Bharat Arun as bowling coach kvn
Author
Bengaluru, First Published Jan 15, 2022, 6:03 PM IST

ಕೋಲ್ಕತಾ(ಜ.15): ಭಾರತ ಕ್ರಿಕೆಟ್ ತಂಡದ (Indian Cricket Team) ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್ (Bharat Arun) ಮುಂಬರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. 2022ರ ಐಪಿಎಲ್‌ ಟೂರ್ನಿಯಲ್ಲಿ ಭರತ್ ಅರುಣ್ ಕೆಕೆಆರ್ (KKR) ತಂಡದ ಬೌಲಿಂಗ್ ಕೋಚ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ನ್ಯೂಜಿಲೆಂಡ್ ತಂಡದ ಮಾಜಿ ವೇಗದ ಬೌಲರ್ ಕೈಲ್‌ ಮಿಲ್ಸ್‌(Kyle Mills) ಕೆಕೆಆರ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 

ಭರತ್ ಅರುಣ್, ದೇಶಿ ಕ್ರಿಕೆಟ್‌ನಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸುತ್ತಿದ್ದರು. ಇನ್ನು ಭರತ್ ಭಾರತ ಪರ 2 ಟೆಸ್ಟ್ ಹಾಗೂ 4 ಏಕದಿನ ಪಂದ್ಯಗಳನ್ನು ಸಹ ಆಡಿದ್ದಾರೆ. ಟೀಂ ಇಂಡಿಯಾ ಹೆಡ್ ಕೋಚ್ ಆಗಿದ್ದ ರವಿಶಾಸ್ತ್ರಿ ಜತೆ ಭರತ್ ಅರುಣ್ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ರವಿಶಾಸ್ತ್ರಿ (Ravi Shastri) ಕೋಚ್ ಒಪ್ಪಂದಾವಧಿ ಮುಗಿಯುತ್ತಿದ್ದಂತೆಯೇ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಹಾಗೂ ಹಾಗೂ ಭರತ್ ಅರುಣ್ ಅವರ ಒಪ್ಪಂದಾವಧಿಯು ಸಹ ಮುಕ್ತಾಯವಾಗಿತ್ತು. ಭರತ್ ಅರುಣ್ ಈ ಮೊದಲು ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ (National Cricket Academy) ಬೌಲಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಇನ್ನು 2012ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕಿರಿಯರ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ವೇಳೆ ಕೂಡಾ ಭರತ್ ಅರುಣ್ ಭಾರತ ಅಂಡರ್ 19 ಬೌಲಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಐಪಿಎಲ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದು ಎನಿಸಿರುವ ಕೋಲ್ಕತಾ ನೈಟ್‌ ರೈಡರ್ಸ್ ತಂಡದ ಭಾಗವಾಗುತ್ತಿರುವುದಕ್ಕೆ ನನಗೆ ತುಂಬಾ ಖುಷಿಯಾಗಿದೆ. ನಾನು ಈ ಫ್ರಾಂಚೈಸಿಯ ಪರ ಕೆಲಸ ಮಾಡಲು ಉತ್ಸುಕರಾಗಿದ್ದೇನೆ ಎಂದು ತಿಳಿಸಿದ್ದಾರೆ. 

IPL 2022: ಲಖನೌ ತಂಡಕ್ಕೆ ರಾಹುಲ್‌ ಜತೆಗೆ ಇನ್ನಿಬ್ಬರು ಅಚ್ಚರಿಯ ಆಟಗಾರರ ರೀಟೈನ್‌..?

ಗೌತಮ್ ಗಂಭೀರ್ (Gautam Gambhir) ನಾಯಕತ್ವದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ತಂಡವು 2012 ಹಾಗೂ 2014ರಲ್ಲಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಮತ್ತೆ ಕಪ್‌ ಗೆಲ್ಲಲು ವಿಫಲವಾಗುತ್ತಲೇ ಬಂದಿದೆ. ಇನ್ನು 2021ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಫೈನಲ್ ಪ್ರವೇಶಿಸಿತ್ತಾದರೂ, ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಗ್ಗರಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕುವ ಅವಕಾಶವನ್ನು ಕೈಚೆಲ್ಲಿತ್ತು.

Under 19 World Cup: ಭಾರತಕ್ಕಿಂದು ದಕ್ಷಿಣ ಆಫ್ರಿಕಾ ಎದುರಾಳಿ

ಜಾಜ್‌ರ್‍ಟೌನ್‌(ಗಯಾನಾ): ದಾಖಲೆಯ 4 ಬಾರಿ ಚಾಂಪಿಯನ್‌ ಭಾರತ, 14ನೇ ಆವೃತ್ತಿಯ ಅಂಡರ್‌-19 ಏಕದಿನ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಶನಿವಾರ ಅಭಿಯಾನ ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಭಾರತಕ್ಕೆ ದ.ಆಫ್ರಿಕಾ ಎದುರಾಗಲಿದ್ದು, ಈ ಪಂದ್ಯದಲ್ಲಿ ಗೆದ್ದರೆ ಭಾರತದ ಕ್ವಾರ್ಟರ್‌ ಫೈನಲ್‌ ಹಾದಿ ಸುಗಮಗೊಳ್ಳಲಿದೆ. ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತಕ್ಕೆ ಮುಂದಿನ 2 ಪಂದ್ಯಗಳಲ್ಲಿ ಐರ್ಲೆಂಡ್‌ ಹಾಗೂ ಉಗಾಂಡ ಎದುರಾಗಲಿವೆ.

ಏಷ್ಯಾಕಪ್‌ನಲ್ಲಿ ಚಾಂಪಿಯನ್‌ ಆದ ಬಳಿಕ ದುಬೈನಿಂದ ನೇರವಾಗಿ ವೆಸ್ಟ್‌ಇಂಡೀಸ್‌ಗೆ ತಲುಪಿದ ಭಾರತ, ಟ್ರೋಫಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿದೆ. ದೆಹಲಿಯ ಯಶ್‌ ಧುಳ್‌ ತಂಡವನ್ನು ಮುನ್ನಡೆಸಲಿದ್ದು, ಪ್ರತಿಭಾವಂತ ಆಟಗಾರರನ್ನು ತಂಡ ಒಳಗೊಂಡಿದೆ. ಹಿಂದಿನ ಆವೃತ್ತಿಯ ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಸೋತಿದ್ದ ಭಾರತ ರನ್ನರ್‌-ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟಿತ್ತು.

ಪಂದ್ಯ ಆರಂಭ: ಸಂಜೆ 7.30ಕ್ಕೆ,
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌
 

Follow Us:
Download App:
  • android
  • ios