ಕೋಲ್ಕತಾ vs ಮುಂಬೈ ನಡುವಿನ ಲೀಗ್ ಪಂದ್ಯ ಟಾಸ್ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ಬೌಲಿಂಗ್ ಆಯ್ಕೆ ಪುಣೆಯಲ್ಲಿ ನಡೆಯುತ್ತಿರುವ ಪಂದ್ಯ
ಪುಣೆ(ಏ.06): ಗೆಲುವಿಗಾಗಿ ಹಂಬಲಿಸುತ್ತಿರುವ ಮುಂಬೈ ಇಂಡಿಯನ್ಸ್ ಇಂದು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದೃಷ್ಠ ಪರೀಕ್ಷೆಗೆ ಇಳಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೋಲ್ಕತಾ ನೈಟ್ ರೈಡರ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕೋಲ್ಕತಾ ತಂಡಕ್ಕೆ ರಸಿಖ್ ಸಲಾಮ್ ಪದಾರ್ಪಣೆ ಮಾಡಿದ್ದಾರೆ. ಮುಂಬೈ ತಂಡಕ್ಕೆ ಸೂರ್ಯಕುಮಾರ್ ಯಾದವ್ ವಾಪಸ್ ಆಗಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡಿರುವ ಸೂರ್ಯಕುಮಾರ್ ಮುಂಬೈ ತಂಡದ ಬಲ ಹೆಚ್ಚಿಸಿದ್ದಾರ. ಇನ್ನು ಟಿಮ್ ಡೇವಿಡ್ ಬದಲು ಡೇವಾಲ್ಡ್ ಬ್ರಿವಿಸ್ ಮುಂಬೈ ತಂಡ ಸೇರಿಕೊಂಡಿದ್ದಾರೆ.
ಕೋಲ್ಕತಾ ನೈಟ್ ರೈಡರ್ಸ್ ಪ್ಲೇಯಿಂಗ್ 11
ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ನಿತೀಶ್ ರಾಣ, ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಮ್, ವರುಣ್ ಚಕ್ರವರ್ತಿ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ಇಶಾನ್ ಕಿಶನ್, ರೋಹಿತ್ ಶರ್ಮಾ(ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ಡ್ಯಾನಿಯಲ್ ಸ್ಯಾಮ್ಸ್, ಡೇವಾಲ್ಡ್ ಬ್ರೇವಿಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಸಿಲ್ ಥಂಪಿ
ಪುಣೆ ಮೈದಾನದಲ್ಲಿ ಕಳೆದೆರಡು ಪಂದ್ಯದಲ್ಲಿ ಡ್ಯೂ ಹೆಚ್ಚಿನ ಸಮಸ್ಸೆಯಾಗಿಲ್ಲ. ಬೌಲರ್‌ಗಳು ಉತ್ತಮ ಪ್ರದರ್ಶನದ ಮೂಲಕ ಸ್ಕೋರ್ ಢಿಪೆಂಡ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಬೌಲರ್‌ಗಳು ಹೆಚ್ಚು ಪರಾಕ್ರಮ ತೋರಿದ್ದಾರೆ.
10 IPL ಟ್ರೋಫಿ ಗೆದ್ದಿರುವ 3 ತಂಡಗಳು ಒಂದೂ ಪಂದ್ಯ ಗೆದ್ದಿಲ್ಲ..!
ಅದ್ಭುತ ಪ್ರದರ್ಶನದೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಸಂಪಾದಿಸಿದೆ. ಆಡಿದ 3 ಪಂದ್ಯದಲ್ಲಿ 2 ಗೆಲುವು ಕಂಡಿರುವ ಕೆಕೆಆರ್ ಇದೀಗ 3ನೇ ಗೆಲುವಿಗೆ ಹೊಂಚು ಹಾಕಿದೆ. ಆದರೆ ಮುಂಬೈ ಇಂಡಿಯನ್ಸ್ ಆರಂಭಿಕ ಎರಡೂ ಪಂದ್ಯಗಳನ್ನು ಸೋತಿದೆ. ಪರಿಣಾಮ ಅಂಕಪಟ್ಟಿಯಲ್ಲಿ 8ನೇ ಸ್ಛಾನದಲ್ಲಿದೆ.
ಮುಂಬೈ ಇಂಡಿಯನ್ಸ್ ತಂಡ ಅತ್ಯುತ್ತಮ ಆಟಗಾರರನ್ನು ಹೊಂದಿದೆ. ಆದರೆ ನಿರೀಕ್ಷಿತ ಫಲಿತಾಂಶ ಬರುತ್ತಿಲ್ಲ. ಗೆಲುವಿನ ಖಾತೆ ತೆರೆಯದ ಮುಂಬೈ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇತ್ತ ಕೆಕೆಆರ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ಮತ್ತೊಂದು ಗೆಲುವಿಗೆ ಸಜ್ಜಾಗಿದ್ದಾರೆ.
IPL 2022: ಈ ಭಾರತೀಯ ಯುವ ಆಟಗಾರರು ಸಖತ್ ಫಿಟ್ನೆಸ್ ಫ್ರೀಕ್!
ಐಪಿಎಲ್ ಅಂಕಪಟ್ಟಿ:
ಸೋಲಿಲ್ಲದ ಸರದಾರನಾಗಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದ ರಾಜಸ್ಥಾನ ರಾಯಲ್ಸ್, ಆರ್‌ಸಿಬಿ ವಿರುದ್ಧ ಮುಗ್ಗರಿಸಿತ್ತು. ಆದರೂ ಉತ್ತಮ ರನ್‌ರೇಟ್ ಹೊಂದಿರುವ ರಾಜಸ್ಥಾನ 2 ಗೆಲುವು 4 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಇನ್ನು ಕೆಕೆಆರ್ 4 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್ 2ರಲ್ಲಿ 2 ಗೆಲುವು ಸಾಧಿಸಿ 3ನೇ ಸ್ಥಾನದಲ್ಲಿದೆ. ಇನ್ನು ಪಂಜಾಬ್ ಕಿಂಗ್ಸ್ 3 ಪಂದ್ಯದಲ್ಲಿ 2 ಗೆಲುವು ಸಾಧಿಸಿ 4ನೇ ಸ್ಥಾನದಲ್ಲಿದೆ. ಲಖನೌ ಸೂಪರ್ ಜೈಂಟ್ಸ್ 3 ಪಂದ್ಯದಲ್ಲಿ 2 ಗೆಲುವು ದಾಖಲಿಸಿ 5ನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3ರಲ್ಲಿ 2 ಗೆಲವು ಕಂಡಿದೆ. ಈ ಮೂಲಕ 6ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ 2ರಲ್ಲಿ 1 ಪಂದ್ಯ ಗೆದ್ದು 7ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 2 ಪಂದ್ಯದಲ್ಲಿ 2ರಲ್ಲೂ ಸೋಲು ಕಂಡಿದೆ. ಮುಂಬೈ 8ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 3 ಪಂದ್ಯಗಳನ್ನೂ ಸೋತು 9ನೇ ಸ್ಥಾನದಲ್ಲಿದೆ. ಇನ್ನು 10ನೇ ಕೊನೆಯ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ಆಡಿದ 2 ಪಂದ್ಯದಲ್ಲೂ ಸೋತಿದೆ.
