ಸತತ 4 ಪಂದ್ಯ ಸೋತಿರುವ ಮುಂಬೈ ಇಂಡಿಯನ್ಸ್ ಪಂಜಾಬ್ ವಿರುದ್ಧ ಟಾಸ್ ಗೆದ್ದ ರೋಹಿತ್ ಪಡೆ ಪುಣೆಯಲ್ಲಿ ನಡೆಯುತ್ತಿರುವ ಪಂದ್ಯ

ಪುಣೆ(ಏ.13): ಐಪಿಎಲ್ ಟೂರ್ನಿಯ 23ನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಮನದೀಪ್ ಬದಲು ಟೈಮಲ್ ಮಿಲ್ಸ್ ತಂಡ ಸೇರಿಕೊಂಡಿದ್ದಾರೆ. ಇತ್ತ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಡೇವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೋಲಾರ್ಡ್, ಜಯದೇವ್ ಉನದ್ಕಟ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಸಿಲ್ ಥಂಪಿ

IPL 2022: ಮುಂಬೈ ಇಂಡಿಯನ್ಸ್​​ಗೂ ಮೆಗಾ ಹರಾಜಿಗೂ ಆಗಿ ಬರಲ್ವಾ..?

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಮಯಾಂಕ್ ಅಗರ್ವಾಲ್(ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಒಡನೆ ಸ್ಮಿತ್, ಶಾರುಖ್ ಖಾನ್, ಕಾಗಿಸೋ ರಬಾಡ, ರಾಹುಲ್ ಚಹಾರ್, ವೈಭವ್ ಆರೋರಾ, ಅರ್ಶದೀಪ್ ಸಿಂಗ್

ಮುಂಬೈ ಇಂಡಿಯನ್ಸ್ ತೀವ್ರ ಒತ್ತಡದಲ್ಲಿದೆ. ಅತಿರಥ ಮಹಾರಥರು ತಂಡದಲ್ಲಿದ್ದರೂ ಗೆಲುವು ಮಾತ್ರ ಸಿಗುತ್ತಿಲ್ಲ. ಹಾಗಾಂತ ಮುಂಬೈ ಸಪೋರ್ಟ್ ಸ್ಟಾಫ್ ಆತಂಕ್ಕೆ ಒಳಗಾಗಿಲ್ಲ. ಕಾರಣ ಈ ಹಿಂದಿನ ಆವೃತ್ತಿಗಳಲ್ಲೂ ಮುಂಬೈ ಈ ರೀತಿಯ ಪರಿಸ್ಥಿತಿ ಎದುರಿಸಿದೆ. ಸತತ ಸೋಲಿನ ಬಳಿಕ ಮಿಂಚಿನ ವೇಗದಲ್ಲಿ ಪಂದ್ಯ ಗೆದ್ದು ಟ್ರೋಫಿ ಗೆದ್ದ ಊದಾಹರಣೆಗಳು ಇವೆ. ಇದೀಗ ಮುಂಬೈ ಶುಭಾರಂಭಕ್ಕೆ ಕಾಯುತ್ತಿದೆ.

IPL 2022: ವಿಶ್ವದ ನಂ.1 ಟಿ20 ಲೀಗ್​ ಜನಪ್ರಿಯತೆ ಕಳೆದುಕೊಳ್ತಾ..?

ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ದಿಟ್ಟ ಹೋರಾಟ ನೀಡಲು ಸಜ್ಜಾಗಿದೆ. ಸೋಲಿನಿಂದ ಕಂಗೆಟ್ಟಿರುವ ಮುಂಬೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಬಡ್ತಿ ಪಡೆಯಲು ಪಂಜಾಬ್ ಕಿಂಗ್ಸ್ ರೆಡಿಯಾಗಿದೆ.ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ 7ನೇ ಸ್ಥಾನದಲ್ಲಿದೆ. ಅಡಿದ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿದೆ. ಇತ್ತ ಮುಂಬೈ ಇಂಡಿಯನ್ಸ್ 4 ಪಂದ್ಯಗಳನ್ನು ಸೋತು ಕೊನೆಯ ಸ್ಥಾನದಲ್ಲಿದೆ. 

ಐಪಿಎಲ್ ಅಂಕಪಟ್ಟಿ 2022
2022ರ ಐಪಿಎಲ್ ಇದುವರೆಗೆ ಲೀಗ್ ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್ ಮೊದಲ ಸ್ಥಾನದಲ್ಲಿದೆ. ರಾಯಲ್ಸ್ 4ರಲ್ಲಿ 3 ಪಂದ್ಯಗಳನ್ನು ಗೆದ್ದು ಮೊದಲ ಸ್ಥಾನ ಅಲಂಕರಿಸಿದೆ. ಇನ್ನು ಎರಡನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ 5 ಪಂದ್ಯದಲ್ಲಿ 3 ಗೆಲುವು ಹಾಗೂ 2 ಸೋಲು ಕಂಡಿದೆ. ಲಖನೌ ಸೂಪರ್ ಜೈಂಟ್ಸ್ 5 ರಲ್ಲಿ 3 ಗೆಲವು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಗುಜರಾತ್ ಟೈಟಾನ್ಸ್ 4ರಲ್ಲಿ 3 ಗೆಲುವಿನ ಮೂಕ 4ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ವಿರುದ್ಧ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಸ್ಥಾನ ಕುಸಿತ ಕಂಡು 5ನೇ ಸ್ಥಾನಕ್ಕೆ ಜಾರಿದೆ. ಡೆಲ್ಲಿ ಕ್ಯಾಪಿಟಲ್ಸ್ 4ರಲ್ಲಿ 2 ಗೆಲುವು ಸಾಧಿಸಿ 6ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 4ರಲ್ಲಿ 2 ಗೆಲುವು ಸಾಧಿಸಿ 7ನೇ ಸ್ಥಾನದಲ್ಲಿದೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ ಸತತ 2 ಗೆಲುವಿನ ಮೂಲಕ 8ನೇ ಸ್ಥಾನದಲ್ಲಿದೆ. ಆರ್‌ಸಿಬಿ ವಿರುದ್ದದ ಗೆಲುವಿನ ಮೂಲಕ ಮೊದಲ ಸಿಹಿ ಕಂಡ ಚೆನ್ನೈ ಸೂಪರ್ ಕಿಂಗ್ಸ್ 9ನೇ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ 10 ನೇ ಸ್ಥಾನದಲ್ಲಿದೆ.