IPL 2022: ಸ್ವಿಮ್ಮಿಂಗ್ ಫೂಲ್‌ನಲ್ಲಿ ಕ್ಯಾಚಿಂಗ್ ಅಭ್ಯಾಸ ಮಾಡಿದ ಧವನ್, ಜಾಂಟಿ ರೋಡ್ಸ್..!
* ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿರುವ ಪಂಜಾಬ್ ಕಿಂಗ್ಸ್
* ಮುಂಬೈ ಇಂಡಿಯನ್ಸ್ ವಿರುದ್ದದ ಗೆದ್ದು ಬೀಗಿದ ಪಂಜಾಬ್
* ಸ್ವಿಮ್ಮಿಂಗ್ ಫೂಲ್‌ನಲ್ಲಿ ಕ್ಯಾಚಿಂಗ್ ಅಭ್ಯಾಸ ನಡೆಸಿದ ಶಿಖರ್ ಧವನ್
ಮುಂಬೈ(ಏ.15) ಭಾರತದ ಚುಟುಕು ಕ್ರಿಕೆಟ್ ಹಬ್ಬ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ಸಿಗುತ್ತಿದೆ. ಕೋವಿಡ್ ಭೀತಿಯಿಂದಾಗಿ (COVID 19) ಬಯೋಬಬಲ್‌ನೊಳಗೆ ಐಪಿಎಲ್ ಪಂದ್ಯಾವಳಿಗಳು ನಡೆಯುತ್ತಿವೆ. ಹೀಗಿರುವಾಗಲೇ ಸಿಕ್ಕ ಅವಕಾಶಗಳನ್ನೇ ಕೆಲವು ಅವಕಾಶಗಳನ್ನು ಎಂಜಾಯ್ ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಪಂಜಾಬ್ ಕಿಂಗ್ಸ್ (Punjab Kings) ತಂಡದ ಆರಂಭಿಕ ಬ್ಯಾಟರ್ ಶಿಖರ್ ಧವನ್, ತಮ್ಮ ತಂಡದ ಕೋಚ್ ಜಾಂಟಿ ರೋಡ್ಸ್ ಜತೆ ಸ್ವಿಮ್ಮಿಂಗ್ ಫೂಲ್‌ನಲ್ಲಿ ಕ್ಯಾಚ್ ಹಿಡಿಯುವ ಪ್ರಾಕ್ಟೀಸ್ ಮಾಡಿ ಗಮನ ಸೆಳೆದಿದ್ದಾರೆ.
5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ದ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡದ ಆಟಗಾರರು ರಿಲ್ಯಾಕ್ಸ್ ಮೂಡಿಗೆ ತೆರಳಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಶಿಖರ್ ಧವನ್ ಹಾಗೂ ಕೋಚ್ ಜಾಂಟಿ ರೋಡ್ಸ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ಫುಲ್ ಡೈವ್ ಕ್ಯಾಚ್ ಹಿಡಿಯುವ ಅಭ್ಯಾಸ ನಡೆಸಿ ಗಮನ ಸೆಳೆದರು. ಕ್ಯಾಚ್ ಹಿಡಿದ ಬಳಿಕ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಹೈ ಫೈವ್ ಮಾಡಿ ಗಮನ ಸೆಳೆದರು.
ಈ ವಿಡಿಯೋವನ್ನು ಶಿಖರ್ ಧವನ್ ತಮ್ಮ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. 36 ವರ್ಷದ ಶಿಖರ್ ಧವನ್ ಇತ್ತೀಚೆಗಷ್ಟೇ ಜಾಂಟಿ ರೋಡ್ಸ್ ಜತೆ ಸ್ವಿಮ್ಮಿಂಗ್ ಫೂಲ್‌ನಲ್ಲಿ ಕ್ಯಾಂಚಿಂಗ್ ಅಭ್ಯಾಸ ನಡೆಸಿದ ವಿಡಿಯೋವನ್ನು ಹಂಚಿಕೊಂಡಿದ್ದು, ದಿಗ್ಗಜ ಆಟಗಾರ ಜಾಂಟಿ ರೋಡ್ಸ್ ಜತೆ ಕ್ಯಾಚಿಂಗ್ ಅಭ್ಯಾಸ ನಡೆಸುತ್ತಿರುವುದು ಎಂದು ಬರೆದುಕೊಂಡಿದ್ದಾರೆ.
IPL 2022: ಸನ್‌ರೈಸರ್ಸ್ ಪರ ವಾಷಿಂಗ್ಟನ್ ಸುಂದರ್ ಸ್ಥಾನ ತುಂಬೋರು ಯಾರು..?
ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಂಜಾಬ್ ಕಿಂಗ್ಸ್ ತಂಡಕ್ಕೆ ಅರಂಭಿಕ ಬ್ಯಾಟರ್‌ಗಳಾದ ಶಿಖರ್ ಧವನ್ ಹಾಗೂ ಮಯಾಂಕ್ ಅಗರ್‌ವಾಲ್ ಉತ್ತಮ ಆರಂಭ ಒದಗಿಸಿಕೊಟ್ಟರು. ಮೊದಲ 10 ಓವರ್‌ಗಳಲ್ಲಿ 97 ರನ್‌ಗಳ ಜತೆಯಾಟವನ್ನು ಈ ಜೋಡಿ ನಿಭಾಯಿಸಿತು. ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ 15 ಎಸೆತಗಳಲ್ಲಿ 30 ರನ್ ಬಾರಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಇನ್ನು 199 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಯುವ ಕ್ರಿಕೆಟರ್‌ಗಳಾದ ತಿಲಕ್ ವರ್ಮಾ ಹಾಗೂ ಡೇವಾಲ್ಡ್ ಬ್ರೆವೀಸ್ ಉತ್ತಮ ಬ್ಯಾಟಿಂಗ್ ನಡೆಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಟೂರ್ನಿಯಲ್ಲಿ ಸತತ 5ನೇ ಸೋಲು ಕಂಡಿತು.