Asianet Suvarna News Asianet Suvarna News

IPL 2022: ರಾಜಸ್ಥಾನ ರಾಯಲ್ಸ್ ಎದುರು ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ

* ಮುಂಬೈನ ವಾಂಖೇಡೆ ಮೈದಾನದಲ್ಲಿ ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ

* ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌- ರಾಜಸ್ಥಾನ ರಾಯಲ್ಸ್ ಮುಖಾಮುಖಿ

* ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ

IPL 2022 Punjab Kings won the toss and elected to bat first against Rajasthan Royals kvn
Author
Bengaluru, First Published May 7, 2022, 3:06 PM IST | Last Updated May 7, 2022, 3:12 PM IST

ಮುಂಬೈ(ಮೇ.07): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯ 52ನೇ ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ (Rajasthan Royals) ಹಾಗೂ ಪಂಜಾಬ್ ಕಿಂಗ್ಸ್‌ (Punjab Kings) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಮಯಾಂಕ್‌ ಅಗರ್‌ವಾಲ್ (Mayank Agarwal) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯವನ್ನು ವಹಿಸಿದೆ.

ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಪಂಜಾಬ್ ಕಿಂಗ್ಸ್‌ ತಂಡವು ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕರುಣ್ ನಾಯರ್ (Karun Nair) ಬದಲಿಗೆ ಯಶಸ್ವಿ ಜೈಸ್ವಾಲ್ (Yashasvi Jaiswal) ತಂಡ ಕೂಡಿಕೊಂಡಿದ್ದಾರೆ.

ಟೂರ್ನಿಯಲ್ಲಿ ಭರ್ಜರಿ ಆರಂಭವನ್ನು ಪಡೆದಿದ್ದ ರಾಜಸ್ಥಾನ ರಾಯಲ್ಸ್ ತಂಡವು ಮಹತ್ವದ ಘಟ್ಟದಲ್ಲಿ ತಮ್ಮ ಲಯವನ್ನು ಕಳೆದುಕೊಂಡಿದ್ದು, ಸತತ ಎರಡು ಪಂದ್ಯಗಳನ್ನು ಸೋತಿರುವ ಸಂಜು ಸ್ಯಾಮ್ಸನ್ ಪಡೆ ಇದೀಗ ಹ್ಯಾಟ್ರಿಕ್ ಸೋಲಿನ ಭೀತಿಗೆ ಸಿಲುಕಿದೆ. ರಾಜಸ್ಥಾನ ರಾಯಲ್ಸ್‌ ಪರ ಮೊದಲ 7 ಪಂದ್ಯಗಳಲ್ಲಿ ಜೋಸ್ ಬಟ್ಲರ್‌ 491 ರನ್ ಸಿಡಿಸಿದ್ದರು, ಆದರೆ ಕಳೆದ ಮೂರು ಪಂದ್ಯಗಳಿಂದ ಬಟ್ಲರ್ ಬ್ಯಾಟಿಂದ ಕೇವಲ 97 ರನ್‌ಗಳು ಮಾತ್ರ ಬಂದಿವೆ. ಇನ್ನೊಂದೆಡೆ ಯುಜುವೇಂದ್ರ ಚಹಲ್ ಕೂಡಾ ಮೊದಲ 7 ಇನಿಂಗ್ಸ್‌ಗಳಲ್ಲಿ 18 ವಿಕೆಟ್ ಕಬಳಿಸಿದ್ದರು, ಆದರೆ ಕಳೆದ ಮೂರು ಇನಿಂಗ್ಸ್‌ಗಳಿಂದ ಚಹಲ್ ಗಳಿಸಿದ್ದು ಕೇವಲ ಒಂದು ವಿಕೆಟ್ ಮಾತ್ರ. ಈ ಇಬ್ಬರು ಆಟಗಾರರ ಜತೆಗೆ ನಾಯಕ ಸಂಜು ಸ್ಯಾಮ್ಸನ್, ಶಿಮ್ರೊನ್‌ ಹೆಟ್ಮೇಯರ್ ಬ್ಯಾಟಿಂಗ್‌ನಲ್ಲಿ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ. ಇನ್ನು ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್‌, ಪ್ರಸಿದ್ಧ್ ಕೃಷ್ಣ ಹಾಗೂ ಕುಲ್ದೀಪ್ ಸೆನ್‌ ಕೂಡ ಮಿಂಚ ಬೇಕಿದೆ.

ತಂಡಗಳು ಹೀಗಿವೆ ನೋಡಿ

ರಾಜಸ್ಥಾನ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ& ವಿಕೆಟ್ ಕೀಪರ್), ಶಿಮ್ರೊನ್ ಹೆಟ್ಮೇಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್‌, ಪ್ರಸಿದ್ದ್ ಕೃಷ್ಣ, ಯುಜುವೇಂದ್ರ ಚಹಲ್, ಕುಲ್ದೀಪ್ ಸೆನ್

ಪಂಜಾಬ್ ಕಿಂಗ್ಸ್‌: ಮಯಾಂಕ್ ಅಗರ್‌ವಾಲ್(ನಾಯಕ), ಶಿಖರ್ ಧವನ್, ಜಾನಿ ಬೇರ್‌ಸ್ಟೋವ್, ಭನುಕಾ ರಾಜಪಕ್ಸ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಷಿ ಧವನ್, ಕಗಿಸೋ ರಬಾಡ, ರಾಹುಲ್ ಚಹರ್, ಆರ್ಶದೀಪ್ ಸಿಂಗ್, ಸಂದೀಪ ಶರ್ಮಾ

ಸ್ಥಳ: ಮುಂಬೈ, ವಾಂಖೇಡೆ ಸ್ಟೇಡಿಯಂ
ಪಂದ್ಯ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

Latest Videos
Follow Us:
Download App:
  • android
  • ios