SRH vs GT ನಡವಿನ ಐಪಿಎಲ್ ಲೀಗ್ ಪಂದ್ಯ ಟಾಸ್ ಗೆದ್ದ ಸನ್‌ರೈಸರ್ಸ್ ಬೌಲಿಂಗ್ ಆಯ್ಕೆ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯ
ಮುಂಬೈ(ಏ.11): ಐಪಿಎಲ್ ಟೂರ್ನಿಯ 21 ಲೀಗ್ ಪಂದ್ಯದಲ್ಲಿಂದು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಫೀಲ್ದಿಂಗ್ ಆಯ್ಕೆ ಮಾಡಿಕೊಂಡಿದೆ. ಹೈದರಾಬಾದ್ ಹಾಗೂ ಗುಜರಾತ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಡ್ಯೂ ಫ್ಯಾಕ್ಟರ್ ಕಾರಣ ಚೇಸಿಂಗ್ ಮಾಡಲು ಬೌಲಿಂಗ್ ಆಯ್ಕೆ ಮಾಡಿರುವುದಾಗಿ ನಾಯಕ ಕೇನ್ ವಿಲಿಯಮ್ಸನ್ ಹೇಳಿದ್ದಾರೆ. ಗುಜರಾತ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿ, ಟಾರ್ಗೆಟ್ ಚೇಸ್ ಮಾಡುವುದಾಗಿ ವಿಲಿಮ್ಸನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ನಾಯಕ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಆ್ಯಡಿನ್ ಮಕ್ಮ್, ಶಶಾಂಕ್ ಸಿಂಗ್, ವಾಶಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾಕ್ರೋ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ಮ್ಯಾಥ್ಯೂ ವೇಡ್, ಶುಬ್‌ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲ್ಯೂಕಿ ಫರ್ಗ್ಯೂಸನ್, ಮೊಹಮ್ಮದ್ ಶಮಿ, ದರ್ಶನ್ನ ನಲ್ಕಂಡೆ
ರವಿಚಂದ್ರನ್ ಅಶ್ವಿನ್ ರಿಟೈರ್ ಔಟ್..! ಹಾಗಂದರೇನು..? ನಿಯಮವೇನು ಹೇಳುತ್ತೆ..?
ಐಪಿಎಲ್ 2022 ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಗುರುತಿಸಿಕೊಂಡಿರುವ ಗುಜರಾತ್ ಹಾಗೂ ಸತತ ಎರಡು ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿದ ಸನ್‌ರೈಸರ್ಸ್ ನಡುವಿನ ಹೋರಾಟ ತೀವ್ರ ಕುತೂಹಲ ಕೆರಳಿಸಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಚೇಸಿಂಗ್ ಮಾಡಿದ ತಂಡಕ್ಕೆ ಹೆಚ್ಚಿನ ಯಶಸ್ಸು ಲಭಿಸಿದೆ.
ಮೊಹಮ್ಮದ್ ಶಮಿ ಮಾರಕ ದಾಳಿ ಗುಜರಾತ್ ಟೈಟಾನ್ಸ್ ತಂಡಕ್ಕೆ ವರವಾಗಲಿದೆ. ಕಾರಣ ಐಪಿಎಲ್ ಟೂರ್ನಿಯಲ್ಲಿ ಮೊಹಮ್ಮದ್ ಶಮಿ ನಾಲ್ಕು ಬಾರಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಕೇನ್ ವಿಲಿಯಮ್ಸನ್ ವಿಕೆಟ್ ಕಬಳಿಸಿದ್ದಾರೆ. ಇಂದೂ ಕೂಡ ಶಮಿಗೆ ವಿಕೆಟ್ ಒಪ್ಪಿಸುತ್ತಾರಾ ಅನ್ನೋ ಕುತೂಹಲ ಮನೆ ಮಾಡಿದೆ.
IPL 2022: RCB ವಿಕ್ಟರಿ ಸಾಂಗ್ ತಯಾರಾಗಿದ್ದೇಗೆ ಗೊತ್ತಾ..?
ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ 3 ಪಂದ್ಯದಲ್ಲಿ 3ರಲ್ಲೂ ಗೆಲುವು ದಾಖಲಿಸಿ 3ನೇ ಸ್ಥಾನದಲ್ಲಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ಆಡಿದ 3ರಲ್ಲಿ 1 ಗೆಲುವು ಕಂಡು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಆರಂಭಿಕ ಎರಡು ಪಂದ್ಯ ಸೋತಿದ್ದ ಹೈದರಾಬಾದ್ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿತ್ತು. ಈ ಮೂಲಕ ಸೋಲಿನಿಂದ ಗೆಲುವಿನ ಹಳಿಗೆ ಮರಳಿತ್ತು.
ಐಪಿಎಲ್ ಅಂಕಪಟ್ಟಿ
ಇದುವರೆಗಿನ ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್ ಆಡಿದ 4 ಪಂದ್ಯದಲ್ಲಿ 3 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಕೋಲ್ಕತಾ ನೈಟ್ ರೈಡರ್ಸ್ 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿ 2ನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್ ಮೂರನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 4ನೇ ಸ್ಥಾನದಲ್ಲಿದೆ. ಇನ್ನು ಲಖನೌ ಸೂಪರ್ ಜೈಂಟ್ಸ್ 5 ಪಂದ್ಯಗಳನ್ನಾಡಿ 3 ಗೆಲುವು ಕಂಡಿದೆ. ಇದರೊಂದಿಗೆ 5ನೇ ಸ್ಥಾನ ಸಂಪಾದಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ 4 ಪಂದ್ಯಗಳಲ್ಲಿ 2 ಗೆಲುವು ಕಾಣುವ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಪಂಜಾಬ್ ಕಿಂಗ್ಸ್ 4ರಲ್ಲಿ 2 ಗೆಲುವು ದಾಖಲಿಸಿ 7ನೇ ಸ್ಥಾನದಲ್ಲಿದೆ. ಇನ್ನು 8ನೇ ಸ್ಥಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ವಿದ್ದರೆ, ನಾಲ್ಕರಲ್ಲಿ ನಾಲ್ಕು ಪಂದ್ಯ ಸೋತ ಮುಂಬೈ ಇಂಡಿನ್ಸ್ 9ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಆಡಿದ 4 ಪಂದ್ಯಗಳನ್ನು ಸೋತು ಕೊನೆಯ ಸ್ಥಾನದಲ್ಲಿದೆ.
