IPL 2022: ಕೊಹ್ಲಿ, ರಜತ್ ಸ್ಪೋಟಕ ಫಿಫ್ಟಿ, ಗುಜರಾತ್‌ ಟೈಟಾನ್ಸ್‌ಗೆ ಸವಾಲಿನ ಗುರಿ

* ಗುಜರಾತ್ ಟೈಟಾನ್ಸ್ ಎದುರು ಆಕರ್ಷಕ ಅರ್ಧಶತಕ ಚಚ್ಚಿದ ವಿರಾಟ್ ಕೊಹ್ಲಿ

* ಚೊಚ್ಚಲ ಅರ್ಧಶತಕ ಸಿಡಿಸಿ ಸಂಭ್ರಮಿಸಿದ ರಜತ್ ಪಾಟೀದಾರ್

* ಗುಜರಾತ್ ಗೆಲ್ಲಲು 171 ರನ್‌ಗಳ ಸವಾಲಿನ ಗುರಿ

IPL 2022 Virat Kohli Rajat Patidar fifty powers RCB Set 171 runs target to Gujarat Titans kvn

ನವಿ ಮುಂಬೈ(ಏ.30): ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿ ಮೊದಲ ಹಾಗೂ ಒಟ್ಟಾರೆ 43ನೇ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲು ಸಾಲು ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕಿಂಗ್ ಕೊಹ್ಲಿ ಕೊನೆಗೂ ಫಾರ್ಮ್‌ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದು ತುದಿಯಲ್ಲಿ ಯುವ ಪ್ರತಿಭಾನ್ವಿಯ ಬ್ಯಾಟರ್ ರಜತ್ ಪಾಟೀದರ್ (Rajat Patidar) ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು 6 ವಿಕೆಟ್ ಕಳೆದುಕೊಂಡು 170 ರನ್‌ ಬಾರಿಸಿದ್ದು. ಗೆಲ್ಲಲು ಗುಜರಾತ್ ಟೈಟಾನ್ಸ್ (Gujarat Titans) ತಂಡಕ್ಕೆ ಸವಾಲಿನ ಗುರಿ ನೀಡಿದೆ.

ಇಲ್ಲಿನ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್‌ (Faf du Plessis) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಆರ್‌ಸಿಬಿ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. 4 ವರ್ಷಗಳ ಬಳಿಕ ಐಪಿಎಲ್‌ಗೆ ಕಮ್‌ಬ್ಯಾಕ್ ಮಾಡಿದ ಡೆಲ್ಲಿ ಮೂಲದ ಎಡಗೈ ವೇಗಿ ಪ್ರದೀಪ್ ಸಂಗ್ವಾನ್ ತಾವೆಸೆದ ಮೊದಲ ಓವರ್‌ನಲ್ಲೇ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಫಾಫ್ 4 ಎಸೆತಗಳನ್ನು ಎದುರಿಸಿ ಶೂನ್ಯ ಸುತ್ತಿ ವೃದ್ದಿಮಾನ್ ಸಾಹಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಕೊಹ್ಲಿ-ಪಾಟೀದರ್ ಜುಗಲ್ಬಂದಿ: ಅರ್‌ಸಿಬಿ ತಂಡವು 11 ರನ್‌ಗಳಿಸುವಷ್ಟರಲ್ಲೇ ನಾಯಕ ಫಾಫ್ ವಿಕೆಟ್ ಕಳೆದುಕೊಂಡು ಕಂಗಾಲಾಗಿತ್ತು. ಈ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟೀದರ್ ಎರಡನೇ ವಿಕೆಟ್‌ಗೆ 99 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಈ ಆವೃತ್ತಿಯ ಐಪಿಎಲ್ ಟೂರ್ನಿಯ ಕಳೆದ 8 ಇನಿಂಗ್ಸ್‌ಗಳಲ್ಲಿ ಅರ್ಧಶತಕ ಬಾರಿಸಲು ವಿಫಲವಾಗಿದ್ದ ವಿರಾಟ್ ಕೊಹ್ಲಿ, ಮಹತ್ವದ ಪಂದ್ಯದಲ್ಲಿ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಕೊಹ್ಲಿಗೆ ಉತ್ತಮ ಸಾಥ್ ನೀಡಿದ ರಜತ್ ಪಾಟೀದರ್ ಐಪಿಎಲ್‌ನಲ್ಲಿ ಚೊಚ್ಚಲ ಅರ್ಧಶತಕ ಶತಕ ಸಿಡಿಸಿದರು. ಪಾಟೀದರ್ 29 ಎಸೆತಗಳನ್ನು ಎದುರಿಸಿ ಆಕರ್ಷಕ ಅರ್ಧಶತಕ ಚಚ್ಚಿದರು. ಅಂತಿಮವಾಗಿ ಪಾಟೀದರ್ 32 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 52 ರನ್ ಬಾರಿಸಿ ಪ್ರದೀಪ್ ಸಂಗ್ವಾನ್‌ಗೆ ಎರಡನೇ ಬಲಿಯಾದರು. ಇನ್ನು ವಿರಾಟ್ ಕೊಹ್ಲಿ 53 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 58 ರನ್ ಬಾರಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು.

IPL 2022: ಗುಜರಾತ್ ಟೈಟಾನ್ಸ್ ಎದುರು ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ

ಇನ್ನು ಡೆತ್ ಓವರ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುತ್ತಾ ಬಂದಿದ್ದ ದಿನೇಶ್ ಕಾರ್ತಿಕ್ ಭರ್ಜರಿ ಇನಿಂಗ್ಸ್ ಆಡಲು ವಿಫಲರಾದರು. ಇನ್ನು ಗ್ಲೆನ್ ಮ್ಯಾಕ್ಸ್‌ವೆಲ್‌ ಸ್ಪೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಮ್ಯಾಕ್ಸ್‌ವೆಲ್‌ ಕೇವಲ 18 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 33 ರನ್ ಬಾರಿಸಿದರು. ಇನ್ನು ಆರ್‌ಸಿಬಿ ಪರ ಈ ಆವೃತ್ತಿಯಲ್ಲಿ ಮೊದಲ ಪಂದ್ಯವನ್ನಾಡಿದ ಮಹಿಪಾಲ್ ಲೋಮ್ರಾರ್ ಕೇವಲ 8 ಎಸೆತಗಳನ್ನು 2 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 16 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. 

Latest Videos
Follow Us:
Download App:
  • android
  • ios