41 ರನ್ ಕಾಣಿಕೆ ನೀಡಿದ ಯಶಸ್ವಿ ಜೈಸ್ವಾಲ್ ಅಬ್ಬರಿಸಿದ ಕನ್ನಡಿಗ ದೇವದತ್ ಪಡಿಕ್ಕಲ್ 6 ವಿಕೆಟ್ ನಷ್ಟಕ್ಕೆ 178 ರನ್ ಸಿಡಿಸಿದ ರಾಜಸ್ಥಾನ

ಮುಂಬೈ(ಮೇ.15): ಯಶಸ್ವಿ ಜೈಸ್ವಾಲ್ ಹೋರಾಟ, ದೇವದತ್ ಪಡಿಕ್ಕಲ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ವಿಕೆಟ್ ನಷ್ಟಕ್ಕೆ ರನ್ ಸಿಡಿಸಿದೆ. 

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ ರಾಯಲ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಜೋಸ್ ಬಟ್ಲರ್ ಕೇವಲ 2 ರನ್ ಸಿಡಿಸಿ ಔಟಾದರು.ಯಶಸ್ವಿ ಜೈಸ್ವಾಲ್ ಹಾಗೂ ಸಂಜು ಸ್ಯಾಮ್ಸನ್ ಜೊತೆಯಾಟದಿಂದ ರಾಜಸ್ಥಾನ ಚೇತರಿಸಿಕೊಂಡಿದೆ. 

IPL 2022 ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ 10ನೇ ಗೆಲುವು ಕಂಡ ಗುಜರಾತ್ ಟೈಟಾನ್ಸ್!

ಸಂಜು ಸ್ಯಾಮ್ಸನ್ 24 ಎಸೆತದಲ್ಲಿ 32 ರನ್ ಸಿಡಿಸಿ ಔಟಾದರು. ಅಬ್ಬರಿಸಿದ ಯಶಸ್ವಿ ಜೈಸ್ವಾಲ್ 29 ಎಸೆತದಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 41 ರನ್ ಸಿಡಿಸಿ ಔಟಾದರು. ಇವರಿಬ್ಬರ ವಿಕೆಟ್ ಪತನದ ಬಳಿಕ ದೇವದತ್ ಪಡಿಕ್ಕಲ್ ಅಬ್ಬರ ಆರಂಭಗೊಂಡಿತು.

ದೇವದತ್ ಪಡಿಕ್ಕಲ್ 18 ಎಸೆತೆದಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 39 ರನ್ ಕಾಣಿಕೆ ನೀಡಿದರು. ರಿಯಾನ್ ಪರಾಗ್ ಹಾಗೂ ಜೇಮ್ಸ್ ನೀಶನ್ ಹೋರಾಟ ನೀಡಿದರು. ಪರಾಗ್ 17 ರನ್ ಸಿಡಿಸಿ ಔಟಾದರು.

ಜೇಮ್ಸ್ ನೀಶನ್ 14 ರನ್ ಸಿಡಿಸಿ ರನೌಟ್ ಆದರು. ಆರ್ ಅಶ್ವಿನ್ ಅಜೇಯ 10 ರನ್ ಸಿಡಿಸಿದರೆ, ಟ್ರೆಂಟ್ ಬೋಲ್ಟ್ ಅಜೇಯ 17 ರನ್ ಸಿಡಿಸಿದರು. ಈ ಮೂಲಕ ರಾಜಸ್ಥಾನ ರಾಯಲ್ಸ್ 6 ವಿಕೆಟ್ ನಷ್ಟಕ್ಕೆ 178 ರನ್ ಸಿಡಿಸಿತು. 

ವಿರಾಟ್ ಕೊಹ್ಲಿಯ ಘನಘೋರ ವೈಫಲ್ಯಕ್ಕೆ ಮರಗುತ್ತಿದೆ ಕ್ರಿಕೆಟ್​​​​ ಜಗತ್ತು..!

ಸೋಲಿನಿಂದ ಹೊರಬರುತ್ತಾ ರಾಯಲ್ಸ್
ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮುಗ್ಗರಿಸಿತ್ತು. ಇದೀಗ ಲಖನೌ ವಿರುದ್ಧ ಗೆಲುವು ಸಾಧಿಸುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಮಿಚೆಲ್‌ ಮಾಷ್‌ರ್‍ ಹಾಗೂ ಡೇವಿಡ್‌ ವಾರ್ನರ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 15ನೇ ಆವೃತ್ತಿ ಐಪಿಎಲ್‌ನಲ್ಲಿ ಬುಧವಾರ ರಾಜಸ್ಥಾನ ರಾಯಲ್ಸ್‌ ವಿರುದ್ಧ 8 ವಿಕೆಟ್‌ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 12 ಪಂದ್ಯಗಳಲ್ಲಿ 6ನೇ ಗೆಲುವು ದಾಖಲಿಸಿದ ಡೆಲ್ಲಿ ಪ್ಲೇ-ಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಅಲ್ಲದೇ ಮೊದಲ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಪ್ಲೇ-ಆಫ್‌ಗೆ ಮತ್ತಷ್ಟುಹತ್ತಿರವಾಗುವ ಜೊತೆ ಅಗ್ರ 2ರಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ ಕಳೆದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋಲನುಭವಿಸಿ ನಿರಾಸೆ ಅನುಭವಿಸಿದೆ.

ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ ಆರ್‌.ಅಶ್ವಿನ್‌ ಹಾಗೂ ದೇವದತ್ತ ಪಡಿಕ್ಕಲ್‌ ಹೋರಾಟದ ನೆರವಿನಿಂದ 20 ಓವರಲ್ಲಿ 6 ವಿಕೆಟ್‌ ಕಳೆದುಕೊಂಡು 160 ರನ್‌ ಕಲೆ ಹಾಕಿತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಡೆಲ್ಲಿ 18.1 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಜಯ ಸಾಧಿಸಿತು. 

ಮೊದಲ ಓವರಲ್ಲೇ ಶ್ರೀಖರ್‌ ಭರತ್‌ರನ್ನು ಶೂನ್ಯಕ್ಕೆ ಔಟ್‌ ಮಾಡಿದ ಬೌಲ್ಟ್‌ ಡೆಲ್ಲಿಗೆ ಆರಂಭಿಕ ಆಘಾತ ನೀಡಿದರು. ಆದರೆ 2ನೇ ವಿಕೆಟ್‌ಗೆ ಕ್ರೀಸ್‌ ಹಂಚಿಕೊಂಡ ಆಸ್ಪ್ರೇಲಿಯಾದ ಜೋಡಿ ಡೇವಿಡ್‌ ವಾರ್ನರ್‌ ಹಾಗೂ ಮಾಷ್‌ರ್‍ ರಾಜಸ್ಥಾನ ಬೌಲರ್‌ಗಳನ್ನು ಮನಬಂದಂತೆ ದಂಡಿಸಿತು. ಈ ಜೋಡಿ 144 ರನ್‌ ಜೊತೆಯಾಟವಾಡಿ ತಂಡಕ್ಕೆ ಗೆಲುವು ಖಚಿತಪಡಿಸಿತು. ಸ್ಫೋಟಕ ಆಟವಾಡಿದ ಮಾಷ್‌ರ್‍ 62 ಎಸೆತಗಳಲ್ಲಿ 5 ಬೌಂಡರಿ, 7 ಸಿಕ್ಸರ್‌ ಒಳಗೊಂಡ 89 ರನ್‌ ಸಿಡಿಸಿ ನಿರ್ಗಮಿಸಿದರು. ಬಳಿಕ ರಿಷಬ್‌ ಪಂತ್‌(13) ಜೊತೆಗೂಡಿ ವಾರ್ನರ್‌(52) ತಂಡಕ್ಕೆ ಗೆಲುವು ತಂದುಕೊಟ್ಟರು. ಅವರು 10 ಪಂದ್ಯಗಳಲ್ಲಿ 5ನೇ ಅರ್ಧಶತಕ ಬಾರಿಸಿದರು.