ಅಲ್ಪ ಮೊತ್ತವನ್ನು ಹೆಚ್ಚೇನೂ ಆತಂಕವಿಲ್ಲದೆ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶುಕ್ರವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ 7 ವಿಕೆಟ್ ಗೆಲುವು ಸಾಧಿಸಿದೆ. ಚೆನ್ನೈ ತಂಡದ ಗೆಲುವಿಗೆ ಸನ್‌ರೈಸರ್ಸ್ ಕೇವಲ 135 ರನ್ ಗುರಿ ನೀಡಿತ್ತು.
ಚೆನ್ನೈ (ಏ.21): ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ 200ಕ್ಕೂ ಅಧಿಕ ಮೊತ್ತವನ್ನು ಬಾರಿಸಿ ಗೆದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶುಕ್ರವಾರ ನಡೆದ ಐಪಿಎಲ್ 2023 ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗೆಲುವು ಸಾಧಿಸಿತು. ಆ ಮೂಲಕ ಹಾಲಿ ಐಪಿಎಲ್‌ನಲ್ಲಿ ತನ್ನ 4ನೇ ಗೆಲುವು ದಾಖಲಿಸಿತು. ಆ ಮೂಲಕ ಚೆಪಾಕ್ ಮೈದಾನದಲ್ಲಿ ಚೆನ್ನೈ ತಂಡ ಗೆಲುವಿನ ಟ್ರ್ಯಾಕ್‌ಗೆ ಮರಳಿತು. ಇದೇ ಮೈದಾನದಲ್ಲಿ ಆಡಿದ್ದ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿತ್ತು. ಸನ್‌ರೈಸರ್ಸ್ ತಂಡ ನೀಡಿದ್ದ 135 ರನ್‌ಗಳ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಸವಾಲೇ ಇಲ್ಲದಂತೆ ಇನ್ನೂ 8 ಎಸೆತಗಳು ಬಾಕಿ ಇರುವಂತೆ ಗೆಲುವು ಸಾಧಿಸಿತು. 18.4 ಓವರ್‌ಗಳಲ್ಲಿ 3 ವಿಕೆಟ್‌ಗೆ 138 ರನ್ ಬಾರಿಸಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಕಂಡಿತು. ಇದಕ್ಕೆ ಪ್ರಮುಖವಾಗಿ ಕಾರಣರಾದವರು. ಆರಂಭಿಕ ಆಟಗಾರ ಡೆವೋನ್ ಕಾನ್ವೆ, ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ಚೆನ್ನೈ ತಂಡಕ್ಕೆ ಆಸರೆಯಾದ ಕಾನ್ವೆ, ಕೇವಲ 57 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ಇದ್ದ ಅಜೇಯ 77 ರನ್ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.
