ಮತ್ತೊಂದು ಹೈವೋಲ್ಟೇಜ್ ಪಂದ್ಯಕ್ಕೆ ವಾಂಖೆಡೆ ಕ್ರೀಡಾಂಗಣ ಸಜ್ಜಾಗಿದೆ. ಚಾಂಪಿಯನ್ಸ್ ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈ(ಏ.08): IPL 2023 ಟೂರ್ನಿಯಲ್ಲಿಂದು ಮತ್ತೊಂದು ಮಹಾ ಸಮರ. ಚಾಂಪಿಯನ್ಸ್ ತಂಡಗಳಾಗಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಹೋರಾಟಕ್ಕೆ ಸಜ್ಜಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಚೆನ್ನೈ ತಂಡದಲ್ಲಿ ಮಹತ್ವದ 2 ಬದಲಾವಣೆ ಮಾಡಲಾಗಿದೆ. ಅಜಿಂಕ್ಯ ರಹಾನೆ ಚೆನ್ನೈ ತಂಡ ಸೇರಿಕೊಂಡಿದ್ದಾರೆ. ಇತ್ತ ಪ್ರೆಟೋರಿಯಸ್ ತಂಡ ಸೇರಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವೇಗಿ ಜೋಫ್ರಾ ಆರ್ಚರ್ ತಂಡದಿಂದ ಹೊರಗುಳಿದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯ್ 11
ಡೇವೋನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂ.ಎಸ್ ಧೋನಿ(ನಾಯಕ), ಶಿವಂ ದುಬೆ, ಡ್ವೇನ್ ಪ್ರೆಟೋರಿಯಸ್, ದೀಪಕ್ ಚಹಾರ್, ಮಿಚೆಲ್ ಸ್ಯಾಂಟ್ನರ್, ಸಿಸಾಂಡ ಮಗಲಾ, ತುಷಾರ್ ದೇಶಪಾಂಡೆ

ಸಿಟ್ಟಿನಿಂದ ಬ್ಯಾಟ್ ಎಸೆದು ಒಂದು ಮಾತು ಹೇಳಿದ್ದ ಕೊಹ್ಲಿ ,ಆರ್‌ಸಿಬಿ ಹಳೇ ನೆನಪು ಬಿಚ್ಚಿಟ್ಟ ಕೈಫ್!

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ತ್ರಿಸ್ಟನ್ ಸ್ಟಬ್ಸ್, ಅರ್ಶದ್ ಖಾನ್, ಹೃತಿಕ್ ಶೋಕಿನ್, ಪಿಯೂಷ್ ಚಾವ್ಲಾ, ಜೇಸನ್ ಬೆಹೆನ್‌ಡ್ರಾಫ್

ಜೋಫ್ರಾ ಅರ್ಚರ್ ಇಂಜುರಿ ಕಾರಣ ಮುಂಬೈ ಇಂಡಿಯನ್ಸ್ ತಂಡಕ್ಕೆ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಪದಾರ್ಪಣೆ ಮಾಡಲಿದ್ದಾರೆ ಅನ್ನೋ ಚರ್ಚೆೆ ನಡೆದಿತ್ತು. ಇತ್ತ ಸಚಿನ್ ತೆಂಡುಲ್ಕರ್ ಕೂಡ ಮುಂಬೈ ಇಂಡಿಯನ್ಸ್ ತಂಡದ ಜೊತೆ ಕಾಣಿಸಿಕೊಂಡಿದ್ದರು. ಆದರೆ ಜೋಫ್ರಾ ತಂಡದಿಂದ ಹೊರಗುಳಿದರೂ, ಅರ್ಜು್ನ್ ತೆಂಡುಲ್ಕರ್ ಪದಾರ್ಪಣೆ ಮಾಡಿಲ್ಲ.ಜೋಫ್ರಾ ಬದಲು ಸಿಸಂಡಾ ತಂಡ ಸೇರಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಹೋರಾಟ ಮಾಡಿತ್ತು. ಆದರೆ ಈ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್ ಭರ್ಜರಿ ಗೆಲುವು ದಾಖಲಿಸಿತ್ತು. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸಿತ್ತು. ಗುಜರಾತ್ ಟೈಟಾನ್ಸ್ 5 ವಿಕೆಟ್ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಶಭಾರಂಭ ಮಾಡಿತ್ತು. ಆದರೆ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸೋಲಿನಿಂದ ಹೊರಬಂದಿತ್ತು. ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸಿಎಸ್‌ಕೆ 12 ರನ್ ಗೆಲುವು ದಾಖಲಿಸಿತ್ತು. 

IPL ನಿಂದ ಅತಿಹೆಚ್ಚು ಸಂಪಾದನೆ ಮಾಡಿದ ಟಾಪ್ 5 ಭಾರತೀಯ ಕ್ರಿಕೆಟಿಗರಿವರು..!

ಮುಂಬೈ ಆಡಿದ 1 ಪಂದ್ಯದಲ್ಲಿ ಮುಗ್ಗರಿಸಿದ್ದರೆ, ಚೆನ್ನೈ ಆಡಿದ 2ರಲ್ಲಿ 1ರಲ್ಲಿ ಗೆಲುವು ಮತ್ತೊಂದರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 6ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 9ನೇ ಸ್ಥಾನದಲ್ಲಿದೆ. ಲಖನೌ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಒಂದು ಗೆಲುವು ಒಂದು ಸೋಲು ಕಂಡಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.