ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಡಗೌಟ್‌ನಲ್ಲಿ ಗಮನ ಸೆಳೆದ ರಿಷಭ್ ಪಂತ್ ಜೆರ್ಸಿಅಪಘಾತದಿಂದಾಗಿ 16ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿರುವ ಪಂತ್ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಡೇವಿಡ್ ವಾರ್ನರ್
ಲಖನೌ(ಏ.02): ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಪಾದಾರ್ಪಣೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಭೀಕರ ಕಾರು ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಅವರ ಹೆಸರಿನ ಜೆರ್ಸಿಯನ್ನು ಶನಿವಾರ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ತಂಡ ತನ್ನ ಡಗ್ ಔಟ್ ಮೇಲೆ ತೂಗು ಹಾಕಿತ್ತು. ಡೆಲ್ಲಿ ಫ್ರಾಂಚೈಸಿಯ ಈ ನಡೆಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಕಳೆದ ತಿಂಗಳಷ್ಟೇ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಿಷಭ್ ಪಂತ್, ಮುಂಬರುವ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದಷ್ಟೇ ಅಲ್ಲದೇ ಭಾರತದಲ್ಲೇ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ಸದ್ಯದ ಚೇತರಿಸಿಕೊಳ್ಳುತ್ತಿರುವ ರೀತಿಯನ್ನು ಗಮನಿಸಿದರೆ, ಆದಷ್ಟು ಬೇಗ ಭಾರತ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
ಕಳೆದ ವರ್ಷದ ಕೊನೆಯಲ್ಲಿ ತಮ್ಮ ಮರ್ಸಿಡೀಸ್ ಕಾರನ್ನು ತಾವೇ ಚಾಲನೆ ಮಾಡುತ್ತಾ ದೆಹಲಿಯಿಂದ ಉತ್ತರಾಖಂಡದ ರೂರ್ಕೀ ಎಂಬಲ್ಲಿರುವ ತಮ್ಮ ನಿವಾಸಕ್ಕೆ ಹೊರಟಿದ್ದ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಇದಾದ ಬಳಿಕ ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆ ಪಡೆದುಕೊಂಡು ಮನೆಗೆ ಡಿಸ್ಚಾರ್ಜ್ ಆಗಿದ್ದಾರೆ.
ವುಡ್ ದಾಳಿಗೆ ಡೆಲ್ಲಿ ದಂಗು!
ಲಖನೌ: ಕೈಲ್ ಮೇಯರ್ಸ್ ಬ್ಯಾಟಿಂಗ್ ಅಬ್ಬರ ಹಾಗೂ ಮಾರ್ಕ್ ವುಡ್ ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ 50 ರನ್ ಗೆಲುವು ಸಾಧಿಸಿ 16ನೇ ಆವೃತ್ತಿ ಐಪಿಎಲ್ನಲ್ಲಿ ಶುಭಾರಂಭ ಮಾಡಿದೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಬ್ಯಾಟಿಂಗ್ನಲ್ಲಿ ದುರ್ಬಲವಾದಂತೆ ಕಂಡುಬಂದ ಡೆಲ್ಲಿ ಯಾವುದೇ ಹೋರಾಟ ನಡೆಸದೆ ಪಂದ್ಯ ಬಿಟ್ಟುಕೊಟ್ಟಿತು.
IPL 2023 ಸಾಕಾಗಲಿಲ್ಲ ವಾರ್ನರ್ ಹೋರಾಟ, ಲಖನೌ ವಿರುದ್ಧ ಮುಗ್ಗರಿಸಿದ ಡೆಲ್ಲಿ ಕ್ಯಾಪಿಟಲ್ಸ್!
ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಲಖನೌ ಸೂಪರ್ ಜೈಂಟ್ಸ್ 6 ವಿಕೆಟ್ಗೆ 193 ರನ್ ಕಲೆಹಾಕಿತು. ದೊಡ್ಡ ಮೊತ್ತ ನೋಡಿಯೇ ಕಂಗಾಲಾದ ಡೆಲ್ಲಿ 9 ವಿಕೆಟ್ಗೆ 143 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಟರ್ನಿಂಗ್ ಪಾಯಿಂಟ್
14 ರನ್ ಗಳಿಸಿದ್ದಾಗ ಜೀವದಾನ ಪಡೆದ ಮೇಯರ್ಸ್ 73 ರನ್ ಸಿಡಿಸಿ ಲಖನೌ ದೊಡ್ಡ ಮೊತ್ತ ಕಲೆಹಾಕಲು ಕಾರಣರಾದರು. ಬಳಿಕ ಡೆಲ್ಲಿ ಮೊದಲ 4 ಓವರಲ್ಲಿ 40 ರನ್ ಸಿಡಿಸಿದರೂ ನಂತರದ 5 ಓವರಲ್ಲಿ ಕೇವಲ 18 ರನ್‌ಗೆ 3 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇದು ತಂಡದ ಸೋಲಿಗೆ ಪ್ರಮುಖ ಕಾರಣ.
ಐಪಿಎಲ್: ಶಕೀಬ್, ಲಿಟನ್ ಆಗಮನ ಇನ್ನಷ್ಟು ವಿಳಂಬ!
ಢಾಕಾ: ಕೋಲ್ಕತಾ ನೈಟ್ರೈಡರ್ಸ್ಗೆ ಇನ್ನೂ ಕೆಲ ಪಂದ್ಯಗಳಿಗೆ ಶಕೀಬ್ ಅಲ್ ಹಸನ್ ಹಾಗೂ ಲಿಟನ್ ದಾಸ್‌ರ ಸೇವೆ ಲಭ್ಯವಾಗುವುದಿಲ್ಲ. ಐರ್ಲೆಂಡ್ ವಿರುದ್ಧದ ಟಿ20 ಸರಣಿ ಶುಕ್ರವಾರ ಮುಕ್ತಾಯಗೊಂಡ ಬಳಿಕ ಇವರಿಬ್ಬರು ಭಾರತಕ್ಕೆ ಪ್ರಯಾಣಿಸಬೇಕಿತ್ತು. ಆದರೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಇವರಿಬ್ಬರನ್ನು ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೂ ಆಯ್ಕೆ ಮಾಡಿದೆ. ಪಂದ್ಯ ಏಪ್ರಿಲ್ 4ರಿಂದ ಆರಂಭಗೊಳ್ಳಲಿದೆ. ಶಕೀಬ್ ಅಲ್ ಹಸನ್ ಹಾಗೂ ಲಿಟನ್ ದಾಸ್ ಏಪ್ರಿಲ್ 10ರ ವೇಳೆಗೆ ಕೆಕೆಆರ್ ತಂಡ ಕೂಡಿಕೊಳ್ಳುವ ನಿರೀಕ್ಷೆ ಇದೆ.
ಜಸ್ಪ್ರೀತ್ ಬುಮ್ರಾ ಬದಲಿಗೆ ಮುಂಬೈಗೆ ಸಂದೀಪ್ ವಾರಿಯರ್
ಮುಂಬೈ: ಇತ್ತೀಚೆಗೆ ಬೆನ್ನು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಭಾರತದ ತಾರಾ ವೇಗಿ ಜಸ್‌ಪ್ರೀತ್ ಬುಮ್ರಾ, ಐಪಿಎಲ್‌ನಿಂದ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಅವರ ಬದಲು ಮುಂಬೈ ಇಂಡಿಯನ್ಸ್, ಕೇರಳ ವೇಗಿ ಸಂದೀಪ್ ವಾರಿಯರ್‌ರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. 2021ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಸಂದೀಪ್, 69 ದೇಸಿ ಟಿ20 ಪಂದ್ಯಗಳನ್ನಾಡಿದ್ದಾರೆ.
