ಪಂಜಾಬ್‌ಗೆ ಗೆಲ್ಲಲು 201 ರನ್ ಗುರಿ ನೀಡಿದ ಸಿಎಸ್‌ಕೆಸ್ಪೋಟಕ ಅರ್ಧಶತಕ ಸಿಡಿಸಿದ ಆರಂಭಿಕ ಬ್ಯಾಟರ್ ಕಾನ್‌ವೇಸತತ ಎರಡು ಸಿಕ್ಸರ್ ಚಚ್ಚಿದ ಎಂ ಎಸ್ ಧೋನಿ

ಚೆನ್ನೈ(ಏ.30): ಡೆವೊನ್‌ ಕಾನ್‌ವೇ ಸ್ಪೋಟಕ ಅರ್ಧಶತಕ ಹಾಗೂ ಕೊನೆಯಲ್ಲಿ ನಾಯಕ ಎಂ ಎಸ್ ಧೋನಿ ಬಾರಿಸಿದ ಸತತ ಎರಡು ಸಿಕ್ಸರ್‌ಗಳ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 200 ರನ್ ಬಾರಿಸಿದ್ದು, ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್‌ ತಂಡಕ್ಕೆ ಸವಾಲಿನ ಗುರಿ ನೀಡಿದೆ.

ಇಲ್ಲಿನ ಚೆಪಾಕ್‌ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಆರಂಭಿಕರಾದ ಡೆವೊನ್ ಕಾನ್‌ವೇ ಹಾಗೂ ಋತುರಾಜ್ ಗಾಯಕ್ವಾಡ್‌ ಸ್ಪೋಟಕ ಜತೆಯಾಟವಾಡುವ ಮೂಲಕ ಭರ್ಜರಿ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಕೇವಲ 58 ಎಸೆತಗಳಲ್ಲಿ 86 ರನ್‌ಗಳ ಜತೆಯಾಟವಾಡುವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಒಂದು ಕಡೆ ಡೆವೊನ್ ಕಾನ್‌ವೇ ಸ್ಪೋಟಕ ಬ್ಯಾಟಿಂಗ್‌ ನಡೆಸಿದರೆ, ಮತ್ತೊಂದು ತುದಿಯಲ್ಲಿ ಋತುರಾಜ್ ಗಾಯಕ್ವಾಡ್‌ ಉತ್ತಮ ಸಾಥ್ ನೀಡಿದರು. ಗಾಯಕ್ವಾಡ್ 31 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 37 ರನ್ ಬಾರಿಸಿ ಸಿಕಂದರ್ ರಾಜಾಗೆ ವಿಕೆಟ್‌ ಒಪ್ಪಿಸಿದರು.

ಡೆವೊನ್ ಕಾನ್‌ವೇ ಸ್ಪೋಟಕ ಅರ್ಧಶತಕ: ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಡೆವೊನ್‌ ಕಾನ್‌ವೇ ಮತ್ತೊಮ್ಮೆ ಸೊಗಸಾದ ಇನಿಂಗ್ಸ್‌ ಆಡುವ ಮೂಲಕ ತಂಡಕ್ಕೆ ಆಸರೆಯಾದರು. ಪಂಜಾಬ್‌ ಬೌಲರ್‌ಗಳೆದುರು ಮೈಚೆಳಿ ಬಿಟ್ಟು ಬ್ಯಾಟ್ ಬೀಸಿದ ಕಾನ್‌ವೇ ಕೇವಲ 52 ಎಸೆತಗಳನ್ನು ಎದುರಿಸಿ 16 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 92 ರನ್‌ ಬಾರಿಸಿದರು. ಕೊನೆಯ ಓವರ್‌ನಲ್ಲಿ ಕಾನ್‌ವೇ ಕೇವಲ ಒಂದೇ ಎಸೆತ ಎದುರಿಸಿದ್ದರಿಂದ ಮೂರಂಕಿ ಮೊತ್ತ ದಾಖಲಿಸಲು ಮತ್ತೊಮ್ಮೆ ವಿಫಲವಾದರು. 

Scroll to load tweet…

IPL 2023: ಪಂಜಾಬ್ ಎದುರು ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ಕೆ

ಇನ್ನು ಮೂರನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಕ್ರೀಸ್‌ಗಿಳಿದ ಶಿವಂ ದುಬೆ ಕೇವಲ 17 ಎಸೆತಗಳಲ್ಲಿ 1 ಬೌಂಡರಿ ಸಹಿತ 2 ಸಿಕ್ಸರ್ ಸಹಿತ 28 ರನ್ ಬಾರಿಸಿ ಆರ್ಶದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರೆ, ಮೋಯಿನ್ ಅಲಿ ಬ್ಯಾಟಿಂಗ್ ಕೇವಲ 10 ರನ್‌ಗಳಿಗೆ ಸೀಮಿತವಾಯಿತು. ಇನ್ನು ಜಡೇಜಾ 10 ಎಸೆತಗಳನ್ನು ಎದುರಿಸಿ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ಮಹೇಂದ್ರ ಸಿಂಗ್ ಧೋನಿ ಕೇವಲ 4 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 13 ರನ್ ಗಳಿಸಿ ಅಜೇಯರಾಗುಳಿದರು.