ಅಹಮದಾಬಾದ್‌ನಲ್ಲಿಂದು ಗುಜರಾತ್ vs ಲಖನೌ ಫೈಟ್ಟೈಟಾನ್ಸ್ ಗೆದ್ರೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತಕೆ ಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಕೃನಾಲ್ ಪಾಂಡ್ಯ ಲಖನೌ ನಾಯಕ
ಅಹಮದಾಬಾದ್(ಮೇ.07): 16ನೇ ಆವೃತ್ತಿ ಐಪಿಎಲ್ನ ಈ ವಾರಾಂತ್ಯ ಸೋದರರ ಸವಾಲ್ಗೆ ಸಾಕ್ಷಿಯಾಗಲಿದೆ. ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡಕ್ಕೆ ಕೃನಾಲ್ ಪಾಂಡ್ಯ ಮುನ್ನಡೆಸಲಿರುವ ಲಖನೌ ತಂಡದ ಸವಾಲು ಎದುರಾಗಲಿದೆ. ಕೆ ಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಕೃನಾಲ್ ಪಾಂಡ್ಯ ಲಖನೌ ಸೂಪರ್ ಜೈಂಟ್ಸ್ ನಾಯಕರಾಗಿ ನೇಮಕಗೊಂಡಿದ್ದಾರೆ.
14 ಅಂಕದೊಂದಿಗೆ ಅಗ್ರಸ್ಥಾನದಲ್ಲಿರುವ ಗುಜರಾತ್ ಈ ಪಂದ್ಯದಲ್ಲಿ ಗೆದ್ದರೆ ಪ್ಲೇ-ಆಫ್‌ನಲ್ಲಿ ಸ್ಥಾನ ಬಹುತೇಕ ಖಚಿತವಾಗಲಿದೆ. ಮತ್ತೊಂದೆಡೆ ಗೆಲುವಿನ ಲಯಕ್ಕೆ ಮರಳಿ ಅಗ್ರ-4ರಲ್ಲೇ ಉಳಿದುಕೊಳ್ಳಲು ಲಖನೌ ಸೂಪರ್ ಕಾಯುತ್ತಿದೆ. ಟೈಟಾನ್ಸ್ ಬಲಿಷ್ಠ ಬ್ಯಾಟಿಂಗ್, ಬೌಲಿಂಗ್ ಪಡೆ ಹೊಂದಿದ್ದರೆ, ಅಸ್ಥಿರ ಬ್ಯಾಟಿಂಗ್ ಪಡೆಯ ಸಮಸ್ಯೆ ಲಖನೌ ತಂಡವನ್ನು ಕಾಡುತ್ತಿದೆ.
ಎಂದಿನಂತೆ ಗುಜರಾತ್ ಟೈಟಾನ್ಸ್ ತಂಡವು ಬ್ಯಾಟಿಂಗ್‌ನಲ್ಲಿ ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಅಭಿನವ್ ಮನೋಹರ್ ಹಾಗೂ ಡೇವಿಡ್ ಮಿಲ್ಲರ್ ಅವರನ್ನು ನೆಚ್ಚಿಕೊಂಡಿದೆ. ಇನ್ನು ರಾಹುಲ್ ತೆವಾಟಿಯಾ ಹಾಗೂ ವಿಜಯ್ ಶಂಕರ್ ಆಲ್ರೌಂಡರ್ ರೂಪದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ನೂರ್ ಅಹಮ್ಮದ್ ಹಾಗೂ ಮೋಹಿತ್ ಶರ್ಮಾ, ಬಲಿಷ್ಠ ಲಖನೌ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
IPL 2023: ಆರ್‌ಸಿಬಿಗೆ ನೀರು ಕುಡಿಸಿದ ಸಾಲ್ಟ್, ಬೌಲರ್‌ಗಳದ್ದೇ ಫಾಲ್ಟ್!
ಇನ್ನು ಲಖನೌ ಸೂಪರ್ ಜೈಂಟ್ಸ್ ತಂಡವು ಕೆ ಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಕೈಲ್ ಮೇಯರ್ಸ್ ಜತೆಗೆ ಮನನ್ ವೋಹ್ರಾ ಮತ್ತೊಮ್ಮೆ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನುಳಿದಂತೆ ದೀಪಕ್ ಹೂಡಾ, ಆಯುಷ್ ಬದೋನಿ, ನಿಕೋಲಸ್ ಪೂರನ್ ಹಾಗೂ ಮಾರ್ಕಸ್ ಸ್ಟೋನಿಸ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿದ್ದಾರೆ. ಬೌಲಿಂಗ್‌ನಲ್ಲಿ ನವೀನ್ ಉಲ್ ಹಕ್, ಆವೇಶ್ ಖಾನ್, ಮೊಹ್ಸಿನ್ ಖಾನ್ ಹಾಗೂ ಕೃಷ್ಣಪ್ಪ ಗೌತಮ್ ತಂಡಕ್ಕೆ ಮತ್ತೊಂದು ಗೆಲುವು ತಂದುಕೊಡಲು ಎದುರು ನೋಡುತ್ತಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಒಟ್ಟು 3 ಬಾರಿ ಮುಖಾಮುಖಿಯಾಗಿದ್ದು, ಮೂರು ಪಂದ್ಯಗಳಲ್ಲೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಗೆಲುವಿನ ನಗೆ ಬೀರಿದೆ. ಇನ್ನು ಇಂದಿನ ಪಂದ್ಯದಲ್ಲಾದರೂ ಗುಜರಾತ್ ಎದುರು ಲಖನೌ ತಂಡವು ಗೆಲುವಿನ ಖಾತೆ ತೆರೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ಸಂಭವನೀಯ ಆಟಗಾರರ ಪಟ್ಟಿ
ಗುಜರಾತ್ ಟೈಟಾನ್ಸ್: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹಮ್ಮದ್, ಮೊಹ್ಮಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಮೋಹಿತ್ ಶರ್ಮಾ.
ಲಖನೌ ಸೂಪರ್ ಜೈಂಟ್ಸ್: ಕೈಲ್ ಮೇಯರ್ಸ್, ಮನನ್ ವೋಹ್ರಾ, ದೀಪಕ್ ಹೂಡಾ, ಆಯುಷ್ ಬದೋನಿ, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ(ನಾಯಕ), ಕೃಷ್ಣಪ್ಪ ಗೌತಮ್, ನವೀನ್ ಉಲ್ ಹಕ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಆವೇಶ್ ಖಾನ್.
ಪಂದ್ಯ: ಮಧ್ಯಾಹ್ನ 3.30ರಿಂದ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಪಿಚ್ ರಿಪೋರ್ಟ್
ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟರ್ಗಳಿಗೆ ಹೆಚ್ಚಿನ ನೆರವು ನೀಡಲಿದ್ದು, ದೊಡ್ಡ ಮೊತ್ತ ದಾಖಲಾಗುವ ಸಾಧ್ಯತೆ ಹೆಚ್ಚು. ಕಳೆದೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದೆ.
