ಕೆಕೆಆರ್ ಬ್ಯಾಟರ್ ರಿಂಕು ಸಿಂಗ್ ಸತತ 5 ಸಿಕ್ಸರ್ ಸಿಡಿಸಿ ಗುಜರಾತ್ ಟೈಟಾನ್ಸ್ ಕೈಯಿಂದ ಗೆಲುವು ಕಸಿದುಕೊಂಡಿದ್ದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು ಗುಜರಾತ್ ಸಜ್ಜಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿದೆ.
ಕೋಲ್ಕತಾ(ಏ.29): ಐಪಿಎಲ್ ಟೂರ್ನಿಯ 39ನೇ ಲೀಗ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಬಳಿಕ ಹಾರ್ದಿಕ್ ಪಾಂಡ್ಯ, ಪ್ಲೇ ಆಫ್ ಲೆಕ್ಕಾಚಾರ ಹೇಳಿದ್ದಾರೆ. 7 ಪಂದ್ಯ ಮುಗಿದಿದೆ. ಇನ್ನುಳಿದ 7 ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ಲೇ ಆಫ್ ಪ್ರವೇಶ ಪಡೆಯುವ ವಿಶ್ವಾಸವಿದೆ ಎಂದಿದ್ದಾರೆ. ಗುಜರಾತ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಕೆಕೆಆರ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಜೇಸನ್ ರಾಯ್ ಇಂಜುರಿಯಾಗಿದ್ದಾರೆ. ಈ ಸ್ಥಾನದಲ್ಲಿ ಗುರ್ಬಾಜ್ ಕಣಕ್ಕಿಳಿಯಲಿದ್ದಾರೆ. ಇನ್ನು ಉಮೇಶ್ ಯಾದವ್ ಬದಲು ಹರ್ಶೀತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್
ವೃದ್ಧಿಮಾನ್ ಸಾಹ, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ನೂರ್ ಅಹಮ್ಮದ್, ಮೊಹ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್
Royal Challengers Bangalore: ಲಕ್ನೋ ಅಬ್ಬರದ ನಡುವೆ 'ಓನ್ಲಿ ಆರ್‌ಸಿಬಿ' ಟ್ವಿಟರ್‌ನಲ್ಲಿ ಫುಲ್ ಟ್ರೆಂಡ್!
ಕೆಕೆಆರ್ ಪ್ಲೇಯಿಂಗ್ 11
ಎನ್ ಜಗದೀಶನ್, ರಹಮಾನುಲ್ಹಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆ್ಯಂಡ್ರೆ ರಲೆಸ್, ಸುನಿಲ್ ನರೈನ್, ಡೇವಿಡ್ ವೀಸೆ, ಶಾರ್ದೂಲ್ ಠಾಕೂರ್, ಹರ್ಶಿತ್ ರಾಣಾ, ವರುಣ್ ಚಕ್ರವರ್ತಿ
ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ 3ನೇ ಸ್ಥಾನದಲ್ಲಿದ್ದರೆ, ಕೋಲ್ಕತಾ ನೈಟ್ ರೈಡರ್ಸ್ 7ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಕೆಕೆಆರ್ ವಿರುದ್ದ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ಗುಜರಾತ್ ಹವಣಿಸುತ್ತಿದೆ. ಸದ್ಯ ಮೊದಲ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್ 8 ಪಂದ್ಯದಲ್ಲಿ 5 ಗೆಲುವು ದಾಖಲಿಸಿ 10 ಅಂಕ ಪಡೆದಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಲಖನೌ ಸೂಪರ್ ಜೈಂಟ್ಸ್ 8ರಲ್ಲಿ 5 ಗೆಲುವು ದಾಖಲಿಸಿ 2ನೇ ಸ್ಥಾನದಲ್ಲಿದೆ. ಇತ್ತ ಗುಜರಾತ್ ಟೈಟಾನ್ಸ್ 7 ಪಂದ್ಯದಲ್ಲಿ 5 ಗೆಲುವು ದಾಖಲಿಸಿದೆ. ಇಂದಿನ ಪಂದ್ಯದ ಗೆಲುವು ಗುಜರಾತ್ ತಂಡವನ್ನು ಮೊದಲ ಸ್ಥಾನಕ್ಕೇರಿಸಲಿದೆ. ಇತ್ತ ಕೆಕೆಆರ್ ಗೆಲುವು ಸಾಧಿಸಿದರೆ 7ನೇ ಸ್ಥಾನದಿಂದ 5ನೇ ಸ್ಥಾನಕ್ಕೇರಲಿದೆ.
ಎಲೆಕ್ಷನ್ ಎಫೆಕ್ಟ್: ಆರ್‌ಸಿಬಿ Away ಮ್ಯಾಚ್ ಫೈಟ್
ಚೆನ್ನೈ ಸೂಪರ್ ಕಿಂಗ್ಸ್ 8 ಪಂದ್ಯದಲ್ಲಿ 5 ಗೆಲುವು 3 ಸೋಲಿನ ಮೂಲಕ 4ನೇ ಸ್ಥಾನದಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ಪಂದ್ಯದಲ್ಲಿ 4 ಗೆಲುವು ದಾಖಲಿಸಿ 5ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 8 ರಲ್ಲಿ 4 ಗೆಲುವು, 4 ಸೋಲಿನ ಮೂಲಕ 6ನೇ ಸ್ಥಾನದಲ್ಲಿದೆ. ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 8, ಸನ್‌ರೈಸರ್ಸ್ ಹೈದರಾಬಾದ್ 9 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಕೊನೆ ಹಾಗೂ 10ನೇ ಸ್ಥಾನದಲ್ಲಿದೆ.
