ಐಪಿಎಲ್ 2023 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದೆ. ಈ ರೋಚಕ ಹೋರಾಟದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು?
ದೆಹಲಿ(ಏ.04): IPL 2023 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಡೆಲ್ಲಿ ಸೋಲಿನ ಕಹಿ ಅನುಭವಿಸಿದೆ. ಇಂದು ಗುಜರಾತ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ 2 ಮಹತ್ವದ ಬದಲಾವಣೆ ಮಾಡಲಾಗಿದೆ. ಗಾಯಗೊಂಡಿರುವ ಕೇನ್ ವಿಲಿಯಮ್ಸನ್ ಬದಲು ಡೇವಿಡ್ ಮಿಲ್ಲರ್ ತಂಡ ಸೇರಿಕೊಂಡಿದ್ದಾರೆ. ಇನ್ನು ವಿಜಯ್ ಶಂಕರ್ ಬದಲು ಸಾಯಿ ಸುದರ್ಶನ್ ತಂಡ ಸೇರಿಕೊಂಡಿದ್ದಾರೆ. ಇತ್ತ ಡೆಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. 20 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಪದಾರ್ಪಣೆ ಮಾಡಿದ್ದಾರೆ. ಅನ್ರಿಚ್ ನೋರ್ಜೆ ಡೆಲ್ಲಿ ತಂಡ ಸೇರಿಕೊಂಡಿದ್ದಾರೆ. ಇತ್ತ ರೊವ್ಮೆನ್ ಪೊವೆಲ್ ತಂಡದಿಂದ ಹೊರಬಿದ್ದಿದ್ದಾರೆ.
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ವೃದ್ಧಿಮಾನ್ ಸಾಹ, ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಳ್, ಅಲ್ಜಾರಿ ಜೆಸೋಫ್
IPL 2023: ಆರ್‌ಸಿಬಿಗೆ ಅತಿದೊಡ್ಡ ಶಾಕ್, ಕಳೆದ ಆವೃತ್ತಿಯ ಹೀರೋ ಟೂರ್ನಿಯಿಂದಲೇ ಔಟ್..!
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11
ಪೃಥ್ವಿ ಶಾ, ಡೇವಿಡ್ ವಾರ್ನರ್(ನಾಯಕ), ಮಿಚೆಲ್ ಮಾರ್ಶ್, ರಿಲೆ ರೊಸೊ, ಸರ್ಫರಾಜ್ ಖಾನ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಚೇತನ್ ಸಕಾರಿಯಾ, ಖಲೀಲ್ ಅಹಮ್ಮದ್, ಅನ್ರಿಚ್ ನೋರ್ಜೆ
ಐಪಿಎಲ್ ಟೂರ್ನಿ 2023ರಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಲ್ ತಲಾ ಒಂದು ಪಂದ್ಯ ಆಡಿದೆ. ಇದರ ಫಲಿತಾಂಶದ ಆಧಾರದಲ್ಲಿ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ಕ್ಯಾಪಿಟಲ್ಸ್ 9ನೇ ಸ್ಥಾನದಲ್ಲಿದೆ.
ಬೌಲರ್ಸ್‌ಗೆ ವಾರ್ನಿಂಗ್ ಕೊಟ್ಟ ಧೋನಿ! ಸುಧಾರಿಸಿಕೊಳ್ಳಿ ಇಲ್ಲವೇ ಬೇರೆ ನಾಯಕನಡಿ ಆಡಲು ರೆಡಿಯಾಗಿ ಅಂದಿದ್ದೇಕೆ ಮಹಿ..?
ಕಳೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಬಲಿಷ್ಠ ಚೆನ್ನೈ ವಿರುದ್ಧ ಗೆಲುವು ಸಾಧಿಸಿತ್ತು. 4 ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್‌್ಸ ವಿರುದ್ಧ ಶುಕ್ರವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗೆಲುವು ಸಾಧಿಸಿ ಶುಭಾರಂಭ ಮಾಡಿತು ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್, ಚೆನ್ನೈಯನ್ನು 7 ವಿಕೆಟ್‌ಗೆ 178 ರನ್‌ಗಳಿಗೆ ನಿಯಂತ್ರಿಸಿತು. ಋುತುರಾಜ್ ಗಾಯಕ್ವಾಡ್ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು 200 ರನ್ ದಾಟಿಸುವ ನಿರೀಕ್ಷೆ ಮೂಡಿಸಿದ್ದರು. ಆದರೆ ಅವರ ವಿಕೆಟ್ ಪತನದ ಬಳಿಕ ಚೆನ್ನೈ ಮಂಕಾಯಿತು. ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಗುಜರಾತ್ ಭರ್ಜರಿ ಆರಂಭ ಪಡೆದರೂ, ಇನ್ನಿಂಗ್‌್ಸನ ಮಧ್ಯದಲ್ಲಿ ನಿಧಾನಗೊಂಡಿತ್ತು. ತಂಡದ ಬ್ಯಾಟಿಂಗ್ ಪಡೆ ದೊಡ್ಡದಿರುವ ಕಾರಣ, ಕೊನೆ 2 ಓವರಲ್ಲಿ 23 ರನ್ ಬೇಕಿದ್ದಾಗಲೂ ಒತ್ತಡಕ್ಕೊಳಗಾಗಲಿಲ್ಲ.ಶುಭ್‌ಮನ್ ಗಿಲ್ 36 ಎಸೆತದಲ್ಲಿ 6 ಬೌಂಡರಿ, 3 ಸಿಕ್ಸರ್‌ನೊಂದಿಗೆ 63 ರನ್ ಸಿಡಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರೆ, ರಶೀದ್ ಖಾನ್ 3 ಎಸೆತದಲ್ಲಿ 10, ರಾಹುಲ್ ತೆವಾಟಿಯಾ 15 ರನ್ ಸಿಡಿಸಿ ತಂಡವನ್ನು 4 ಎಸೆತ ಬಾಕಿ ಇರುವಂತೆ ದಡ ಸೇರಿಸಿದರು.
