ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿದೆ. ಮರಗಳು ಧರೆಗುರುಳಿದೆ. ಇತ್ತ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಮುತ್ತ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಇಂದು ಸಂಜೆ 7.30ಕ್ಕೆ ಆರಂಭವಾಗಬೇಕಿರುವ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ವಿಳಂಭವಾಗುವ ಸಾಧ್ಯತೆ ಇದೆ.

ಬೆಂಗಳೂರು(ಮೇ.21): ಬೆಂಗಳೂರಲ್ಲಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬಹುತೇಕ ರಸ್ತೆಗಳು ಜಲಾವೃತಗೊಂಡಿದೆ. ಮರಗಳು ಧರೆಗುರುಳಿದೆ. ವಾಹನ ಸವಾರರು ಹಲೆವೆಡೆ ಸಿಲುಕಿಕೊಂಡು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಒಂದೇ ಸಮನೆ ಸುರಿದ ಮಳೆಯಿಂದ ಬೆಂಗಳೂರಿನ ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಇತ್ತ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಮುತ್ತ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯಕ್ಕಾಗಿ ಕಾದು ಕುಳಿತಿರುವ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಸದ್ಯ ಮಳೆ ಪ್ರಮಾಣ ತಗ್ಗಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಹೀಗಾಗಿ ಪಂದ್ಯ ಕೊಂಚ ತಡವಾಗಿ ಆರಂಭವಾಗುವ ಸಾಧ್ಯತೆ ಇದೆ.

ಚಿನ್ನಸ್ವಾಮಿ ಕ್ರೀಡಾಂಗಣ ನೀರಿನಿಂದ ಭರ್ತಿಯಾಗಿದೆ. ಸದ್ಯ ಭಾರಿ ಮಳೆ ನಿಂತಿದ್ದು, ತುಂತುರ ಮಳೆ ಬೀಳುತ್ತಿದೆ. ಒಂದೇ ಸಮನ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಕಾರಣ ಪಿಚ್ ಕೂಡ ಒದ್ದೆಯಾಗಿರುವ ಸಾಧ್ಯತೆ ಇದೆ. ಪಿಚ್ ಸಂಪೂರ್ಣ ಕವರ್ ಮಾಡಿದ್ದರು ಮಳೆ ಪ್ರಮಾಣ ಹೆಚ್ಚಾಗಿರುವ ಕಾರಣ ಪಿಚ್ ಒದ್ದೆಯಾಗಿರುವ ಸಾಧ್ಯತೆ ಹೆಚ್ಚಿದೆ. ಮಳೆಯಿಂದಾಗಿ ಪಂದ್ಯ ರದ್ದಾದರೆ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಒಂದೊಂದು ಅಂಕ ಹಂಚಿಕೊಳ್ಳಲಿದೆ. ಆರ್‌ಸಿಬಿ ಒಟ್ಟು 14 ಪಂದ್ಯಗಳಿಂದ 15 ಅಂಕ ಸಂಪಾದಿಸಲಿದೆ.ಹೀಗಾದಲ್ಲಿ ಆರ್‌ಸಿಬಿ ಪ್ಲೇ ಆಫ್ ಪ್ರವೇಶ ಮುಂಬೈ ಹಾಗೂ ಸನ್‌ರೈಸರ್ಸ್ ಪಂದ್ಯದ ಫಲಿತಾಂಶದ ಮೇಲೆ ಅವಲಂಬಿತವಾಗಲಿದೆ. ಹೈದರಾಬಾದ್ ವಿರುದ್ದ ಮುಂಬೈ ಮುಗ್ಗರಿಸಿದ ಆರ್‌ಸಿಬಿ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿದೆ. 

'ನಮ್ಮಿಬ್ಬರಲ್ಲಿ ಯಾರು ಬೆಸ್ಟ್'?: ಜಡೇಜಾ ಸ್ಟೈಲ್ ಅನುಕರಿಸಿದ ವಾರ್ನರ್..! ವಿಡಿಯೋ ವೈರಲ್

ಪ್ಲೇ ಆಫ್ ಹೋರಾಟದಲ್ಲಿ ಈಗಾಗಲೇ ಮೂರು ಸ್ಥಾನಗಳು ಭರ್ತಿಯಾಗಿದೆ. ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಂಡಿದೆ. ಇನ್ನುಳಿದ ಒಂದು ಸ್ಥಾನಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಪೈಪೋಟಿ ನಡೆಸುತ್ತಿದೆ. ಬೆಂಗಳೂರು ಹಾಗೂ ಮುಂಬೈ 13 ಪಂದ್ಯಗಳಿಂದ ತಲಾ 14 ಅಂಕ ಸಂಪಾದಿಸಿದೆ. ಆದರೆ ಬೆಂಳೂರು ನೆಟ್ ರನ್ ರೇಟ್ ಉತ್ತಮವಾಗಿರುವುದರಿಂದ ಸದ್ಯ ನಾಲ್ಕನೇ ಸ್ಥಾನದಲ್ಲಿದೆ. ಹೈದರಾಬಾದ್ ವಿರುದ್ಧ ಮುಂಬೈ ಗೆಲುವು ಸಾಧಿಸಿದರೆ 16 ಅಂಕ ಸಂಪಾದಿಸಲಿದೆ. ಇತ್ತ ಬೆಂಗಳೂರು ತಂಡ ಕೂಡ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ 16 ಅಂಕ ಸಂಪಾದಿಸಲಿದೆ. ಆದರೆ ರನ್‌ರೇಟ್ ಆಧಾರದಲ್ಲಿ ಆರ್‌ಸಿಬಿ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಇಂದಿನ ಪಂದ್ಯ ರದ್ದಾದರೆ ಚಿತ್ರಣ ಬದಲಾಗಲಿದೆ.

"ಅತ್ಯದ್ಭುತ ಪ್ರತಿಭೆ": ರಿಂಕು ಸಿಂಗ್ ಗುಣಗಾನ ಮಾಡಿದ ಗೌತಮ್ ಗಂಭೀರ್

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬಹುತೇಕ ಕಡೆ ಟ್ರಾಫಿಕ್ ಜಾಮ್ ಆಗಿದೆ. ರಸ್ತೆ ಮೇಲೆ ಮರಗಳು ಬಿದ್ದಿರುವ ಕಾರಣ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೆಆರ್ ಸರ್ಕಲ್, ಶಿವಾನಂದ ಸರ್ಕಲ್, ಮೆಜೆಸ್ಟಿಕ್ ಸುತ್ತಮುತ್ತ ಮಳೆ ನೀರಿನಿಂದ ರಸ್ತೆಗಳು ನದಿಯಂತಾಗಿದೆ. ಹಲವು ಭಾಗಗಳು ನೀರಿನಿಂದ ಮುಳುಗಡೆಯಾಗಿದೆ. ನೀರಿನಲ್ಲಿ ಸಿಲುಕಿದೆ ಮೂವರನ್ನು ರಕ್ಷಿಸಲಾಗಿದೆ. ಮತ್ತೊರ್ವ ಸ್ಥಿತಿ ಗಂಭೀರವಾಗಿದೆ.