ಅಂಕಪಟ್ಟಿಯಲ್ಲಿ 6 ಮತ್ತು 7ನೇ ಸ್ಥಾನದಲ್ಲರುವ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಈ ಪಂದ್ಯದಲ್ಲಿ ಮುಂಬೈ ಟಾಸ್ ಗೆದ್ದ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಯಾರಿಗಿದೆ ಗೆಲುವಿನ ಅದೃಷ್ಠ?
ಮುಂಬೈ(ಏ.22): ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಲಾ 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಅಂಕಪಟ್ಟಿಯಲ್ಲಿ ಕ್ರಮವಾಗಿ 6 ಮತ್ತು 7ನೇ ಸ್ಥಾನದಲ್ಲಿದೆ. ಇದೀಗ ಐಪಿಎಲ್ ಟೂರ್ನಿಯಲ್ಲಿ ಮಹತ್ವದ ಘಟ್ಟ. ಪ್ರತಿ ಪಂದ್ಯದ ಫಲಿತಾಂಶ ಕೂಡ ಅಷ್ಟೇ ಮುಖ್ಯ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ವೇಗಿ ಜೋಫ್ರಾ ಆರ್ಚರ್ ತಂಡ ಸೇರಿಕೊಂಡಿದ್ದಾರೆ. ಶಿಖರ್ ಧವನ್ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ತಂಡವನ್ನು ಸ್ಯಾಮ್ ಕುರನ್ ಮುನ್ನಡೆಸುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಟಿಲಕ್ ವರ್ಮಾ, ಅರ್ಜುನ್ ತೆಂಡುಲ್ಕರ್, ಹೃತೀಕ್ ಶೋಕೀನ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಜೇಸನ್ ಬೆಹೆನ್‌ಡ್ರಾಫ್
ವೇಗಿ ನಟರಾಜನ್ ಮಗಳ ಜತೆ ಅಮೂಲ್ಯ ಕ್ಷಣ ಕಳೆದ ಧೋನಿ..! ವಿಡಿಯೋ ವೈರಲ್
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಅಥರ್ವಾ ತೈದೆ, ಪ್ರಭಾಸಿಮ್ರನ್ ಸಿಂಗ್, ಮಾಥ್ಯೂವ್ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರನ್(ನಾಯಕ), ಜಿತೇಶ್ ಶರ್ಮಾ, ಹರ್ಪ್ರೀತ್ ಸಿಂಗ್ ಭಾಟಿಯಾ, ಶಾರುಕ್ ಖಾನ್, ಹರ್ಪ್ರೀತ್ ಬ್ರಾರ್, ರಾಹುಲ್ ಚಹಾರ್, ಅರ್ಶದೀಪ್ ಸಿಂಗ್
ಮುಂಬೈ ಇಂಡಿಯನ್ಸ್ 5 ಪಂದ್ಯದಲ್ಲಿ 2 ಸೋಲು 3 ಪಂದ್ಯದಲ್ಲಿ ಗೆಲುವು ಕಂಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯನ್ನು ಮುಂಬೈ ಇಂಡಿಯನ್ಸ್ ಸೋಲಿನೊಂದಿಗೆ ಆರಂಭಿಸಿತ್ತು. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಆರ್‌ಸಿಬಿ ವಿರುದ್ಧ ಸೋಲು ಕಂಡಿತ್ತು. ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಡಿ ಸೋಲು ಕಂಡಿತ್ತು. ಸತತ 2 ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್ ಮೊದಲ ಗೆಲುವು ಕಂಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ.ಡೆಲ್ಲಿ ವಿರುದ್ಧ ಮುಂಬೈ 6 ವಿಕೆಟ್ ಗೆಲುವು ಕಂಡಿತ್ತು. ಈ ಗೆಲುವಿನ ಬಳಿಕ ಮುಂಬೈ ಇಂಡಿಯನ್ಸ್ ಆತ್ಮವಿಶ್ವಾಸ ಹೆಚ್ಚಿತು. ಬಳಿಕ ಸತತ 3 ಪಂದ್ಯ ಗೆದ್ದುಕೊಂಡಿತು. ಡೆಲ್ಲಿ ಬಳಿಕ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗೆಲುವು ದಾಖಲಿಸಿತು. ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್ ಗೆಲುವು ದಾಖಲಿಸಿತು.
ಬೆಂಗಳೂರಿನ CTR ಗೆ ಭೇಟಿ ನೀಡಿದ ವಿರುಷ್ಕಾ ಜೋಡಿ..! ವಿಡಿಯೋ ವೈರಲ್
ಪಂಜಾಬ್ ಕಿಂಗ್ಸ್ ಆಡಿದ 6 ಪಂದ್ಯದಲ್ಲಿ 3 ಗೆಲುವು 3 ಸೋಲು ಅನುಭವಿಸಿದೆ. ಮೊದಲ ಪಂದ್ಯದಲ್ಲಿ ಪಂಜಾಬ್ ಕೆಕೆಆರ್ ವಿರುದ್ಧ ಗೆಲುವು ದಾಖಲಿಸಿತ್ತು. ಈ ಪಂದ್ಯದಲ್ಲಿ ಪಂಜಾಬ್ ಡಕ್‌ವರ್ತ್ ನಿಯಮದನ್ವಯ ಗೆಲುವು ದಾಖಲಿಸಿತ್ತು. ಟೂರ್ನಿಯಲ್ಲಿ ಶುಭಾರಂಭ ಮಾಡಿದ ಪಂಜಾಬ್ ಕಿಂಗ್ಸ್, ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ ಸಾಮರ್ಥ್ಯ ಸಾಬೀತುಪಡಿಸಿತು. ಆದರೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಗ್ಗರಿಸಿ ನಿರಾಸೆ ಅನುಭವಿಸಿತು. ಗುಜರಾತ್ ಟೈಟಾನ್ಸ್ ವಿರುದ್ಧವೂ ಪಂಜಾಬ್ ಮುಗ್ಗರಿಸಿತು. ಲಖನೌ ಸೂಪರ್ ಜೈಂಟ್ಸ್ ವಿರುದ್ಧ 2 ವಿಕೆಟ್ ಗೆಲುವು ದಾಖಲಿಸುವ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡಿತು. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 24 ರನ್ ಗೆಲುವು ದಾಖಲಿಸಿದೆ.
ಐಪಿಎಲ್ ಪ್ಲೇ ಆಫ್: 16ನೇ ಆವೃತ್ತಿಯ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿಯನ್ನು ಶುಕ್ರವಾರ ಬಿಸಿಸಿಐ ಪ್ರಕಟಿಸಿದ್ದು, ಪಂದ್ಯಗಳು ಚೆನ್ನೈ ಹಾಗೂ ಅಹಮದಾಬಾದ್‌ನಲ್ಲಿ ನಡೆಯಲಿವೆ. ಮೇ 23ರಂದು ಮೊದಲ ಕ್ವಾಲಿಫೈಯರ್, ಮೇ 24ರಂದು ಎಲಿಮಿನೇಟರ್ ಪಂದ್ಯಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೇ 26ರಂದು 2ನೇ ಎಲಿಮಿನೇಟರ್, ಮೇ 28ರಂದು ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮೇ 21ರಂದು ಲೀಗ್ ಹಂತ ಮುಕ್ತಾಯಗೊಳ್ಳಲಿದೆ.
