IPL 2023: ಕ್ರಿಸ್ ಗೇಲ್, ಎಬಿಡಿಯಿಂದ ಐಪಿಎಲ್ ಕಾಮೆಂಟ್ರಿ!
16ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 31ರಿಂದ ಆರಂಭ
ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ ಎಬಿಡಿ, ಕ್ರಿಸ್ ಗೇಲ್
ಇಂಗ್ಲಿಷ್ ಕಾಮೆಂಟ್ರಿ ಮಾಡಲಿರುವ ಆರ್‌ಸಿಬಿ ದಿಗ್ಗಜ ಕ್ರಿಕೆಟಿಗರು
ಮುಂಬೈ(ಮಾ.30): 16ನೇ ಆವೃತ್ತಿಯ ಐಪಿಎಲ್‌ನಲ್ಲಿ ದಿಗ್ಗಜ ಕ್ರಿಕೆಟಿಗರಾದ ಎಬಿ ಡಿ ವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಜಿಯೋ ಸಿನಿಮಾ ವೆಬ್/ಆ್ಯಪ್‌ನಲ್ಲಿ ಈ ಬಾರಿ 11 ಭಾಷೆಗಳಲ್ಲಿ ವೀಕ್ಷಕ ವಿವರಣೆಯೊಂದಿಗೆ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದ್ದು, ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್, ಅನಿಲ್ ಕುಂಬ್ಳೆ, ಜಹೀರ್ ಖಾನ್ ಸೇರಿದಂತೆ ಹಲವು ತಾರೆಯರು ಇಂಗ್ಲಿಷ್ ಕಾಮೆಂಟ್ರಿ ತಂಡದಲ್ಲಿದ್ದಾರೆ.
ಇನ್ನು ಇದೇ ವೇಳೆ ಕರ್ನಾಟಕದ ಮಾಜಿ ಆಟಗಾರರಾದ ಎಸ್.ಅರವಿಂದ್, ಅಮಿತ್ ವರ್ಮಾ, ದೀಪಕ್ ಚೌಗಲೆ, ಎಚ್.ಎಸ್.ಶರತ್ ಕನ್ನಡ ಕಾಮೆಂಟ್ರಿಗೆ ಪಾದಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ ಟೀವಿ ಪ್ರಸಾರ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲೂ ಕನ್ನಡದಲ್ಲಿ ಕಾಮೆಂಟ್ರಿ ಕೇಳಬಹುದಾಗಿದೆ. ವಿಜಯ್ ಭಾರದ್ವಾಜ್, ಶ್ರೀನಿವಾಸ್ ಮೂರ್ತಿ ಸೇರಿ ಇನ್ನೂ ಕೆಲ ಮಾಜಿ ಕ್ರಿಕೆಟಿಗರು ವೀಕ್ಷಕ ವಿವರಣೆ ನೀಡಲಿದ್ದಾರೆ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ಹತ್ತೂ ತಂಡಗಳು ಟೂರ್ನಿಗೆ ಸಜ್ಜುಗೊಳ್ಳುತ್ತಿವೆ. ಮಾ.31ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ಹಾಗೂ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್‌್ಸ ನಡುವಿನ ಪಂದ್ಯದ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ.
ಆರ್‌ಸಿಬಿ ಅಭಿಮಾನಿಗಳಿಗೆ ಎಬಿಡಿ ಭಾವನಾತ್ಮಕ ಪತ್ರ
ಬೆಂಗಳೂರು: ದ.ಆಫ್ರಿಕಾ ಹಾಗೂ ಐಪಿಎಲ್ನ ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಬೆಂಗಳೂರಿನ ಅಭಿಮಾನಿಗಳು, ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿ ಸಹ ಆಟಗಾರರ ಬಗ್ಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಅಭಿಮಾನಿಗಳಿಂದ ತುಂಬಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಾಲ್ಕನಿಗೆ ಬಂದಾಗ ನನ್ನ ಕಣ್ಣಲ್ಲಿ ನೀರು ತುಂಬಿತ್ತು. ಎಬಿಡಿ ಎಬಿಡಿ ಎಂಬ ಅಭಿಮಾನಿಗಳ ಜೈಕಾರ ವಿಭಿನ್ನವಾಗಿ ಕೇಳಿಸಿತು. ಇದರಿಂದಾಗಿ ನಾನು ತುಂಬಾ ಭಾವುಕನಾದೆ. ಇಂತಹ ಅದ್ಭುತ ನಗರ ಹಾಗೂ ಫ್ರಾಂಚೈಸಿಯನ್ನು ಪ್ರತಿನಿಧಿಸಿದ್ದಕ್ಕೆ ಹೆಮ್ಮೆ ಇದೆ ಎಂದಿದ್ದಾರೆ. 2003ರಿಂದ ಇಲ್ಲಿಯವರೆಗೂ ಭಾರತದಲ್ಲಿ ಕಳೆದಿರುವ ಕ್ಷಣಗಳು ನನ್ನ ಪಾಲಿಗೆ ವಿಶೇಷ. ಈ ದೇಶ ಹಾಗೂ ಜನತೆಯ ಜೊತೆ ಆಳವಾದ ಸಂಬಂಧ ಹೊಂದಿದ್ದೇನೆ. ಆರ್‌ಸಿಬಿ, ಬೆಂಗಳೂರಿನ ನನ್ನೆಲ್ಲಾ ಅಭಿಮಾನಿಗಳು, ವಿಶೇಷವಾಗಿ ವಿರಾಟ್ ಕೊಹ್ಲಿಗೆ ಧನ್ಯವಾದ’ ಎಂದು ಬರೆದಿದ್ದಾರೆ.
16ನೇ ಐಪಿಎಲ್‌ಗೆ ಕ್ಷಣಗಣನೆ; ಅಭಿಮಾನಿಗಳಲ್ಲಿ ಜೋರಾಯ್ತು ಐಪಿಎಲ್ ಜ್ವರ
ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಎನಿಸಿಕೊಂಡಿರುವ ಎಬಿ ಡಿವಿಲಿಯರ್ಸ್ 2011ರಿಂದ 2021ರವರೆಗೆ ಒಟ್ಟು 11 ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಆರ್‌ಸಿಬಿ ಪರ ಒಟ್ಟು 156 ಪಂದ್ಯಗಳನ್ನಾಡಿರುವ ಎಬಿ ಡಿವಿಲಿಯರ್ಸ್ 37 ಅರ್ಧ ಶತಕ ಹಾಗೂ 2 ಶತಕ ಸಹಿತ ಒಟ್ಟಾರೆ 4,491 ರನ್ ಬಾರಿಸಿ ಮಿಂಚಿದ್ದಾರೆ. ಎಬಿ ಡಿವಿಲಿಯರ್ಸ್ ಹಲವಾರು ಪಂದ್ಯಗಳಲ್ಲಿ ಏಕಾಂಗಿಯಾಗಿ ಆರ್‌ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಎಬಿ ಡಿವಿಲಿಯರ್ಸ್ ಆಡಿದ ಹಲವು ಟಿ20 ಇನಿಂಗ್ಸ್‌ಗಳು ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೇ ಉಳಿದಿವೆ. ಎಬಿ ಡಿವಿಲಿಯರ್ಸ್, 2021ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಆರ್‌ಸಿಬಿ ಪರ 150+ ಸ್ಟ್ರೈಕ್‌ರೇಟ್‌ನಲ್ಲಿ ರನ್ ಗಳಿಸಿದ್ದರು ಎನ್ನುವುದು ಮತ್ತೊಂದು ವಿಶೇಷ.