ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಪಂಜಾಬ್-ಕೋಲ್ಕತಾ ಮುಖಾಮುಖಿಟಾಸ್ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ಬೌಲಿಂಗ್ ಆಯ್ಕೆಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂ ಆತಿಥ್ಯ
ಮೊಹಾಲಿ(ಏ.01): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕೆ ಇಲ್ಲಿನ ಐ ಎಸ್ ಬಿಂದ್ರಾ ಮೈದಾನ ಆತಿಥ್ಯವನ್ನು ವಹಿಸಿದೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಿತೀಶ್ ರಾಣಾ, ನಾಯಕನಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ತಂಡವನ್ನು ಅನುಭವಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಮುನ್ನಡೆಸುತ್ತಿದ್ದಾರೆ.
ಈ ಎರಡೂ ತಂಡಗಳು ಕಳೆದ ಕೆಲ ಆವೃತ್ತಿಗಳಲ್ಲಿ ಅಸ್ಥಿರ ಪ್ರದರ್ಶನ ತೋರಿದ್ದು, ಆಟಗಾರರ ಆಯ್ಕೆಯಲ್ಲೂ ಪದೇ ಪದೇ ಎಡವಿವೆ. ಕಳೆದ ವರ್ಷ ಪಂಜಾಬ್ 6ನೇ ಸ್ಥಾನ ಪಡೆದರೆ, ಕೆಕೆಆರ್ 7ನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಈ ಬಾರಿ ಎರಡೂ ತಂಡಗಳು ಹೊಸ ನಾಯಕರೊಂದಿಗೆ ಸುಧಾರಿತ ಪ್ರದರ್ಶನ ತೋರಲು ಎದುರು ನೋಡುತ್ತಿವೆ.
IPL 2023 ಉದ್ಘಟನಾ ಪಂದ್ಯದಲ್ಲಿ ಸಿಎಸ್‌ಕೆ ಮಣಿಸಿ ಶುಭಾರಂಭ ಮಾಡಿದ ಗುಜರಾತ್ ಟೈಟಾನ್ಸ್!
ತಂಡಗಳು ಹೀಗಿವೆ ನೋಡಿ:
ಕೋಲ್ಕತಾ ನೈಟ್ ರೈಡರ್ಸ್ : ಮನ್ದೀಪ್ ಸಿಂಗ್, ರೆಹಮಾನುಲ್ಲಾ ಗುರ್ಬಾಜ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೇನ್, ಶಾರ್ದೂಲ್ ಠಾಕೂರ್, ಟಿಮ್ ಸೌಥಿ, ಅನುಕೂಲ್ ರಾಯ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
ಪಂಜಾಬ್ ಕಿಂಗ್ಸ್: ಶಿಖರ್ ಧವನ್(ನಾಯಕ), ಪ್ರಭ್‌ಸಿಮ್ರನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಸಿಕಂದರ್ ರಾಜಾ, ಶಾರೂಖ್ ಖಾನ್, ಸ್ಯಾಮ ಕರ್ರನ್, ನೇಥನ್ ಎಲ್ಲೀಸ್, ಹಪ್ರೀತ್ ಬ್ರಾರ್, ರಾಹುಲ್ ಚಹರ್, ಅಶ್‌ರ್‍ದೀಪ್ ಸಿಂಗ್.
ಪಂದ್ಯ: ಮ.3.30ರಿಂದ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಪಿಚ್ ರಿಪೋರ್ಚ್
2019ರ ಬಳಿಕ ಮೊಹಾಲಿ ಮೊದಲ ಬಾರಿಗೆ ಐಪಿಎಲ್ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು, ವೇಗಿಗಳಿಗೆ ಹೆಚ್ಚಿನ ನೆರವು ದೊರೆಯುವ ನಿರೀಕ್ಷೆ ಇದೆ. ಇಲ್ಲಿ 2019ರ ಐಪಿಎಲ್‌ನಲ್ಲಿ ಸರಾಸರಿ 8.7 ರನ್‌ರೇಟ್‌ನಲ್ಲಿ ತಂಡಗಳು ರನ್ ಕಲೆಹಾಕಿದ್ದವು. ಈ ಆಧಾರದಲ್ಲಿ ಮೊದಲ ಇನ್ನಿಂಗ್ಸಲ್ಲಿ ಅಂದಾಜು 160-170 ರನ್ ದಾಖಲಾಗುವ ಸಾಧ್ಯತೆ ಇದೆ. ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿಯಾಗಬಹುದು.
