ಇಂದು ಗುಜರಾತ್ ಟೈಟಾನ್ಸ್-ಲಖನೌ ಸೂಪರ್ ಜೈಂಟ್ಸ್ ಸವಾಲುಗುಜರಾತ್ ಟೈಟಾನ್ಸ್‌ಗೆ ಪುಟಿದೇಳುವ ತವಕಹೈವೋಲ್ಟೇಜ್ ಪಂದ್ಯಕ್ಕೆ ಏಕಾನ ಮೈದಾನ ಆತಿಥ್ಯ
ಲಖನೌ(ಏ.22): ಟೂರ್ನಿಯ ಬಲಿಷ್ಠ ತಂಡ ಎನಿಸಿಕೊಂಡಿದ್ದರೂ ಸ್ಥಿರ ಆಟವಾಡಲು ವಿಫಲವಾಗುತ್ತಿರುವ ಗುಜರಾತ್ ಟೈಟಾನ್ಸ್ ಶನಿವಾರ ಲಖನೌ ವಿರುದ್ಧ ಸೆಣಸಾಡಲಿದ್ದು, ಕಳೆದ ಪಂದ್ಯದ ಸೋಲಿನಿಂದ ಹೊರಬಂದು ಮತ್ತೆ ಗೆಲುವಿನ ಹಳಿಗೆ ಮರಳುವ ನಿರೀಕ್ಷೆಯಲ್ಲಿದೆ. ಅತ್ತ ಆಡಿದ 6ರಲ್ಲಿ 4 ಪಂದ್ಯಗಳಲ್ಲಿ ಗೆದ್ದಿರುವ ಲಖನೌ ಸೂಪರ್ ಜೈಂಟ್ಸ್ ತವರಿನ ಏಕನಾ ಕ್ರೀಡಾಂಗಣದಲ್ಲಿ ಮತ್ತೊಂದು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಎದುರು ನೋಡುತ್ತಿದೆ.
ಎರಡೂ ತಂಡಗಳು ಇತರೆಲ್ಲಾ ತಂಡಗಳಿಗೆ ಹೋಲಿಸಿದರೆ ಉತ್ತಮ ಸಂಯೋಜನೆ ಹೊಂದಿವೆ. ತಾರಾ ಆಲ್ರೌಂಡರ್ಗಳು ಎರಡೂ ತಂಡಗಳಲ್ಲಿದ್ದು, ಏಕಾಂಗಿಯಾಗಿ ಪಂದ್ಯ ಗೆಲ್ಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಲಖನೌ ಸೂಪರ್ ಜೈಂಟ್ಸ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್, ಮಾರ್ಕಸ್ ಸ್ಟೋಯ್ನಿಸ್, ರವಿ ಬಿಷ್ಣೋಯ್ ಪ್ರದರ್ಶನ ನಿರ್ಣಾಯಕ. ಆದರೆ ಸ್ಪಿನ್ ಪಿಚ್‌ನಲ್ಲಿ ಇವರಿಗೆ ರಶೀದ್ ಖಾನ್‌ರನ್ನು ಎದುರಿಸುವುದು ಸವಾಲಾಗಬಹುದು. ಅತ್ತ ಲಖನೌ ಸೂಪರ್ ಜೈಂಟ್ಸ್, ರವಿ ಬಿಷ್ಣೋಯ್, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್ರನ್ನು ಪ್ರಮುಖ ಅಸ್ತ್ರವಾಗಿ ಬಳಸುವ ನಿರೀಕ್ಷೆ ಇದೆ.
ಗುಜರಾತ್ ಟೈಟಾನ್ಸ್ ತಂಡವು ಬ್ಯಾಟಿಂಗ್‌ನಲ್ಲಿ ಬ್ಯಾಟಿಂಗ್‌ನಲ್ಲಿ ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ ಹಾಗೂ ಡೇವಿಡ್ ಮಿಲ್ಲರ್ ಅವರನ್ನು ನೆಚ್ಚಿಕೊಂಡಿದೆ. ಆಲ್ರೌಂಡರ್ ವಿಜಯ್ ಶಂಕರ್, ಇಂಪ್ಯಾಕ್ಟ್ ಪ್ಲೇಯರ್ ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇನ್ನು ರಾಹುಲ್ ತೆವಾಟಿಯಾ ಮ್ಯಾಚ್ ಫಿನಿಶರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದು, ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.
IPL Playoffs Schedule: ಅಹಮದಾಬಾದ್‌ನಲ್ಲಿ ಐಪಿಎಲ್ ಫೈನಲ್!
ಇನ್ನೊಂದೆಡೆ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಕಳೆದ ಪಂದ್ಯದಲ್ಲಿ ಕಳೆದ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ ರಾಯಲ್ಸ್ ಎದುರು 10 ರನ್ ರೋಚಕ ಜಯ ಸಾಧಿಸಿದ್ದು, ಇದೇ ಗೆಲುವಿನ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. ಆರಂಭಿಕ ಬ್ಯಾಟರ್ ಕೈಲ್ ಮೇಯರ್ಸ್ ಉತ್ತಮ ಲಯದಲ್ಲಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಇನ್ನು ಕೆ ಎಲ್ ರಾಹುಲ್ ಕೂಡಾ ಲಯಕ್ಕೆ ಮರಳಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೋನಿಸ್ ಹಾಗೂ ನಿಕೋಲಸ್ ಪೂರನ್ ಪಂದ್ಯದ ದಿಕ್ಕನ್ನೇ ಬದಲಿಸುವ ಸಾಮರ್ಥ್ಯವನ್ನು ಹೊಂದಿದ್ದು ಇಂದಿನ ಪಂದ್ಯ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ.
ಸಂಭವನೀಯ ಆಟಗಾರರ ಪಟ್ಟಿ
ಗುಜರಾತ್: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಜೋಶ್ವಾ ಲಿಟ್ಲ್, ಅಲ್ಜಾರಿ ಜೋಸೆಫ್, ಮೋಹಿತ್ ಶರ್ಮಾ, ಮೊಹಮ್ಮದ್ ಶಮಿ.
ಲಖನೌ: ಕೈಲ್ ಮೇಯರ್ಸ್, ಕೆ ಎಲ್ ರಾಹುಲ್(ನಾಯಕ), ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್, ಕೃಷ್ಣಪ್ಪ ಗೌತಮ್, ಆಯುಷ್ ಬದೋನಿ, ಆವೇಶ್ ಖಾನ್, ರವಿ ಬಿಷ್ಣೋಯ್, ಮಾರ್ಕ್ ವುಡ್.
ಪಿಚ್ ರಿಪೋರ್ಚ್
ಏಕನಾ ಕ್ರೀಡಾಂಗಣದ ಪಿಚ್‌ನಲ್ಲಿ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ಸಿಗಲಿದೆ. 160-170 ರನ್ ಮೊದಲ ಇನ್ನಿಂಗ್‌್ಸನ ಸರಾಸರಿ ಮೊತ್ತ. ಮಧ್ಯಾಹ್ನದ ಪಂದ್ಯವಾಗಿರುವ ಕಾರಣ ಇಬ್ಬನಿ ಸಮಸ್ಯೆ ಎದುರಾಗುವುದಿಲ್ಲ. ಹೀಗಾಗಿ ಟಾಸ್ ಅಷ್ಟೊಂದು ನಿರ್ಣಾಯಕ ಆಗಲಾರದು.
ಪಂದ್ಯ: ಮಧ್ಯಾಹ್ನ 3.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
