* ಅಹಮದಾಬಾದ್‌ನಲ್ಲಿಂದು ಸಹೋದರರ ಸವಾಲ್* ಲಖನೌ ಸೂಪರ್ ಜೈಂಟ್ಸ್-ಗುಜರಾತ್ ಟೈಟಾನ್ಸ್ ಪಂದ್ಯಕ್ಕೆ ಮೋದಿ ಸ್ಟೇಡಿಯಂ ಆತಿಥ್ಯ* ಪ್ಲೇ ಆಫ್ ಹೊಸ್ತಿಲಲ್ಲಿ ಗುಜರಾತ್ ಟೈಟಾನ್ಸ್
ಅಹಮದಾಬಾದ್(ಮೇ.07): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 51ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೃನಾಲ್ ಪಾಂಡ್ಯ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಐಪಿಎಲ್‌ನ ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಗುಜರಾತ್ ಟೈಟಾನ್ಸ್ ತಂಡದಿಂದ ಜೋಶ್ವಾ ಲಿಟ್ಲ್ ಹೊರಬಿದ್ದಿದ್ದು, ಅಲ್ಜಾರಿ ಜೋಸೆಫ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ನವೀನ್ ಉಲ್ ಹಕ್ ಬದಲಿಗೆ ಕ್ವಿಂಟನ್ ಡಿ ಕಾಕ್ ತಂಡ ಕೂಡಿಕೊಂಡಿದ್ದಾರೆ.
14 ಅಂಕದೊಂದಿಗೆ ಅಗ್ರಸ್ಥಾನದಲ್ಲಿರುವ ಗುಜರಾತ್ ಈ ಪಂದ್ಯದಲ್ಲಿ ಗೆದ್ದರೆ ಪ್ಲೇ-ಆಫ್‌ನಲ್ಲಿ ಸ್ಥಾನ ಬಹುತೇಕ ಖಚಿತವಾಗಲಿದೆ. ಮತ್ತೊಂದೆಡೆ ಗೆಲುವಿನ ಲಯಕ್ಕೆ ಮರಳಿ ಅಗ್ರ-4ರಲ್ಲೇ ಉಳಿದುಕೊಳ್ಳಲು ಲಖನೌ ಸೂಪರ್ ಕಾಯುತ್ತಿದೆ. ಟೈಟಾನ್ಸ್ ಬಲಿಷ್ಠ ಬ್ಯಾಟಿಂಗ್, ಬೌಲಿಂಗ್ ಪಡೆ ಹೊಂದಿದ್ದರೆ, ಅಸ್ಥಿರ ಬ್ಯಾಟಿಂಗ್ ಪಡೆಯ ಸಮಸ್ಯೆ ಲಖನೌ ತಂಡವನ್ನು ಕಾಡುತ್ತಿದೆ.
IPL 2023: ಡೆಲ್ಲಿ ವಿರುದ್ದ ವಿರಾಟ್ ಕೊಹ್ಲಿ ಆಟದ ಶೈಲಿ ಬಗ್ಗೆ ಕಿಡಿಕಾರಿದ ಟಾಮ್ ಮೂಡಿ..!
ತಂಡಗಳು ಹೀಗಿವೆ ನೋಡಿ:
ಗುಜರಾತ್ ಟೈಟಾನ್ಸ್: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹಮ್ಮದ್, ಮೊಹ್ಮಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಮೋಹಿತ್ ಶರ್ಮಾ.
ಲಖನೌ ಸೂಪರ್ ಜೈಂಟ್ಸ್: ಕೈಲ್ ಮೇಯರ್ಸ್, ಕ್ವಿಂಟನ್ ಡಿ ಕಾಕ್, ಮನನ್ ವೋಹ್ರಾ, ದೀಪಕ್ ಹೂಡಾ, ಆಯುಷ್ ಬದೋನಿ, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ(ನಾಯಕ), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಆವೇಶ್ ಖಾನ್.
ಪಂದ್ಯ: ಮಧ್ಯಾಹ್ನ 3.30ರಿಂದ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಪಿಚ್ ರಿಪೋರ್ಟ್
ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟರ್ಗಳಿಗೆ ಹೆಚ್ಚಿನ ನೆರವು ನೀಡಲಿದ್ದು, ದೊಡ್ಡ ಮೊತ್ತ ದಾಖಲಾಗುವ ಸಾಧ್ಯತೆ ಹೆಚ್ಚು. ಕಳೆದೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದೆ.
