ಆರ್‌ಸಿಬಿ-ಸಿಎಸ್‌ಕೆ ಪಂದ್ಯಕ್ಕೆ ಕ್ಷಣಗಣನೆ ಶುರುಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಆತಿಥ್ಯಆರ್‌ಸಿಬಿ-ಸಿಎಸ್‌ಕೆ ಪಂದ್ಯದ ಭವಿಷ್ಯ ನುಡಿದ ಸಂಖ್ಯಾಶಾಸ್ತ್ರಜ್ಞ
ಬೆಂಗಳೂರು(ಏ.17): ಐಪಿಎಲ್ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಇರುವ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್ ಇತಿಹಾಸದ ಬದ್ದ ಎದುರಾಳಿಗಳೆಂದೇ ಬಿಂಬಿತವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇಲ್ಲಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಖ್ಯಾತ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ, ಚೆನ್ನೈ-ಬೆಂಗಳೂರು ಪಂದ್ಯದ ಭವಿಷ್ಯ ನುಡಿದಿದ್ದಾರೆ.
ಹೌದು, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿತ್ತು. ಇದಾದ ಬಳಿಕ ಸತತ ಎರಡು ಪಂದ್ಯಗಳನ್ನು ಸೋತು ನಿರಾಸೆ ಅನುಭವಿಸಿದ್ದ ಬೆಂಗಳೂರು ತಂಡವು, ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸುಲಭ ಜಯ ದಾಖಲಿಸಿ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಇದೀಗ ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸವಾಲು ಮೆಟ್ಟಿ ನಿಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಜ್ಜಾಗಿದೆ. ಇದರ ಬೆನ್ನಲ್ಲೇ ಬಿಗ್‌ಬಾಸ್ ಸ್ಪರ್ಧಾಳು ಹಾಗೂ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ಕುರಿತಂತೆ ಭವಿಷ್ಯ ನುಡಿದಿದ್ದಾರೆ.
ಸೌರವ್ ಗಂಗೂಲಿ ಅನ್‌ಫಾಲೋ ಮಾಡಿದ ವಿರಾಟ್ ಕೊಹ್ಲಿ..! ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ ಕೊಹ್ಲಿ ಜಿದ್ದು!
"ಇವತ್ತು ನನ್ನ ಬೆಂಬಲ RCB ಗೆ. ನನ್ನ ಪ್ರಕಾರ, ಇವತ್ತಿನ ಪಂದ್ಯದಲ್ಲಿ ವೆಯ್ನ ಪಾರ್ನೆಲ್ ಮೇಲೆ ತುಂಬಾ ಭರವಸೆ ಇಟ್ಟಿದ್ದಿನಿ. ಮ್ಯಾಕ್ಸವೇಲ್ ಸಹ ಇಂದಿನ ಪಂದ್ಯದಲ್ಲಿ ತುಂಬಾ ಒಳ್ಳೆಯ ಆಟ ಆಡಬಹುದು. ಇಂದಿನ ಪಂದ್ಯ ಬಹಳ ಕುತೂಹಲ ಪಂದ್ಯ, ಕೊನೆಯ ಓವರ್‌ವರೆಗೂ ಪಂದ್ಯ ಕುತೂಹಲವಾಗಿರಲಿದೆ" ಎಂದು ಆರ್ಯವರ್ಧನ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡಗಳು ಒಟ್ಟಾರೆ 30 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರ್‌ಸಿಬಿ ಎದುರು ಸ್ಪಷ್ಟ ಮೇಲುಗೈ ಸಾಧಿಸಿದೆ. 30 ಪಂದ್ಯಗಳ ಪೈಕಿ ಧೋನಿ ನೇತೃತ್ವದ ಚೆನ್ನೈ 19 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನೊಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಹೊರಬಿದ್ದಿರಲಿಲ್ಲ.
IPL 2023: ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು - ಚೆನ್ನೈ ಸೂಪರ್ ಕಿಂಗ್ಸ್ ಮೆಗಾ ಫೈಟ್
ಟಿಕೆಟ್ ಇಲ್ಲದಿದ್ದರೂ ಅಭಿಮಾನಿಗಳ ಕ್ಯೂ!
ಆರ್‌ಸಿಬಿ-ಚೆನ್ನೈ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್‌ಔಟ್ ಆಗಿದ್ದರೂ ಭಾನುವಾರವೂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಟಿಕೆಟ್‌ಗಾಗಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದರು. ಅಧಿಕಾರಿಗಳು ಟಿಕೆಟ್ ಈಗಾಗಲೇ ಮುಗಿದಿದೆ ಎಂದು ಹೇಳಿದರೂ ಸ್ಥಳದಿಂದ ತೆರಳಲಿಲ್ಲ. ಗೇಟ್ ಬಳಿ ನೆರೆದಿದ್ದ ಪ್ರೇಕ್ಷಕರನ್ನು ಅಲ್ಲಿಂದ ಹೊರಕಳುಹಿಸಲು ಪೊಲೀಸರು ಹರಸಾಹಸ ಪಡಬೇಕಾದ ಪರಿಸ್ಥಿತಿ ಕಂಡು ಬಂದಿತು.
ಸಂಭವನೀಯ ಆಟಗಾರರ ಪಟ್ಟಿ
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಶಾಬಾಜ್ ಅಹಮ್ಮದ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯ್‌ಕುಮಾರ್.
ಚೆನ್ನೈ: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್‌ವೇ, ಅಜಿಂಕ್ಯ ರಹಾನೆ, ಮೋಯಿನ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಎಂ ಎಸ್ ಧೋನಿ(ನಾಯಕ),ಪತಿರಣ, ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್.
