ಐಪಿಎಲ್ ಟೂರ್ನಿಯ ಪ್ಲೇ ಆಫ್ ವೇಳಾಪಟ್ಟಿ ಪ್ರಕಟಮೇ 28ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಚೆನ್ನೈನಲ್ಲಿ 2 ಪ್ಲೇ-ಆಫ್ ಪಂದ್ಯಕ್ಕೆ ಆತಿಥ್ಯ
ಮುಂಬೈ(ಏ.22): 16ನೇ ಆವೃತ್ತಿಯ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿಯನ್ನು ಶುಕ್ರವಾರ ಬಿಸಿಸಿಐ ಪ್ರಕಟಿಸಿದ್ದು, ಪಂದ್ಯಗಳು ಚೆನ್ನೈ ಹಾಗೂ ಅಹಮದಾಬಾದ್‌ನಲ್ಲಿ ನಡೆಯಲಿವೆ. ಮೇ 23ರಂದು ಮೊದಲ ಕ್ವಾಲಿಫೈಯರ್, ಮೇ 24ರಂದು ಎಲಿಮಿನೇಟರ್ ಪಂದ್ಯಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೇ 26ರಂದು 2ನೇ ಎಲಿಮಿನೇಟರ್, ಮೇ 28ರಂದು ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮೇ 21ರಂದು ಲೀಗ್ ಹಂತ ಮುಕ್ತಾಯಗೊಳ್ಳಲಿದೆ.
ಕಳೆದ ವರ್ಷವೂ 2ನೇ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಗಳು ಅಹಮದಾಬಾದ್‌ನಲ್ಲೇ ನಡೆದಿದ್ದವು. ಮೊದಲ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಕೋಲ್ಕತಾದಲ್ಲಿ ಆಯೋಜಿಸಲಾಗಿತ್ತು. ಈ ವರ್ಷದ ಉದ್ಘಾಟನಾ ಸಮಾರಂಭ ಹಾಗೂ ಪಂದ್ಯಕ್ಕೂ ಮೋದಿ ಕ್ರೀಡಾಂಗಣವನ್ನೇ ಬಿಸಿಸಿಐ ಆಯ್ಕೆ ಮಾಡಿತ್ತು.
16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಮುಕ್ತಾಯವಾಗಿದ್ದು, ರಾಜಸ್ಥಾನ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ರಾಜಸ್ಥಾನ ರಾಯಲ್ಸ್, ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಲಾ 6 ಪಂದ್ಯಗಳನ್ನಾಡಿ 4 ಗೆಲುವು ಹಾಗೂ 2 ಸೋಲುಗಳೊಂದಿಗೆ ತಲಾ 8 ಅಂಕಗಳನ್ನು ಗಳಿಸಿದ್ದರೂ ಸಹಾ, ನೆಟ್ ರನ್‌ರೇಟ್ ಆಧಾರದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಅಗ್ರಸ್ಥಾನ ಕಾಯ್ದುಕೊಂಡಿವೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
ಏಕದಿನದಲ್ಲಿ ವೇಗದ 100 ವಿಕೆಟ್: ಸಂದೀಪ್ ದಾಖಲೆ
ಕಠ್ಮಂಡು: ನೇಪಾಳದ ಲೆಗ್ ಸ್ಪಿನ್ನರ್ ಸಂದೀಪ್ ಲಾಮಿಚ್ಚಾನೆ ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ 100 ವಿಕೆಟ್ ಪಡೆದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಗುರುವಾರ ಒಮಾನ್ ವಿರುದ್ಧದ ಏಷ್ಯಾಕಪ್ ಅರ್ಹತಾ ಟೂರ್ನಿಯ ಭಾಗವಾದ ಎಸಿಸಿ ಪ್ರೀಮಿಯರ್ ಕಪ್ ಪಂದ್ಯದಲ್ಲಿ ಅವರು ಈ ಮೈಲಿಗಲ್ಲು ಸಾಧಿಸಿದರು.
IPL 2023: ಚೆಪಾಕ್‌ನಲ್ಲಿ ಮುಳುಗಿದ ಸನ್, ಕಾನ್ವೆ ಆಟಕ್ಕೆ ಚೆನ್ನೈ ವಿನ್!
22 ವರ್ಷದ ಸಂದೀಪ್ ಕೇವಲ 42 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದು, ಅಷ್ಘಾನಿಸ್ತಾನದ ರಶೀದ್ ಖಾನ್(44 ಪಂದ್ಯ) ಹೆಸರಲ್ಲಿದ್ದ ದಾಖಲೆ ಮುರಿದರು. ಆಸ್ಪ್ರೇಲಿಯಾದ ಮಿಚೆಲ್ ಸ್ಟಾರ್ಕ್ 52 ಪಂದ್ಯ, ಪಾಕಿಸ್ತಾನದ ಸಕ್ಲೇನ್ ಮುಷ್ತಾಕ್ 53 ಪಂದ್ಯ, ನ್ಯೂಜಿಲೆಂಡ್ನ ಶೇನ್ ಬಾಂಡ್ 54 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಭಾರತೀಯರ ಪೈಕಿ ಮೊಹಮದ್ ಶಮಿ 56 ಪಂದ್ಯ, ಬೂಮ್ರಾ 57 ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿದ್ದರು.
ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಶ್ರೇಯಸ್
ಲಂಡನ್: ಬೆನ್ನು ನೋವಿನಿಂದ ಬಳಲುತ್ತಿರುವ ಭಾರತದ ತಾರಾ ಬ್ಯಾಟರ್ ಶ್ರೇಯಸ್ ಅಯ್ಯರ್ ಮಂಗಳವಾರ ಲಂಡನ್ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ಅವರು ಎದ್ದು ನಡೆಯಲು ಆರಂಭಿಸಿದ್ದರೂ ಸಂಪೂರ್ಣ ಚೇತರಿಸಿಕೊಳ್ಳಲು ಸುಮಾರು 4-5 ತಿಂಗಳು ಬೇಕಾಗಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ ಹಲವು ಸರಣಿ, ಟೂರ್ನಿಗಳನ್ನು ತಪ್ಪಿಸಿಕೊಂಡಿರುವ ಅವರು ಸೆಪ್ಟೆಂಬರ್ ವೇಳೆಗೆ ಗುಣಮುಖರಾಗುವ ನಿರೀಕ್ಷೆಯಿದೆ. ಆದರೆ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಏಷ್ಯಾಕಪ್ನಿಂದ ಹೊರಗುಳಿಯುವ ಸಾಧ್ಯತೆ ಇದೆ.
