ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್‌-ಆರ್‍‌ಸಿಬಿ ಕಾದಾಟಪ್ಲೇ ಆಫ್‌ ಪ್ರವೇಶಿಸುವ ದೃಷ್ಟಿಯಿಂದ ಉಭಯ ತಂಡಗಳ ಪಾಲಿಗೆ ಮಹತ್ವದ ಪಂದ್ಯಬಲಿಷ್ಠ ತಂಡದೊಂದಿಗೆ ಸಂಜು ಸ್ಯಾಮ್ಸನ್ ಪಡೆ ಕಣಕ್ಕೆ

ಜೈಪುರ(ಮೇ.14): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟದತ್ತ ಸಾಗುತ್ತಿದ್ದು, ಸೂಪರ್‍‌ ಸಂಡೆಯ ಮೊದಲ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪ್ಲೇ ಆಫ್‌ ಪ್ರವೇಶಿಸುವ ದೃಷ್ಟಿಯಿಂದ ಉಭಯ ತಂಡಗಳ ಪಾಲಿಗೆ ಈ ಪಂದ್ಯವು ಸಾಕಷ್ಟು ಮಹತ್ವದ್ದೆನಿಸಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ 6 ಗೆಲುವು ಹಾಗೂ 6 ಸೋಲುಗಳೊಂದಿಗೆ 12 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನ ಸ್ಥಾನಕ್ಕೆ ಲಗ್ಗೆಯಿಡಲಿದೆ. ಹೀಗಾಯಿ ರಾಜಸ್ಥಾನ ರಾಯಲ್ಸ್ ತಂಡದ ಪಾಲಿಗೆ ಈ ಪಂದ್ಯ ಸಾಕಷ್ಟು ಮಹತ್ವದ್ದೆನಿಸಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ಎದುರು 9 ವಿಕೆಟ್‌ಗಳ ಅನಾಯಾಸದ ಗೆಲುವು ದಾಖಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ರಾಯಲ್ಸ್‌ ಪಡೆ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಈ ಕಾರಣಕ್ಕಾಗಿಯೇ ಆರ್‍‌ಸಿಬಿ ಎದುರು ಕೂಡಾ ರಾಜಸ್ಥಾನ ರಾಯಲ್ಸ್‌ ತಂಡವು ಕಳೆದ ಪಂದ್ಯದಲ್ಲಿ ಆಡಿದ ತಂಡದೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಸತತ ಮೂರು ಪಂದ್ಯಗಳನ್ನು ಸೋತು ಕಂಗಾಲಾಗಿದ್ದ ರಾಜಸ್ಥಾನ ರಾಯಲ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ಎದುರಿನ ಪಂದ್ಯದಲ್ಲಿ 9 ವಿಕೆಟ್‌ ಭರ್ಜರಿ ಜಯ ಸಾಧಿಸಿತ್ತು. ಯಶಸ್ವಿ ಜೈಸ್ವಾಲ್ ಕೇವಲ 47 ಎಸೆತಗಳಲ್ಲಿ ಅಜೇಯ 98 ರನ್ ಬಾರಿಸಿದರೆ, ನಾಯಕ ಸಂಜು ಸ್ಯಾಮ್ಸನ್ 29 ಎಸೆತಗಳಲ್ಲಿ ಅಜೇಯ 48 ರನ್ ಬಾರಿಸಿದ್ದರು.

ಕೆಕೆಆರ್ ಎದುರು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್, ಆರಂಭದಲ್ಲೇ ಜೋಸ್ ಬಟ್ಲರ್(0) ವಿಕೆಟ್ ಕಳೆದುಕೊಂಡಿತು. ಹೀಗಿದ್ದೂ ಇಂದಿನ ಪಂದ್ಯದಲ್ಲೂ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್‍‌, ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಇನಿಂಗ್ಸ್‌ ಆರಂಭಿಸಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕ ಕೂಡಾ ಸಾಕಷ್ಟು ಬಲಿಷ್ಠವಾಗಿದ್ದು, ಜೋ ರೂಟ್, ಧೃವ್ ಜ್ವರೇಲ್ ಹಾಗೂ ಶಿಮ್ರೊನ್ ಹೆಟ್ಮೇಯರ್ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಲಿದ್ದಾರೆ. 

IPL Playoffs Qualification Scenario: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಲೆಕ್ಕಾಚಾರ..!

ಇನ್ನು ಬೌಲಿಂಗ್ ವಿಭಾಗದಲ್ಲಿ ಯುಜುವೇಂದ್ರ ಚಹಲ್ ಹಾಗೂ ಟ್ರೆಂಟ್‌ ಬೌಲ್ಟ್ ಮಾರಕ ದಾಳಿ ನಡೆಸುತ್ತಿದ್ದಾರೆ. ಇನ್ನು ಸಂದೀಪ್ ಶರ್ಮಾ ಕೂಡಾ ಡೆತ್ ಓವರ್‍‌ನಲ್ಲಿ ಶಿಸ್ತುಬದ್ದ ದಾಳಿ ನಡೆಸುತ್ತಿದ್ದಾರೆ. ಇನ್ನು ರವಿಚಂದ್ರನ್ ಅಶ್ವಿನ್ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ನೆರವಾಗುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

ಆರ್‍‌ಸಿಬಿ ಎದುರಿನ ಪಂದ್ಯಕ್ಕೆ ರಾಜಸ್ಥಾನ ರಾಯಲ್ಸ್ ಸಂಭಾವ್ಯ ತಂಡ ಹೀಗಿದೆ ನೋಡಿ:

ಯಶಸ್ವಿ ಜೈಸ್ವಾಲ್‌, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ಕ್ಯಾಪ್ಟನ್&ವಿಕೆಟ್ ಕೀಪರ್), ಜೋ ರೂಟ್, ಧೃವ್ ಜ್ವರೇಲ್, ಶಿಮ್ರೊನ್ ಹೆಟ್ಮೇಯರ್, ರವಿಚಂದ್ರನ್ ಅಶ್ವಿನ್‌, ಟ್ರೆಂಟ್‌ ಬೌಲ್ಟ್, ಸಂದೀಪ್ ಶರ್ಮಾ, ಕೆ ಎಂ ಆಸಿಫ್, ಯುಜುವೇಂದ್ರ ಚಹಲ್‌.