ಕ್ರೀಡಾಂಗಣ ಭರ್ತಿಯಾಗಿದೆ. ಅಭಿಮಾನಿಗಳ ಕೂಗು, ಬೆಂಗಳೂರಿನಾದ್ಯಂತ ಕೇಳಿಸುತ್ತಿದೆ. ಕಿಕ್ಕಿರಿದು ತುಂಬಿದ ಕ್ರೀಡಾಂಣದಲ್ಲಿ ಆರ್‌ಸಿಬಿ ತನ್ನ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

ಬೆಂಗಳೂರು(ಏ.02): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸದ್ದು ಜೋರಾಗಿದೆ. ಐಪಿಎಲ್ 2023 ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಹೋರಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ನಾಯಕನಾಗಿ ಫಾಫ್ ಡುಪ್ಲೆಸಿಸ್‌ಗೆ ಇದು 200ನೇ ಪಂದ್ಯವಾಗಿದೆ. ಇಷ್ಟೇ ಅಲ್ಲ ಆರ್‌ಸಿಬಿಗೆ ಇದು ಮಹತ್ವದ ಪಂದ್ಯವಾಗಿದೆ. 3 ವರ್ಷಗಳ ಬಳಿಕ ತವರಿನಲ್ಲಿ ಆರ್‌ಸಿಬಿ ಪಂದ್ಯ ಆಡುತ್ತಿದೆ. ಮುಂಬೈ ಇಂಡಿಯನ್ಸ್ ನಾಲ್ವರು ವಿದೇಶಿ ಆಟಗಾರರಿಗೆ ತಂಡದಲ್ಲಿ ಮಣೆ ಹಾಕಿದೆ. ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ಜೋಫ್ರಾ ಆರ್ಚರ್, ಜೇಸನ್ ಬೆಹನ್‌ಡ್ರಾಫ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 

ಆರ್‌ಸಿಬಿ ಪ್ಲೇಯಿಂಗ್ 11
ವಿರಾಟ್ ಕೊಹ್ಲಿ, ಫಾಪ್ ಡುಪ್ಲೆಸಿಸ್(ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಬ್ರೆಸ್‌ವೆಲ್, ಶಹಬಾಜ್ ಅಹಮ್ಮದ್, ದಿನೇಶ್ ಕಾರ್ತಿಕ್, ಕರಣ್ ಶರ್ಮಾ, ಹರ್ಷಲ್ ಪಟೇಲ್, ಅಕ್ಷದೀಪ್, ರೇಸೆ ಟೋಪ್ಲೆ, ಮೊಹಮ್ಮದ್ ಸಿರಾಜ್ 

ಐಪಿಎಲ್ ಪಂದ್ಯ ವೀಕ್ಷಣೆಗೆ ಕ್ರೀಡಾಂಗಣಕ್ಕೆ ತೆರಳುತ್ತಿದ್ದೀರಾ? ನಿಷೇಧಿತ ವಸ್ತುಗಳ ಲಿಸ್ಟ್‌ಗೆ ಮತ್ತೊಂದು ಸೇರ್ಪಡೆ!

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೆರಾ, ಹೃತಿಕ್ ಶೋಕಿನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಶದ್ ಖಾನ್ 

ಇಂದಿನ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಗೆಲುವಿನ ಅವಕಾಶ ಹೆಚ್ಚಿದೆ. ಇದಕ್ಕೆ ಕೆಲ ಕಾರಣಗಳಿವೆ. ಚಿನ್ನಸ್ವಾಮಿಯಲ್ಲಿ ಚೇಸಿಂಗ್ ತಂಡ ಹೆಚ್ಚಿನ ಯಶಸ್ಸು ಗಳಿಸಿದೆ. ಇಂದು ಟಾಸ್ ಗೆದ್ದಿರುವ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇತ್ತ ಆರ್‌ಸಿಬಿ ಆನ್ ಪೇಪರ್ ಬಲಿಷ್ಠ ತಂಡವಾಗಿ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ 2013ರಿಂದ ಇಲ್ಲೀವರೆಗೆ ಮುಂಬೈ ಇಂಡಿಯನ್ಸ್ ಪ್ರತಿ ಐಪಿಎಲ್ ಆವೃತ್ತಿಯ ಮೊದಲ ಪಂದ್ಯ ಸೋತಿದೆ. 

ಪಂದ್ಯ ಆರಂಭಗೊಂಡರೂ ಕ್ರೀಡಾಂಗಣ ಸುತ್ತ ಅಭಿಮಾನಿಗಳು ಜಮಾಯಿಸಿದ್ದಾರೆ. ಟಿಕೆಟ್ ಸಿಗಬಹುದೇನೋ ಅನ್ನೋ ಕೊನೆಯ ಆಸೆಯನ್ನಿಟ್ಟು ತಿರುಗಾಡುತ್ತಿರುವ ದೃಶ್ಯ ಕಂಡುಬರುತ್ತಿದೆ. ಕ್ರೀಡಾಂಗಣದ ಹೊರಭಾಗದ ಪ್ರತಿ ಗೇಟ್ ಬಳಿಯೂ ಅಭಿಮಾನಿಗಳು ನಿಂತಿದ್ದಾರೆ. ಕ್ರೀಡಾಂಗಣದ ಸುತ್ತ ಟ್ರಾಫಿಕ್ ಜಾಮ್ ಸಂಭವಿಸಿದೆ. 

IPL 2023 ಡೆಲ್ಲಿಯ ಡಗೌ​ಟ್‌​ನಲ್ಲಿ ರಿಷಭ್‌ ಪಂತ್‌ ಜೆರ್ಸಿ! ಫೋಟೋ ವೈರಲ್

ಬೆಂಗಳೂರು ಪಂದ್ಯದ ಕಾರಣ ಭಾರಿ ಭದ್ರತೆ ಒದಗಿಸಲಾಗಿದೆ. ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗಿದೆ. ಕ್ರೀಡಾಂಗಣದ ಸುತ್ತ ಮುತ್ತ ಸಿಸಿಟಿವಿ ಸೇರಿದಂತೆ ಎಲ್ಲಾ ಅತ್ಯಾಧುನಿಕ ವ್ಯವಸ್ಥೆ ಮೂಲಕ ಸುರಕ್ಷತೆಯನ್ನು ಕೈಗೊಂಡಿದೆ.