ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಸರ್ಪ್ರೈಸ್ ಕಾದಿತ್ತು. ಅಪಘಾತದಿಂದ ಗಾಯಗೊಂಡು ಚೇತರಿಸಿಕೊಳ್ಳುತ್ತಿದ್ದ ರಿಷಬ್ ಪಂತ್ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.  

ನದೆಹಲಿ(ಏ.04): IPL 2023 ಟೂರ್ನಿ ಅದ್ಧೂರಿಯಾಗಿ ಆರಂಭಗೊಂಡಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಭಿಮಾನಿಗಳು ನಾಯಕ ರಿಷಬ್ ಪಂತ್ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯಕ್ಕೆ ಆಗಮಿಸಿದ ಅಭಿಮಾನಿಗಳಿಗೆ ಸರ್ಪ್ರೈಸ್ ಕಾದಿತ್ತು. ಕಾರಣ ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ವಾಕ್ ಸ್ಟಿಕ್ ಹಿಡಿದು ರಿಷಬ್ ಪಂತ್ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ. ಇತ್ತ ಅಭಿಮಾನಿಗಳು ರಿಷಬ್ ಪಂತ್ ಹೆಸರು ಕೂಗಿ ಬೆಂಬಲ ಸೂಚಿಸಿದ್ದಾರೆ.

ಕಾರಿನ ಮೂಲಕ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಆಗಮಿಸಿದ ರಿಷಬ್ ಪಂತ್, ಬಳಿಕ ವಾಕ್ ಸ್ಟಿಕ್ ಹಿಡಿದು ನಿಧಾನವಾಗಿ ನಡೆದುಕೊಂಡು ಕ್ರೀಡಾಂಗಣಕ್ಕೆ ಆಗಮಿಸಿದರು.ಈ ವೇಳೆ ಇತರರ ನೆರವು ಪಡೆದು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ರಿಷಬ್ ಪಂತ್, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ರಿಷಬ್ ಪಂತ್ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಕ್ರೀಡಾಂಗಣದಲ್ಲಿ ಕಾಣಸಿಕೊಂಡಿರುವುದು ಅಭಿಮಾನಿಗಳ ಸಂತಸ ಇಮ್ಮಡಿಗೊಳಿಸಿದೆ.

IPL 2023 ಡೆಲ್ಲಿಯ ಡಗೌ​ಟ್‌​ನಲ್ಲಿ ರಿಷಭ್‌ ಪಂತ್‌ ಜೆರ್ಸಿ! ಫೋಟೋ ವೈರಲ್

ರಿಷಬ್ ಪಂತ್ ನೋಡಿದ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಡಗ್‌ ​ಔ​ಟ್‌ ಮೇಲೆ ರಿಷಬ್ ಪಂತ್ ಜರ್ಸಿಯನ್ನ ತೂಗು ಹಾಕಿತ್ತು. ಡೆಲ್ಲಿ ಫ್ರಾಂಚೈಸಿಯ ಈ ನಡೆಗೆ ಸಾಮಾ​ಜಿಕ ತಾಣ​ಗ​ಳಲ್ಲಿ ಭಾರೀ ಪ್ರಶಂಸೆ ವ್ಯಕ್ತ​ವಾ​ಗಿತ್ತು.

Scroll to load tweet…

ರಿಷಬ್ ಪಂತ್ ಸಾರ್ವಜನಿಕವಾಗಿ ಮೊದಲ ಬಾರಿ ಕಾಣಿಸಿಕೊಂಡರು ಸಾಮಾಜಿಕ ಜಾಲತಾಣಗಳಲ್ಲಿ ಚಿಕಿತ್ಸೆ ಹಾಗೂ ಚೇತರಿಕೆ ಕುರಿತು ಮಾಹಿತಿ ಹಂಚಿಕೊಂಡಿದ್ದರು. ಹೈಡ್ರೋಥೆರಪಿ ಚಿಕಿತ್ಸೆ ಪಡೆಯುತ್ತಿರುವ ಅವರು ಈಜುಕೊಳದೊಳಗೆ ನಡೆದಾಡುತ್ತಿರುವ ವಿಡಿಯೋವೊಂದನ್ನು ತಮ್ಮ ಟ್ವೀಟರ್‌, ಇನ್‌ಸ್ಟಾಂಗ್ರಾಂ ಖಾತೆಗಳ ಮೂಲಕ ಹಂಚಿಕೊಂಡಿದ್ದಾರೆ. 

Scroll to load tweet…

ಡೆಸೆಂಬರ್ 31ರ 2022ರಂದು ರಿಷಬ್ ಪಂತ್ ಭೀಕರ ಅಪಘಾತಕ್ಕೆ ತುತ್ತಾಗಿದ್ದರು. ರಾತ್ರಿ ರಿಷಭ್‌ ತಮ್ಮ ಮರ್ಸಿಡೀಸ್‌ ಕಾರನ್ನು ತಾವೇ ಚಾಲನೆ ಮಾಡುತ್ತಾ ದೆಹಲಿಯಿಂದ ಉತ್ತರಾಖಂಡದ ರೂರ್ಕೀ ಎಂಬಲ್ಲಿರುವ ತಮ್ಮ ನಿವಾಸಕ್ಕೆ ಹೊರಟಿದ್ದರು. ಹೊಸ ವರ್ಷವನ್ನು ತಾಯಿಯ ಜೊತೆ ಆಚರಿಸಲು, ಅವರಿಗೆ ಅಚ್ಚರಿ ನೀಡಲು ತೆರಳುತ್ತಿದ್ದರು. ಈ ವೇಳೆ ಬೆಳಗ್ಗಿನ ಜಾವ 5.30ರ ಸುಮಾರಿಗೆ ಮೊಹಮದ್‌ಪುರ ಎಂಬಲ್ಲಿ ಅಪಘಾತ ಸಂಭವಿಸಿತ್ತು. ಕ್ಷಣಾರ್ಧದಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಆದರೆ ಬೆಂಕಿ ಹೊತ್ತಿಕೊಳ್ಳುವ ಮುನ್ನ ಕೂದಲೆಳೆ ಅಂತರದಲ್ಲಿ ಪಂತ್‌ ಕಾರಿನ ಗಾಜು ಒಡೆದು ಹೊರಬಂದಿದ್ದು, ಬಹುದೊಡ್ಡ ಅಪಾಯದಿಂದ ಪಾರಾಗಿದ್ದರು. ಅವರ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದರೂ ಯಾವುದೇ ಮೂಳೆ ಮುರಿದಿಲ್ಲ. ಬೆಂಕಿಯಿಂದ ಸುಟ್ಟಗಾಯಗಳೂ ಆಗಿಲ್ಲ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದರು.

ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್‌ ಭೇಟಿಮಾಡಿದ ಭಜ್ಜಿ, ರೈನಾ, ಶ್ರೀಶಾಂತ್..!

ಮೆರ್ಸಿಡಿಸ್‌ ಕಂಪನಿಯ ದುಬಾರಿ ಕಾರಿನಲ್ಲಿ ತೆರಳುತ್ತಿದ್ದ ರಿಷಭ್‌ ಕಾರನ್ನು ಸ್ವತಃ ತಾವೇ ಚಲಾಯಿಸುತ್ತಿದ್ದರು. ಕಾರಿನಲ್ಲಿ ಒಬ್ಬರೇ ಇದ್ದಿದ್ದು, ಚಾಲನೆ ವೇಳೆ ನಿದ್ದೆಯ ಮಂಪರಿನಲ್ಲಿ ತೂಕಡಿಸಿದ್ದಾರೆ. ಹೀಗಾಗಿ ಕಾರು ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಹರಿದ್ವಾರ ನಗರ ಎಸ್‌ಪಿ ಎಸ್‌ಕೆ ಸಿಂಗ್‌ ತಿಳಿಸಿದ್ದಾರೆ. ಪಂತ್‌ ಕಾರನ್ನು ಅತಿವೇಗದಲ್ಲಿ ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಅಪಘಾತದ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಕೆಲ ಮೀಟರ್‌ ದೂರಕ್ಕೆ ಬಿದ್ದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಳ್ಳುವ ದೃಶ್ಯ ವಿಡಿಯೋದಲ್ಲಿದೆ. ರಿಷಭ್‌ ಕಾರು ಚಾಲನೆ ವೇಳೆ ಸೀಟ್‌ಬೆಲ್ಟ್‌ ಕೂಡಾ ಧರಿಸಿರಲಿಲ್ಲ ಎಂದು ಗೊತ್ತಾಗಿದೆ.