ಚೆನ್ನೈ ಸೂಪರ್ ಕಿಂಗ್ಸ್ ಎದುರು ವಿರೋಚಿತ ಸೋಲುಂಡ ಆರ್‌ಸಿಬಿಆರ್‌ಸಿಬಿ ಸೋಲಿನ ಬೆನ್ನಲ್ಲೇ ಚೆನ್ನೈ ಫ್ಯಾನ್ಸ್‌ಗಳಿಂದ ಟ್ರೋಲ್ ಮಾಡಲು ಯತ್ನಸಿಎಸ್‌ಕೆ ಫ್ಯಾನ್ಸ್‌ಗೆ ಖಡಕ್ ಉತ್ತರ ಕೊಟ್ಟ ಬೆಂಗಳೂರಿನ ಅಭಿಮಾನಿಗಳು
ಬೆಂಗಳೂರು(ಏ.18): ಐಪಿಎಲ್ ಟೂರ್ನಿಯ ಬದ್ದ ಎದುರಾಳಿಗಳೆಂದೇ ಬಿಂಬಿಸಲ್ಪಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಕೊನೆಗೂ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 8 ರನ್ ರೋಚಕ ಜಯ ಸಾಧಿಸಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ, ವಾಟ್ಸ್ ಆ್ಯಪ್ ಗ್ರೂಪ್‌ಗಳಲ್ಲಿ ಫ್ಯಾನ್ಸ್‌ಗಳು ಪರ-ವಿರೋಧದ ಚರ್ಚೆ ಮುಂದುವರೆದಿದೆ.
ಐಪಿಎಲ್ 16ನೇ ಆವೃತ್ತಿಯ ಬಹುನಿರೀಕ್ಷಿತ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಸೋಮವಾರ ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿತ್ತು. ಸಂಪೂರ್ಣ ಭರ್ತಿಯಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣ ರೋಚಕ ಪಂದ್ಯಕ್ಕೆ ಸಾಕ್ಷಿಯಾಯಿತು. ಸಮ ಪ್ರಮಾಣದಲ್ಲಿ ನೆರೆದಿದ್ದ ಎರಡೂ ತಂಡಗಳ ಅಭಿಮಾನಿಗಳು ತಮ್ಮ ಆಟಗಾರರನ್ನು ಹುರಿದುಂಬಿಸಿದರು.
ಎಂ.ಎಸ್.ಧೋನಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಹುತೇಕ ತಮ್ಮ ಕೊನೆಯ ಪಂದ್ಯವನ್ನಾಡಿದ ಕಾರಣ ಅಭಿಮಾನಿಗಳು ‘ಧೋನಿ... ಧೋನಿ...’ ಎಂದು ಕೂಗುತಾ ತಮ್ಮ ಅಭಿಮಾನ ಪ್ರದರ್ಶಿಸಿದರು.
ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ ಡೆವೊನ್ ಕಾನ್‌ವೇ(83) ಹಾಗೂ ಶಿವಂ ದುಬೆ(52) ಸ್ಪೋಟಕ ಅರ್ಧಶತಕದ ನೆರವಿನಿಂದ 6 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ಇನ್ನು ಸವಾಲಿನ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಓವರ್‌ನಲ್ಲೇ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಎರಡನೇ ಓವರ್ ಅಂತ್ಯದ ವೇಳೆಗೆ ಮಹಿಪಾಲ್ ಲೋಮ್ರಾರ್ ಕೂಡಾ ಪೆವಿಲಿಯನ್ ಸೇರಿದರು. 15 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಆರ್‌ಸಿಬಿ ತಂಡಕ್ಕೆ ಮೂರನೇ ವಿಕೆಟ್‌ಗೆ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಈ ಇಬ್ಬರ ವಿಕೆಟ್ ಪತನವಾಗುತ್ತಿದ್ದಂತೆಯೇ ನಾಟಕೀಯ ಕುಸಿತ ಕಾಣುವ ಮೂಲಕ ಆರ್‌ಸಿಬಿ 8 ವಿಕೆಟ್ ಕಳೆದುಕೊಂಡು 218 ರನ್ ಗಳಿಸಲಷ್ಟೇ ಶಕ್ತವಾಯಿತು.
RCB vs CSK: ಚೆನ್ನೈ ಸೂಪರ್ ಕಿಂಗ್ಸ್ ಮುಂದೆ ಮಂಡಿಯೂರಿದ ಆರ್‌ಸಿಬಿ ಬ್ಯಾಟಿಂಗ್ ಪರಾಕ್ರಮ
ಆರ್‌ಸಿಬಿ ಸೋಲುತ್ತಿದ್ದಂತೆಯೇ ಕರ್ನಾಟಕದಲ್ಲಿರುವ ಎಂ ಎಸ್ ಧೋನಿ ಹಾಗೂ ಚೆನ್ನೈ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್, ಆರ್‌ಸಿಬಿ ತಂಡವನ್ನು ಟ್ರೋಲ್ ಮಾಡಲು ಯತ್ನಿಸಿದ್ದಾರೆ. ಇದಕ್ಕೆ ರಾಯಲ್ ಚಾಲೆಂಜರಸ್ ಬೆಂಗಳೂರು ಫ್ಯಾನ್ಸ್, ಪಕ್ಕದ ಮನೆಯ ಫ್ಯಾನ್ಸ್‌ಗೆ ಮುಟ್ಟಿನೋಡಿಕೊಳ್ಳುವಂತಹ ತಿರುಗೇಟು ನೀಡಿದ್ದಾರೆ.
ಜಿಯೋದಲ್ಲಿ ಏಕಕಾಲಕ್ಕೆ 2.4 ಕೋಟಿ ಮಂದಿ ವೀಕ್ಷಣೆ!
ಆರ್‌ಸಿಬಿ ಚೇಸಿಂಗ್ ವೇಳೆ ಕೊನೆ ಓವರ್ನಲ್ಲಿ ಜಿಯೋ ಸಿನಿಮಾ ಆ್ಯಪ್ನಲ್ಲಿ ಏಕಕಾಲಕ್ಕೆ ಬರೋಬ್ಬರಿ 2.4 ಕೋಟಿ ಮಂದಿ ಪಂದ್ಯ ವೀಕ್ಷಿಸಿದರು. ಇದು ಹೊಸ ದಾಖಲೆ. ಕಳೆದ ವಾರ ರಾಜಸ್ಥಾನ ವಿರುದ್ಧ ಧೋನಿ-ಜಡೇಜಾ ಬ್ಯಾಟಿಂಗ್ ವೇಳೆ 2.2 ಕೋಟಿ ಮಂದಿ ಏಕಕಾಲಕ್ಕೆ ಪಂದ್ಯ ವೀಕ್ಷಿಸಿದ್ದು ದಾಖಲೆ ಎನಿಸಿತ್ತು.
ಆರ್‌ಸಿಬಿ ವಿರುದ್ಧ ಸಿಎಸ್‌ಕೆ ಗರಿಷ್ಠ ಮೊತ್ತ!
226 ರನ್ ಐಪಿಎಲ್‌ನಲ್ಲಿ ಆರ್‌ಸಿಬಿ ವಿರುದ್ಧ ಸಿಎಸ್‌ಕೆ ಗಳಿಸಿದ ಗರಿಷ್ಠ ರನ್ ಎನಿಸಿಕೊಂಡಿತು. ಇದಕ್ಕೂ ಮುನ್ನ 2022ರಲ್ಲಿ ಗಳಿಸಿದ್ದ 216 ರನ್ ಆರ್‌ಸಿಬಿ ವಿರುದ್ಧ ಸಿಎಸ್‌ಕೆ ದಾಖಲಿಸಿದ ಅತಿದೊಡ್ಡ ಮೊತ್ತವಾಗಿತ್ತು.
