ಲಖನೌ ಎದುರು 182 ರನ್ ಬಾರಿಸಿದ ಸನ್‌ರೈಸರ್ಸ್ ಹೈದರಾಬಾದ್ ಸ್ಪೋಟಕ ಬ್ಯಾಟಿಂಗ್ ನಡೆಸಿದ ಹೆನ್ರಿಚ್ ಕ್ಲಾಸೇನ್, ಅಬ್ದುಲ್ ಸಮದ್‌ಉಭಯ ತಂಡಗಳಿಗೂ ಮಹತ್ವದ ಪಂದ್ಯ
ಹೈದರಾಬಾದ್(ಮೇ.13): ಹೆನ್ರಿಚ್ ಕ್ಲಾಸೇನ್ ಹಾಗೂ ಅಬ್ದುಲ್ ಸಮದ್ ಮಿಂಚಿನ ಬ್ಯಾಟಿಂಗ್ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್‍ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಬಾರಿಸಿದ್ದು. ಲಖನೌ ಸೂಪರ್ ಜೈಂಟ್ಸ್‌ಗೆ ಸವಾಲಿನ ಗುರಿ ನೀಡಿದೆ.
ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಆದರೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಅಭಿಷೇಕ್ ಶರ್ಮಾ ಕೇವಲ 7 ರನ್ ಗಳಿಸಿ ಯುಧುವೀರ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ರಾಹುಲ್ ತ್ರಿಪಾಠಿ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಏಯ್ಡನ್ ಮಾರ್ಕರಮ್ ಕೇವಲ 20 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 28 ರನ್ ಬಾರಿಸಿ ವಿಕೆಟ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಗ್ಲೆನ್ ಫಿಲಿಫ್ಸ್(0) ಖಾತೆ ತೆರೆಯುವ ಮುನ್ನವೇ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.
IPL 2023: ಲಖನೌ ಎದುರು ಟಾಸ್ ಗೆದ್ದ ಸನ್‌ರೈಸರ್ಸ್ ಬ್ಯಾಟಿಂಗ್ ಆಯ್ಕೆ
ಒಂದು ಹಂತದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 115 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ಈ ಸಂದರ್ಭದಲ್ಲಿ ಜತೆಯಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೇನ್(47) ಹಾಗೂ ಅಬ್ದುಲ್ ಸಮದ್(37) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡ 180ರ ಗಡಿ ದಾಟುವಂತೆ ಮಾಡಿದರು. ಚುರುಕಿನ ಬ್ಯಾಟಿಂಗ್ ನಡೆಸಿದ ಹೆನ್ರಿಚ್ ಕ್ಲಾಸೇನ್ ಕೇವಲ 29 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 47 ರನ್ ಬಾರಿಸಿ ಆವೇಶ್ ಖಾನ್‌ಗೆ ವಿಕೆಟ್ ಒಪ್ಪಿಸಿದರೆ, ಅಬ್ದುಲ್ ಸಮದ್ 25 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 37 ರನ್ ಬಾರಿಸಿದರು.
ಲಖನೌ ಸೂಪರ್ ಜೈಂಟ್ಸ್ ತಂಡದ ಪರ ನಾಯಕ ಕೃನಾಲ್ ಪಾಂಡ್ಯ 24 ರನ್ ನೀಡಿ ಒಂದು ವಿಕೆಟ್ ಪಡೆದರೆ, ಯಧುವಿರ್ ಸಿಂಗ್, ಆವೇಶ್ ಖಾನ್, ಯಶ್ ಠಾಕೂರ್, ಅಮಿತ್ ಮಿಶ್ರಾ ತಲಾ ಒಂದೊಂದು ವಿಕೆಟ್ ಪಡೆದರು.
