ಐಪಿಎಲ್ ಟೂರ್ನಿ 2023ರಲ್ಲಿ ಗೆಲುವಿನ ಹಳಿಗೆ ಮರಳಲು ಯತ್ನಿಸುತ್ತಿರುವ ಲಖನೌ ಸೂಪರ್ ಜೈಂಟ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಲಖನೌ(ಏ.07): ಲಖನೌ ಸೂಪರ್ ಜೈಂಟ್ಸ್ ಕಳೆದ ಪಂದ್ಯದಲ್ಲಿ ಸೋಲಿಗೆ ಗುರಿಯಾಗಿದ್ದಾರೆ, ಇತ್ತ ಸನ್‌ರೈಸರ್ಸ್ ಹೈದರಾಬಾದ್ ಆಡಿದ 1 ಪಂದ್ಯದಲ್ಲಿ ಮುಗ್ಗರಿಸಿದೆ. ಹೀಗಾಗಿ ಉಭಯ ತಂಡಗಳಿಗೆ ಇಂದು ಗೆಲುವು ಬೇಕಾಗಿದೆ. ಈ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಹೈದರಾಬಾದ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಇತ್ತ ಲಖನೌ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಮಯಾಂಕ್ ಅಗರ್ವಾರ್, ಅನ್ಮೋಲ್‍‌ಪ್ರೀತ್, ರಾಹುಲ್ ತ್ರಿಪಾಠಿ, ಆ್ಯಡಿನ್ ಮಕ್ರಮ್(ನಾಯಕ), ಹ್ಯಾರಿ ಬ್ರೂಕ್, ವಾಶಿಂಗ್ಟನ್ ಸುಂದರ್, ಅಬ್ದುಲ್ ಸಮಾದ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ಅದಿಲ್ ರಶೀದ್

IPL ಪಾದಾರ್ಪಣೆ ಪಂದ್ಯದಲ್ಲೇ RCB ಬ್ಯಾಟರ್‌ಗಳನ್ನು ಕಾಡಿದ ಮಾಂತ್ರಿಕ ಸ್ಪಿನ್ನರ್ ಸುಯಾಶ್ ಶರ್ಮಾ ಯಾರು..?

ಲಖನೌ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11
ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡ, ಮಾರ್ಕಸ್ ಸ್ಟೊಯ್ನಿಸ್, ನಿಕೋಲಸ್ ಪೂರನ್, ರೊಮಾರಿಯೋ ಶೆಪರ್ಢ್, ಕ್ರುನಾಲ್ ಪಾಂಡ್ಯ, ಅಮಿತ್ ಮಿಶ್ರಾ, ಯಶ್ ಠಾಕೂರ್, ಜಯದೇವ್ ಉನದ್ಕಟ್, ರವಿ ಬಿಶ್ನೋಯ್ 

ಅಂಕಪಟ್ಟಿಯಲ್ಲಿ ಲಖನೌ ಸೂಪರ್ ಜೈಂಟ್ಸ್ 5ನೇ ಸ್ಥಾನದಲ್ಲಿದೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೈದರಾಬಾದ್ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೋರಾಟ ನಡೆಸಿತ್ತು. ಆದರೆ ಈ ಪಂದ್ಯದಲ್ಲಿ ರಾಜಸ್ಥಾನ 72 ರನ್ ಭರ್ಜರಿ ಗೆಲುವು ದಾಖಲಿಸಿತ್ತು. ಇತ್ತ ಲಖನೌ ಸೂಪರ್ ಜೈಂಟ್ಸ್ ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಹೋರಾಟ ಮಾಡಿತ್ತು. ಈ ಪಂದ್ಯದಲ್ಲಿ ಲಖನೌ 50 ರನ್ ಗೆಲುವು ದಾಖಲಿಸಿತ್ತು. ಈ ಮೂಲಕ ಲಖನೌ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಎರಡನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಿತ್ತು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗೆಲುವು ದಾಖಲಿಸಿತ್ತು.

ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಸಮತೋಲನದಿಂದ ಕೂಡಿದ್ದರೂ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಮೈದಾನದಲ್ಲಿ ಹೈದರಾಬಾದ್ ತಂಡದ ಸಮತೋಲನ ಕಂಡುಬರುತ್ತಿಲ್ಲ. ಹಿರಿಯ ಕ್ರಿಕೆಟಿಗರು ಹೆಚ್ಚು ಜವಾಬ್ದಾರಿಯುತ ಪ್ರದರ್ಶನ ನೀಡಬೇಕಿದೆ. ಇತ್ತ ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ನಾಯಕ ಕೆಎಲ್ ರಾಹುಲ್ ಫಾರ್ಮ್, ಮಧ್ಯಮ ಕ್ರಮಾಂಕದ ವೈಫಲ್ಯಗಳು ತಂಡದ ಫಲಿತಾಂಶದ ಮೇಲೆ ಹೊಡೆತ ನೀಡುತ್ತಿದೆ.